Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ
ದಿನ ಭವಿಷ್ಯ: ಜೂನ್ 13, ಈ ದಿನ ನಿಮ್ಮ ರಾಶಿಫಲ ಹೇಗಿದೆ?
ಶುಭ ಗುರುವಾರ, ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡೋಣ:
ಮೇಷ ರಾಶಿ
ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ನೀವು ಕಛೇರಿಯಲ್ಲಿ ಯಾವುದೇ ಕೆಲಸ ಬಾಕಿ ಇದ್ದರೆ, ಇಂದು ಅದನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ, ವ್ಯಾಪಾರಿಗಳು ಕಾನೂನು ಬಾಹಿರ ಚಟುವಟಿಕೆ ಮಾಡದಿರಿ, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯಕ್ಕಾಗಿ ಆಹಾರಕ್ರಮದತ್ತ ಗಮನಹರಿಸಿ.

ವೃಷಭ ರಾಶಿ
ಈ ದಿನ ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ, ಸಂಗಾತಿ ಜೊತೆ ಶಾಪಿಂಗ್ ಕೂಡ ಮಾಡುತ್ತೀರಿ, ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ, ವ್ಯಾಪಾರಸ್ಥರು ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗಬಹುದು. ಆದರೆ ಅದರಿಂದ ಉತ್ತಮ ಲಾಭ ಸಿಗುವ ಸಾಧ್ಯತೆ ಇದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ದಿನ ಬಹಳ ಜಾಗ್ರತೆವಹಿಸಿ, ಅಲ್ಲದೆ ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಉದ್ಯೋಗ ಬದಲಾವಣೆ ಮಾಡಬೇಕೆಂದಿದ್ದರೆ ಆತುರ ಪಡಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡಿದರೆ ಒಳ್ಳೆಯದು.
ಸಿಂಹ ರಾಶಿ
ನಿಮ್ಮ ಕೌಟುಂಬಿಕ ಜೀವನದಲ್ಲಿ ನೀವು ಹೆಚ್ಚು ಗಮನ ಹರಿಸಬೇಕು. ಈ ದಿನ ಆರೋಗ್ಯ ಸ್ವಲ್ಪ ದುರ್ಬಲವಾಗಿರಲಿದೆ, ಆದ್ದರಿಂದ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರವನ್ನು ತುಂಬಾ ಜಾಗ್ರತೆಯಿಂದ ತೆಗೆದುಕೊಳ್ಳಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ವಿವಾದಗಳನ್ನು ತಪ್ಪಿಸಲು ಸಲಹೆ ನೀಡಲಾಗಿದೆ, ಅಜಾಗರೂಕತೆಯಿಂದ ಆರೋಗ್ಯ ಹದಗೆಡುತ್ತದೆ.
ಕನ್ಯಾ ರಾಶಿ
ನಿಮ್ಮ ವರ್ತನೆ ನಿಮ್ಮ ಪ್ರೀತಿಪಾತ್ರರನ್ನು ಅತೃಪ್ತಿಗೊಳಿಸಬಹುದು. ಕೆಲಸದಲ್ಲಿ ಈ ದಿನ ಶುಭವಾಗಿದೆ. ನಿಮ್ಮ ವೃತ್ತಿ ಬದುಕಿನಲ್ಲಿ ಶೀಘ್ರದಲ್ಲೇ ನೀವು ಕೆಲವು ದೊಡ್ಡ ಬದಲಾವಣೆಗಳನ್ನು ನೋಡುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಆದರೆ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ವಿಷಯದಲ್ಲಿ ದಿನವು ಮಿಶ್ರಫಲ.
ತುಲಾ ರಾಶಿ
ಹಣದ ವಿಷಯದಲ್ಲಿ ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ನೀವು ಅನಗತ್ಯ ಖರ್ಚುಗಳನ್ನುತಪ್ಪಿಸಬೇಕು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ವ್ಯಾಪಾರಿಗಳ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ಇಂದು ನೀವು ನಿಮ್ಮ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಸಂಪೂರ್ಣ ಸಕಾರಾತ್ಮಕತೆ ಮತ್ತು ಆತ್ಮವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಆಪ್ತರ ಸಲಹೆ ಪಡೆಯಿರಿ, ನೀವು ಪ್ರೇಮ ವಿವಾಹ ಆಗಬೇಕೆಂದಿದ್ದರೆ ಸ್ವಲ್ಪ ಕಾಯುವುದು ಒಳ್ಳೆಯದು. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಯಾರನ್ನೂ ಕುರುಡಾಗಿ ನಂಬಬೇಡಿ ಎಂಬ ಸಲಹೆ ನೀಡಲಾಗುವುದು. ಆರೋಗ್ಯದಲ್ಲಿ ಚಿಕ್ಕ ಪುಟ್ಟ ಸಮಸ್ಯೆಗಳಿರಬಹುದು.
ಧನು ರಾಶಿ
ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ಘರ್ಷಣೆಯನ್ನು ತಪ್ಪಿಸಲು ಸಲಹೆ ನೀಡಲಾಗುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಆದಾಯ ಚೆನ್ನಾಗಿರಲಿದೆ. ಕೆಲಸದ ಜೊತೆಗೆ ಆರೋಗ್ಯದ ಕಡೆಗೂ ಗಮನ ಕೊಡಿ ಇಲ್ಲದಿದ್ದರೆ ಕಷ್ಟವಾಗಬಹುದು.
ಮಕರ ರಾಶಿ
ರಾಜಕಾರಣಿಗಳಿಗೆ ಇಂದು ಅದೃಷ್ಟದ ದಿನವಾಗಿದೆ. ನಿಮ್ಮಗೌರವ ಹೆಚ್ಚಾಗುತ್ತದೆ . ನೀವು ಉದ್ಯೋಗದಲ್ಲಿದ್ದರೆ ಮತ್ತು ಕೆಲಸಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರ ಬಗ್ಗೆ ನಿಮ್ಮ ಮೇಲಾಧಿಕಾರಿ ಜೊತೆ ಚರ್ಚೆ ಮಾಡುವುದು ಒಳ್ಳೆಯದು. ಹಣದ ವಿಷಯದಲ್ಲಿ ಇಂದು ತುಂಬಾ ದುಬಾರಿ ದಿನವಾಗಲಿದೆ. ಖರ್ಚು ಹೆಚ್ಚಿರಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸಿದರೆ ಈ ದಿನ ನಿಮಗೆ ಮುಖ್ಯವಾಗಿದೆ. ಇಂದು ನೀವು ಎಲ್ಲೋ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯಬಹುದು. ಹಣದ ವಿಷಯದಲ್ಲಿ ಅದೃಷ್ಟದ ದಿನ. ಕಡಿಮೆ ಶ್ರಮದಿಂದ ಉತ್ತಮ ಹಣ ಗಳಿಸಬಹುದು. ಶೀಘ್ರದಲ್ಲೇ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಕೆಲಸದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸುಧಾರಿಸುತ್ತದೆ.
ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಕೆಲಸವನ್ನು ನೀವು ಪೂರ್ಣ ಶಕ್ತಿಯಿಂದ ಮಾಡುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯಲ್ಲಿ ನಿಮ್ಮ ನಂಬಿಕೆಯನ್ನು ಹೆಚ್ಚಿಸಲು ಪ್ರಯತ್ನಿಸಿ. ಅನುಮಾನದ ಸ್ವಭಾವ ವೈವಾಹಿಕ ಜೀವನದಲ್ಲಿ ಸಮಸ್ಯೆ ಹೆಚ್ಚಿಸಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











