Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
December 31 Horoscope: ಗೃಹಿಣಿಯರ ಆರೋಗ್ಯದಲ್ಲಿ ನಿರ್ಲಕ್ಷ್ಯವೇ ನೋವಿಗೆ ಕಾರಣ!
ಮೇಷ ರಾಶಿ
ಮೇಷ ರಾಶಿ ಜನರಿಗೆ ಇಂದು ಉತ್ತಮ ಫಲಿತಾಂಶಗಳ ಪಡೆಯುವ ದಿನ. ನಿಮ್ಮ ಹಲವು ವಿಚಾರಗಳಲ್ಲಿ ಇಂದು ನೀವು ತೆಗೆದುಕೊಳ್ಳುವ ನಿರ್ಧಾರಗಳು ಅತ್ಯಂತ ಶುಭವಾಗುತ್ತದೆ. ದೊಡ್ಡ ಲಾಭದ ಕೆಲಸಗಳ ಮಾಡುವಿರಿ. ಆಪ್ತರೊಬ್ಬರಿಂದ ಹಣ ಬರಲಿದೆ.
ವೃಷಭ ರಾಶಿ
ವೃಷಭ ರಾಶಿ ಜನರಿಗೆ ಇಂದು ಸವಾಲುಗಳಿಂದ ತುಂಬಿದ ದಿನ. ಇಂದು ಯಾರಿಂದಾದರು ಸಹಾಯ ಪಡೆಯುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಒತ್ತಡಗಳ ಎದುರಿಸಬಹುದು. ನೆರೆ ಹೊರೆಯವರಿಂದ ಸಮಸ್ಯೆಗಳ ಎದುರಿಸಬಹುದು. ಪ್ರೀತಿಯ ವಿಚಾರದಲ್ಲಿ ನೋವಿನ ದಿನ ಆಗಬಹುದು.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಇಂದು ಮಿಶ್ರಫಲದ ದಿನ. ನಿಮಗೆ ಬರಬೇಕಿದ್ದ ಹಣ ನಿಮ್ಮ ಕೈ ಸೇರಬಹುದು. ವ್ಯಾಪಾರಿಗಳಿಗೆ ಇಂದು ಉತ್ತಮ ಧನಲಾಭದ ದಿನವಾಗಲಿದೆ. ಆಪ್ತರೊಂದಿಗೆ ನಿಮ್ಮ ಸಂಬಂಧ ಗಟ್ಟಿಯಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಇಂದು ಪ್ರಯಾಣಗಳ ಮಾಡಬೇಕಾದ ದಿನ, ನೀವು ಯಾರಿಂದಾದರು ಹಣ ಪಡೆದಿದ್ದರೆ ಮರಳಿ ನೀಡುವುದು ಉತ್ತಮ. ಗೃಹಿಣಿಯರ ಆರೋಗ್ಯದಲ್ಲಿ ಏರುಪೇರು ಸಂಭವ. ಪ್ರೇಮಿಗಳಿಗೆ ಉತ್ತಮ ದಿನ.
ಸಿಂಹ ರಾಶಿ
ಸಿಂಹ ರಾಶಿ ಜನರಿಗೆ ಇಂದು ಉತ್ತಮ ದಿನ. ನೀವು ಮಾಡಬೇಕಿದ್ದ ವ್ಯವಹಾರದಲ್ಲಿ ನಿಮಗೆ ಸುಲಭವ ಯಶಸ್ಸುಗಳಿವೆ. ಪ್ರೀತಿಯ ವಿಚಾರದಲ್ಲಿ ಮಧುರ ದಿನವಾಗುತ್ತದೆ. ಯಾರಿಂದಾದರು ಹಣ ಪಡೆಯುವ ನಿಮ್ಮ ಬಯಕೆ ಈಡೇರಲಿದೆ. ವ್ಯಾಪಾರದಲ್ಲಿ ಲಾಭವಿದೆ. ಪ್ರಯಾಣದಲ್ಲಿ ಎಚ್ಚರಿಕೆ ಇಡಿ.
ಕನ್ಯಾ ರಾಶಿ
ಕನ್ಯಾ ರಾಶಿ ಜನರಿಗೆ ಇಂದು ಪ್ರಯಾಣಗಳ ಮಾಡುವಿರಿ. ಗೃಹಿಣಿಯರ ಆರೋಗ್ಯ ವಿಚಾರದಲ್ಲಿನ ನಿರ್ಲಕ್ಷ್ಯವು ದೊಡ್ಡ ಪಾವತಿಗೆ ಕಾರಣವಾಗಬಹುದು. ನಿಮ್ಮ ಹಲವು ಹಣಕಾಸಿನ ವಿಚಾರಗಳಲ್ಲಿ ಸ್ವಾವಲಂಭಿಗಳಾಗುವಿರಿ.
ತುಲಾ ರಾಶಿ
ತುಲಾ ರಾಶಿ ಜನರಿಗೆ ಈ ದಿನ ಬಹಳ ಲಾಭವಿದೆ. ಯಾರಿಂದಾದರು ಬರಬೇಕಿದ್ದ ಹಣ ನಿಮ್ಮ ಕೈ ಸೇರಲಿದೆ. ಪ್ರೇಮಿಗಳಿಗೆ ಈ ದಿನ ನೆನಪಿನಲ್ಲಿ ಉಳಿಯಲಿದೆ. ಸರ್ಕಾರಿ ಉದ್ಯೋಗದಲ್ಲಿರುವ ಮಂದಿ ತಮ್ಮ ಖರ್ಚುಗಳ ಮೇಲೆ ಹಿಡಿತ ಸಾಧಿಸಬೇಕಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರಲ್ಲಿ ಇಂದು ಉತ್ತಮ ದಿನ. ಸಾಲದ ಸಮಸ್ಯೆಯಲ್ಲಿದ್ದರೆ ಇಂದು ಒತ್ತಡದಿಂದ ಕೂಡಿರಬಹುದು. ವ್ಯಾಪಾರದ ಕ್ಷೇತ್ರದಲ್ಲಿ ಹೊಸ ಆರಂಭಗಳಿವೆ. ವಾಹನ ಸಂಬಂಧಿತ ವಿಚಾರವು ನಿಮ್ಮ ಬಯಕೆಯನ್ನು ಈಡೇರಿಸಲಿವೆ. ಖರೀದಿ ಮತ್ತು ಮಾರಾಟ ಕ್ಷೇತ್ರದಲ್ಲಿ ಲಾಭವಿದೆ.
ಧನು ರಾಶಿ
ಧನು ರಾಶಿ ಜನರಿಗೆ ಈ ದಿನವು ಅನುಕೂಲಕರವಾಗಿರಲಿದೆ. ಮನೆಯ ವಾತಾವರಣವು ಮಧುರವಾಗಿರಲಿದೆ. ಬಹು ಸಮಯದಿಂದ ಬಾಕಿ ಉಳಿಸಿಕೊಂಡಿದ್ದ ಕೆಲಸವೊಂದನ್ನು ಪೂರ್ಣ ಮಾಡುವಿರಿ. ನಿಮ್ಮಲ್ಲಿ ಹಣಕಾಸಿನ ವಿಚಾರವಾಗಿ ಇದ್ದಂತಹ ಸಮಸ್ಯೆಯೊಂದು ಬಗೆಹರಿಯಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಇಂದು ಸವಾಲುಗಳಿಂದ ತುಂಬಿರಬಹುದು. ನಿಮ್ಮ ಪ್ರಯಾಣವು ಅನ್ಯ ಕಾರಣದಿಂದಾಗಿ ಮುಂದೂಡಬಹುದು. ಪ್ರೇಮಿಗಳು ಈ ದಿನ ದೊಡ್ಡ ಸವಾಲು ಎದುರಿಸಬಹುದು, ತಂದೆ ತಾಯಿಯ ಆರೋಗ್ಯ ಹದಗೆಡಬಹುದು. ಖರ್ಚುಗಳನ್ನು ಇಂದು ನಿಯಂತ್ರಿಸಿ.
ಕುಂಭ ರಾಶಿ
ಕುಂಭ ರಾಶಿ ಜನರಿಗೆ ಈ ದಿನವು ಅನುಕೂಲಗಳ ತರಲಿದೆ. ಯಾರಿಂದಾದರು ಹಣ ಪಡೆಯುವ ನಿಮ್ಮ ಬಯಕೆ ಈಡೇರಲಿದೆ. ಸರ್ಕಾರಿ ನೌಕರರು ದಿನದ ಅಂತ್ಯದಲ್ಲಿ ಶುಭ ಸುದ್ದಿ ಕೇಳಬಹುದು.
ಮೀನ ರಾಶಿ
ಮೀನ ರಾಶಿ ಜನರಿಗೆ ಈ ದಿನವು ಹಲವು ರೀತಿಯಲ್ಲಿ ಶುಭ ತರಲಿದೆ. ವಾಹನ ವಿಚಾರದಲ್ಲಿ ನೀವು ಅಂದುಕೊಂಡ ಕೆಲಸ ನೆರವೇರಲಿದೆ. ಆಪ್ತರೊಬ್ಬರ ಕೆಲಸಕ್ಕೆ ನೀವು ಪ್ರಯಾಣ ಮಾಡುವಿರಿ. ಅನಗತ್ಯ ಚರ್ಚೆಗಳು ಅಥವಾ ಗಲಾಟೆಗಳಲ್ಲಿ ತೊಡಗಬೇಡಿ.



Click it and Unblock the Notifications










