Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ಸೆಪ್ಟೆಂಬರ್ 1, ದಿನ ಭವಿಷ್ಯ: ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ ತಿಂಗಳ ಮೊದಲ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ನೀವು ವೈಯಕ್ತಿಕ ಅಥವಾ ವೃತ್ತಿಪರ ಜೀವನದಲ್ಲಿ ತೊಂದರೆಗಳನ್ನು ಎದುರಿಸಬಹುದು.ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿರಿ. ಯಾವುದೇ ನಿರ್ಧಾರವಾದರು ಸರಿ ಆತುರದಿಂದ ತೆಗದುಕೊಳ್ಳಬೇಡಿ. ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಚಿಂತೆಗಳು ಶೀಘ್ರವೆ ದೂರಾಗಲಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರ್ಥಿಕ ಸಮಸ್ಯೆ ದೂರಾಗಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಮಾಡಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಹೆಚ್ಚಿನ ಕೆಲಸದ ಹೊರೆಯಿಂದ ನೀವು ಸಮಸ್ಯೆಗಳನ್ನು ಎದುರಿಸಬಹುದು. ಕುಟುಂಬ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಿಮ್ಮ ಪ್ರೀತಿಪಾತ್ರರ ಜೊತೆ ಮುಕ್ತವಾಗಿ ಮಾತನಾಡಿ. ಆರೋಗ್ಯ ಸುಧಾರಿಸಬಹುದು.
ಕರ್ಕ ರಾಶಿ
ಕೆಲಸದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಯಶಸ್ವಿಯಾಗುತ್ತದೆ. ಉದ್ಯೋಗದಲ್ಲಿರುವವರು ಹೆಚ್ಚು ಶ್ರಮಪಡಬೇಕಾಗುತ್ತದೆ. ಕುಟುಂಬ ಜೀವನ ಚೆನ್ನಾಗಿರಬೇಕು, ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಿರಲು ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಕೆಲಸ-ಸಂಬಂಧಿತ ಪ್ರಯತ್ನಗಳಿಂದ ಆತ್ಮ ವಿಶ್ವಾಸದಲ್ಲಿ ಕುಸಿತ ಉಂಟಾಗಬಹುದು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಆರೋಗ್ಯ ದುರ್ಬಲವಾಗಿರುತ್ತದೆ.
ಕನ್ಯಾ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸದ ಕಡೆಗೆ ಗಮನಹರಿಸಿರುವುದರಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.
ತುಲಾ ರಾಶಿ
ಕೆಲಸದಲ್ಲಿ ಒತ್ತಡ ಇರಲಿದೆ. ಖರ್ಚು ಹೆಚ್ಚಿರಲಿದೆ, ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದ ಜೊತೆಗೆ ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ನೀವು ವಾದಗಳನ್ನು ತಪ್ಪಿಸಬೇಕು. ಅಂತಹ ವಿಷಯಗಳು ನಿಮ್ಮ ಕೆಲಸದ ಜೊತೆಗೆ ನಿಮ್ಮ ಇಮೇಜ್ ಕೂಡ ಹಾಳು ಮಾಡುವುದು, ಅದ್ದರಿಂದ ಜಾಗ್ರತೆವಹಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಕಪವನ್ನು ನಿಯಂತ್ರಿಸಿದರೆ ಒಳ್ಳೆಯದು, ಆರೋಗ್ಯ ಕ್ಷೀಣಿಸಬಹುದು.
ಧನು ರಾಶಿ
ಪಡೆಯಬಹುದು. ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸುವವರಿಗೆ ಶೀಘ್ರದಲ್ಲಿಯೇ ಉತ್ತಮ ಅವಕಾಶ ಸಿಗಬಹುದು. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ನೀವು ಪರಿಹಾರವನ್ನು ಪಡೆಯಬಹುದು. ಕೆಲಸದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಮನೆಯಲ್ಲಿ ನಡೆಯುತ್ತಿರುವ ಒತ್ತಡವು ಕೊನೆಯಾಗುವುದು, ಸಂಬಂಧಗಳು ಸುಧಾರಿಸುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಮನೆಯಲ್ಲಿ ಒತ್ತಡದ ವಾತಾವರಣ ಇರುತ್ತದೆ. ನೀವು ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಲ್ಲ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಜಾಗರೂಕರಾಗಿರಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ .
ಮೀನ ರಾಶಿ
ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶ ಪಡೆಯುತ್ತೀರಿ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು. ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ನಿಮ್ಮ ಚಿಂತೆಗೆ ಕಾರಣವಾಗಬಹುದು. ನಿಮ್ಮ ನಡುವೆ ಭಿನ್ನಾಭಿಪ್ರಾಯ ಕಡಿಮೆ ಮಾಡಲು ಪ್ರಯತ್ನಿಸಿ, ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











