Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 11, ದಿನ ಭವಿಷ್ಯ: ಶುಭ ದಿನ, ಬುಧವಾರ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 11, ಮಂಗಳವಾರದ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಆರ್ಥಿಕ ಲಾಭ ಸಿಗಲಿದೆ. ಕೆಲಸಗಳಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಕೂಡ ಈ ದಿನ ಉತ್ತಮವಾಗಿದೆ.

ವೃಷಭ ರಾಶಿ
ದಿನದ ಆರಂಭವು ತುಂಬಾ ಧನಾತ್ಮಕವಾಗಿರುತ್ತದೆ. ನೀವು ಮಾನಸಿಕವಾಗಿಯೂ ಉತ್ತಮವಾಗುತ್ತೀರಿ. ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ಈ ದಿನ ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸದೆ ನೀವೇ ಮಾಡಲು ಪ್ರಯತ್ನಿಸಿ. ಅವಾಹಿತರ ಮದುವೆ ಮಾತುಕತೆ ನಡೆಯಬಹುದು.
ಮಿಥುನ ರಾಶಿ
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಹೆಚ್ಚು ಖರ್ಚು ಮಾಡಬೇಡಿ, ವ್ಯಾಪಾರಿಗಲು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕೆಲಸ ಅಂತ ಕುಟುಂಬದ ಕಡೆ ನಿರ್ಲಕ್ಷ್ಯ ಮಾಡಬೇಡಿ, ಸಂಗಾತಿಗೂ ಸಮಯ ನೀಡಿ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಯಾವುದೇ ಕೆಲಸಕ್ಕೆ ಸಂಬಂಧಿಸಿದ ಚಿಂತೆಗೆ ಪರಿಹಾರ ಸಿಗಲಿದೆ, ಇದರಿಂದ ಸಮಧಾನ ಸಿಗುವುದು, ವ್ಯವಹಾರದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕುಟುಂಬ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಸಿಂಹ ರಾಶಿ
ಬೇರೆಯವರ ಜೊತೆ ಅನಗ್ಯತ ವಾದ ಮಾಡಲು ಹೋಗಬೇಡಿ. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ನಿಮ್ಮ ಕುಟುಂಬ ವಿಷಯದಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಡಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ಮನೆಯ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಿದೆ, ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಸಂಗಾತಿಯ ಜೊತೆ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಸ್ನೇಹಿತರನ್ನು ಭೇಟಿಯಾಗಬಹುದು, ಆರೋಗ್ಯ ಚೆನ್ನಾಗಿರಲಿದೆ.
.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು, ವ್ಯಾಪಾರಿಗಳು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ಏರಳಿತದ ಪರಿಸ್ಥಿತಿ ಇರಲಿದೆ, ಆದರೆ ನೀವು ಪ್ರತಿಕೂಲ ಸಂದರ್ಭಗಳಲ್ಲಿ ನೀವು ತಾಳ್ಮೆಯಿಂದಿರಬೇಕು. ವ್ಯಾಪಾರಿಗಳಿಗೆ ಈ ದಿನ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಕೆಲಸವನ್ನು ಯೋಜನೆಯಂತೆಯೇ ಪೂರ್ಣಗೊಳಿಸಬೆಕು, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ನಿರ್ಲಕ್ಷಿಸಬೇಡಿ.
ಧನು ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗುವುದು. ಬೇರೆ ಕಡೆಕೆಲಸಕ್ಕೆ ಸಂದರ್ಶನ ನೀಡಿದ್ದರೆ ಈ ದಿನ ಶುಭ ಸುದ್ದಿ ಪಡೆಯಬಹುದು. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ ಜಾಗರೂಕರಾಗಿರಿ . ಆರೋಗ್ಯಕ್ಕೆ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗಲಿದೆ. ಸಂಗಾತಿಯೊಂದಿಗೆ ನಡೆಯುತ್ತಿರುವ ಬಿರುಕು ಮಕ್ಕಳ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆರೋಗ್ಯ ಚೆನ್ನಾಗಿರಲಿದೆ
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ. ಇನ್ನು ನಿಮ್ಮ ಹಾಗೂ ಸಂಗಾತಿಯ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.
ಮೀನ ರಾಶಿ
ನಿಮ್ಮ ಸಂಬಂಧವು ಸುಧಾರಿಸುತ್ತದೆ. ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.
ಹಿರಿಯರ ಮಾತು ನಿರ್ಲಕ್ಷ್ಯ ಮಾಡಬೇಡಿ. ಈ ದಿನ ಸಮಯ ವ್ಯರ್ಥ ಮಾಡಬೇಡಿ. ಆರೋಗ್ಯ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications