Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಡಿಸೆಂಬರ್ 6 ದಿನ ಭವಿಷ್ಯ: ವಿವಾಹ ಪಂಚಮಿ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಡಿಸೆಂಬರ್ 6, ವಿವಾಹ ಪಂಚಮಿ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನನೀವು ಜಾಗ್ರತೆವಹಿಸಬೇಕು, ಕೆಲಸದಲ್ಲಿ ತಪ್ಪಾಗದಂತೆ ನೋಡಿಕೊಳ್ಳಿ, ನಿಮಗೆ ಒಪ್ಪಿಸಿದ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ನಿಮ್ಮ ಹಾಗೂ ಸಂಗಾತಿ ನಡವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕ ಒತ್ತಡ ಹೆಚ್ಚಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ.ಈ ದಿನ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಹೂಡಿಕೆಗೂ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿದರೆ ಮನೆಯ ವಾತಾವರಣ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಜೀವನದಲ್ಲಿ ವಿರೋಧಿಗಳ ಬಗ್ಗೆ ಜಾಗ್ರತೆವಹಿಸಿ, ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆವಹಿಸಿ, ಯಾವುದೇ ವ್ಯವಹಾರ ಮಾಡುವುದಾದರೂ ಬಜೆಟ್ ಪ್ರಕಾರ ಖರ್ಚು ಮಾಡಿ. ನಿಮ್ಮ ಹಾಗೂ ಸಂಗಾತ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಈ ದಿನ ಖುಷಿಯಿಂದ ಕಳೆಯುತ್ತೀರಿ.
ಕನ್ಯಾ ರಾಶಿ
ಈ ದಿನ ಕೆಲಸದಲ್ಲಿ ನೀವು ಜಾಗ್ರತೆವಹಿಸಬೇಕು. ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ಲಾಭದಾಯಕವಾಗಿರಲಿದೆ, ವ್ಯಾಪಾರಸ್ಥರಿಗೆ ಈ ದಿನ ಧನಾತ್ಮಕವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಿ. ನೀವು ಸ್ನೇಹಿತರನ್ನು ಭೇಟಿಯಾಗಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದಲ್ಲಿ ಕೆಲ ಸವಾಲುಗಳನ್ನು ಎದುರಿಸಬಹುದು. ನೀವು ಈ ಹಿಂದೆ ಮಾಡಿದ ತಪ್ಪೇ ಮಾಡದಂತೆ ಜಾಗ್ರತೆವಹಿಸಿ. ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಪೂರ್ವಜರ ಆಸ್ತಿಯಿಂದ ಲಾಭ ಗಳಿಸಲು ಸಾಧ್ಯವಾಗುವುದು. ಯಾರನ್ನೂ ಕುರುಡಾಗಿ ನಂಬಬೇಡಿ, ಕೆಲಸದಲ್ಲಿ ಸಮಸ್ಯೆ ಬಗೆಹರಿಯಲಿದೆ,ಈ ದಿನ ನೀವಾಡುವ ಮಾತುಗಳನ್ನು ನಿಯಂತ್ರಿಸಬೇಕು.
ಮಕರ ರಾಶಿ
ಆರೋಗ್ಯದಲ್ಲಿ ಈ ದಿನ ನೀವು ಜಾಗ್ರತೆವಹಿಸಬೇಕು, ಚಿಕ್ಕ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಬೇಕು. ಕೆಲಸದಲ್ಲಿ ನೀವು ಕೆಲ ಶುಭ ಸುದ್ದಿ ಪಡೆಯಬಹುದು.
ಕುಂಭ ರಾಶಿ
ಈ ದಿನ ನೀವು ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು.ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ, ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಸಂಬಂಧದ ಕಡೆಗೆ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ತಪ್ಪಿಸಲು ಸಲಹೆ ನೀಡಲಾಗುವುದು.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವೃತ್ತಿ ಸಂಬಂಧಸಿದಂತೆ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಪ್ರತಿಕೂಲ ಸಂದರ್ಭದಲ್ಲಿ ಸಂಗಾತಿಯ ಬೆಂಬಲ ಸಿಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications