ಸೆಪ್ಟೆಂಬರ್ 12, ದಿನ ಭವಿಷ್ಯ: ಗುರುವಾರದ ದಿನ ನಿಮ್ಮ ರಾಶಿಗೆ ನಿಮಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 12, ಗುರುವಾರದ ದಿನ ನಿಮಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ಕೆಲ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲ ಇದ್ದರೆ ನಿಮ್ಮ ಹಿರಿಯರ ಸಲಹೆ ಪಡೆಯುತ್ತೀರಿ. ಕೆಲಸದಲ್ಲಿ ನಿಮ್ಮ ಸ್ತಾನ ಬಲವಾಗಲಿದೆ. ಸಂಗಾತಿಯ ಜೊತೆಗೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಈ ದಿನ ನೀವು ನಕಾರಾತ್ಮಕತೆಯನ್ನು ಅನುಭವಿಸಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ಪ್ರೀತಿ , ನೆಮ್ಮದಿ ಇರಲಿದೆ.
ಅವಿವಾಹಿತರಾಗಿದ್ದರೆ ಮತ್ತು ನಿಮ್ಮ ದಾಂಪತ್ಯದಲ್ಲಿ ಕೆಲವು ಅಡಚಣೆಗಳಿದ್ದರೆ, ಈ ಸಮಸ್ಯೆಯನ್ನು ಪರಿಹರಿಸಬಹುದು. ಆರೋಗ್ಯ ಚೆನ್ನಾಗಿರಲಿದೆ.

ಮಿಥುನ ರಾಶಿ

ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಬೇಡಿ. ನಿಮ್ಮ ಸಂಗಾತಿಯ ಕಡೆಗೆ ಗಮನಹರಿಸಿ, ಅವರಿಗೆ ಸಮಯ ನೀಡಿ. ಅಲ್ಲದೆ ಅನಗ್ಯತ ವಿಷಯಗಳನ್ನು ಚರ್ಚಿಸಬೇಡಿ, ನಿಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ಕಡೆಗೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಈ ದಿನ ಕೆಲಸದ ಒತ್ತಡ ಇರಲಿದೆ. ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವ್ಯಾಪಾರಿಗಳು ಅಡೆತಡೆ ಉಂಟಾದರೆ ಚಿಂತೆ ಬಿಡಿ ಎಲ್ಲವೂ ಸರಿಯಾಗಲಿದೆ. ಕೆಲಸದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಭವಿಷ್ಯದಲ್ಲಿ ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ಖರ್ಚು ಅಧಿಕವಿರಲಿದೆ, ಹಣದ ಚಿಂತೆ ಕಾಡಬಹುದು. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಇನ್ನು ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸ ಬದಲಾಯಿಸಲು ಈ ಸಮಯ ಅಷ್ಟೊಂದು ಒಳ್ಳೆಯದಲ್ಲ, ಇನ್ನೂ ಸ್ವಲ್ಪ ಕಾಯುವುದು ಒಳ್ಳೆಯದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿನ ಆರೋಗ್ಯದ ಕಡೆಗೆ ಗಮನಹರಿಸಿ.

ಕನ್ಯಾ ರಾಶಿ

ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ಕೆಲಸಕ್ಕೆ ಸಂಬಂಧಿಸಿದ ಕೆಲ ಸಮಸ್ಯೆಗಳಿರಬಹುದು. ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಸಂಬಂಧ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ತುಲಾ ರಾಶಿ

ಈ ದಿನ ಅಪೂರ್ಣವಾದ ಕೆಲಸ ಪೂರ್ಣಗೊಳ್ಳಲಿದೆ. ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಯೋಜಿಸಬಹುದು. ಕೆಲಸದಲ್ಲಿ ಹೆಚ್ಚಿನ ಒತ್ತಡ ಹೆಚ್ಚಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಪ್ರೀತಿ ಹೆಚ್ಚಾಗಲಿದೆ. ಆರೋಗ್ಯ ತುಂಬಾ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ

ಕೆಲಸದಲ್ಲಿ ಹೆಚ್ಚು ಒತ್ತಡ ಇರಲಿದೆ. ಈ ಸಮಯದಲ್ಲಿ ಧನಾತ್ಮಕವಾಗಿರಬೇಕು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ದುಬಾರಿಯಾಗಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಿರಲಿದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಹಾಗು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಧನು ರಾಶಿ

ಧನು ರಾಶಿಯವರಿಗೆ ಈ ದಿನ ಶುಭವಾಗಿದೆ. ನಿಮ್ಮ ಕೆಲಸದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ದಿನ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.

ಮಕರ ರಾಶಿ

ಇಂದು ಕುಟುಂಬದೊಂದಿಗೆ ಉತ್ತಮ ದಿನವಾಗಿರುತ್ತದೆ. ಹೊಸ ಆಸ್ತಿಯನ್ನು ಖರೀದಿಸುವ ಯೋಜನೆ ಇರಬಹುದು. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆ ಕಂಡು ಬರಲಿದೆ, ವೈಯಕ್ತಿಕ ಬದುಕಿನಲ್ಲಿ ಖುಷಿ, ನೆಮ್ಮದಿ ಇರಲಿದೆ. ಆರೋಗ್ಯದಲ್ಲಿ ಮಿಶ್ರಫಲ.

ಕುಂಭ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ಹಣದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ಬೇಡ. ನೀವು ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಬೇಕು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಸಂಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ, ಆರೋಗ್ಯ ದುರ್ಬಲವಾಗಿರುತ್ತದೆ.

ಮೀನ ರಾಶಿ

ಕೋಪ ನಿಯಂತ್ರಿಸಿ, ಅನಗ್ಯತ ಚಿಂತನೆಗಳಿಂದ ದೂರವಿರಿ, ಆರ್ಥಿಕವಾಗಿಯೂ ಈ ದಿನ ಉತ್ತಮವಲ್ಲ. ಕೆಲಸದ ಕಡೆಗೆ ಗಮನಹರಿಸಿ. ಸಂಬಂಧಗಳಲ್ಲಿ ಪ್ರೀತಿ ಮತ್ತು ಮಾಧುರ್ಯವನ್ನು ಕಾಪಾಡಿಕೊಳ್ಳಲು, ನಿಮ್ಮ ನಡವಳಿಕೆಯನ್ನು ನೀವು ಕಾಳಜಿ ವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya 12 September: Aries to Pisces Horoscope Prediction Today for all zodiacs in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
X
Desktop Bottom Promotion