Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ಸೆಪ್ಟೆಂಬರ್ 10, ದಿನ ಭವಿಷ್ಯ: ಮಂಗಳವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೊತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 10, ಮಂಗಳವಾರದ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ಕೆಲ ಸಮಸ್ಯೆಗಳಿರಬಹುದು, ಆದರೆ ಗಾಬರಿಯಾಗದೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಈ ದಿನ ಖರ್ಚು ಹೆಚ್ಚಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವಿವಾದಾತ್ಮಕ ವಿಷಯಗಳನ್ನು ಸಂಗಾತಿಯ ಜೊತೆ ಚರ್ಚೆ ಮಾಡಲು ಹೋಗದಿರುವುದು ಒಳ್ಳೆಯದು.

ವೃಷಭ ರಾಶಿ
ನಿಮ್ಮ ಕುಟುಂಬ ವಿಷಯಕ್ಕೆ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಲಿದೆ, ಅಲ್ಲದೆ ಆರ್ಥಿಕವಾಗಿಯೂ ಈ ಅವಧಿ ಉತ್ತಮವಲ್ಲ. ಇನ್ನು ಸಂಬಮದದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ. ಮಾನಸಿಕ ಒತ್ತಡ ಹೊರಹಾಕಲು ಧ್ಯಾನ ಮಾಡಿ.
ಮಿಥುನ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ತಂದೆಗೆ ಆರೋಗ್ಯ ಸಮಸ್ಯೆ ಇದ್ದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಕೆಲಸದ ಕಡೆಗೆ ನೀವು ಹೆಚ್ಚಿನ ಗಮನಹರಿಸಬೇಕು. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಬೇಡ.
ಮನೆಯಲ್ಲಿ ಒತ್ತಡದ ವಾತಾವರಣ ಚೆನ್ನಾಗಿರಲಿದೆ, ಆದರೆ ನಿಮ್ಮ ಸಂಗಾತಿ ಈ ದಿನ ಬೇಸರದಿಂದ ಇದ್ದರೆ ಅವರ ಮನಸ್ಸು ಅರಿತು ಬೆಂಬಲ ನೀಡಿದರೆ ಒಳ್ಳೆಯದು. ಆರೋಗ್ಯ ಸಮಸ್ಯೆ ಇದ್ದರೆಎ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಬೇಡದ ವಿಷಯಗಳಲ್ಲಿ ಸಮಯ ಕಳೆಯಬೇಡಿ. ಆರ್ಥಿಕ ನಷ್ಟ ಉಂಟಾಗಬಹುದು. ವ್ಯಾಪಾರಿಗಳು ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೀತಿಸುತ್ತಿದ್ದರೆ ನಿಮ್ಮ ಪ್ರೀತಿಯ ಬಗ್ಗೆ ಹೇಳಿ ಮದುವೆಗೆ ಅನುಮತಿ ಪಡೆಯಲು ಈ ದಿನ ಉತ್ತಮವಾಗಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ನೀವು ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ಆತುರ-ಕೋಪದಿಂದ ವರ್ತಿಸಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಏನಾದರು ಭಿನ್ನಾಭಿಪ್ರಾಯವಿದ್ದರೆ ಸರಿ ಹೋಗಲಿದೆ. ಆರೋಗ್ಯಕ್ಕಾಗಿ ಯೋಗ, ಧ್ಯಾನ ಸೇರಿಸಿ.
ತುಲಾ ರಾಶಿ
ಮನೆಯಲ್ಲಿ ಯಾವುದೇ ಗಂಭೀರ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಅನಗ್ಯತ ಚಿಂತೆಗಳಿಂದ ದೂರವಿರಿ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ, ನಿಮ್ಮ ಮಾತಿನಿಂದ ಅವರನ್ನು ನೋಯಿಸಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಆರ್ಥಿಕ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ನಿಮಗೆ ಸಂಬಂಧಿಸಿದ ಹಲವಾರು ವಿಷಯಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬೇಡಿ. ಕೆಲಸದ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಬೇಡಿ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಒಳ್ಳೆಯದು. ನಿಮ್ಮ ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ, ಅರೋಗ್ಯದಲ್ಲಿ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಈ ದಿನ ಬಾಕಿಯಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ವೈವಾಹಿಕ ಬದುಕು, ಪ್ರೀತಿ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಕುಂಭ ರಾಶಿ
ಪ್ರತಿಕೂಲ ಸಂದರ್ಭಗಳಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ದೊಡ್ಡ ಹಣಕಾಸಿನ ವಹಿವಾಟುಗಳನ್ನು ಮಾಡಲು ಸಮಯ ಸೂಕ್ತವಲ್ಲ. ಲಾಭದ ಬದಲು ನಷ್ಟವಾಗಬಹುದು. ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ನಿಮ್ಮ ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ.
ಮೀನ ರಾಶಿ
ಕೆಲಸದ ಸ್ಥಳದಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಬಹಳ ಎಚ್ಚರಿಕೆಯಿಂದ ಮಾಡಿದರೆ ಒಳ್ಳೆಯದು. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲಸದ ಜೊತೆಗೆ ನಿಮ್ಮ ಪ್ರೀತಿಪಾತ್ರರ ಬಗ್ಗೆಯೂ ಗಮನ ಹರಿಸಬೇಕು. ಅರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











