ದಿನ ಭವಿಷ್ಯ: ಮೇಷ ರಾಶಿಯಿಂದ ಮೀನ ರಾಶಿಯವರಿಗೆ ಜೂನ್ 14ರ ರಾಶಿಫಲ

ಶುಭೋದಯ.....ಈ ದಿನ ಯಾರಿಗೆ ಶುಭ, ಯಾರು ಜಾಗ್ರತೆವಹಿಸಬೇಕು ಎಂದು ನೋಡೋಣ:

ಮೇಷ ರಾಶಿ

ಈ ದಿನ ಕುಟುಂಬದ ಕಡೆಗೆ ಗಮನಹರಿಸಿಬೇಕು, ಕೆಲ ಭಿನ್ನಾಭಿಪ್ರಾಯ ಉಂಟಾದರೆ ಅದನ್ನು ತಾಳ್ಮೆಯಿಂದ ವರ್ತಿಸಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ತಾಯಿಯ ಆರೋಗ್ಯದ ಕಡೆಗೆ ಗಮನಹರಿಸಿ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ಸಾಮಾನ್ಯವಾಗಿರಲಿದೆ. ಕೆಲಸದಲ್ಲಿ ಶ್ರಮ ಹೆಚ್ಚು ಹಾಕಿ, ಈ ದಿನ ನೀವು ವಾಹನವನ್ನು ಜಾಗ್ರತೆಯಿಂದ ಬಳಸಿ, ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಮಿಥುನ ರಾಶಿ

ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ. ಕೆಲಸದ ಕಡೆಗೆ ನಿರ್ಲಕ್ಷ್ಯ ಬೇಡ, ಆರೋಗ್ಯದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು.

ಸಿಂಹ ರಾಶಿ

ಈ ದಿನ ನಿಮ್ಮ ಮಾಹಿತಿ ಇರಲಿದೆ. ಅಪೂರ್ಣವಾಗಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಅವಿವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವನ್ನು ಪರಿಹರಿಸುವ ಸಾಧ್ಯತೆಯಿದೆ.

ಕನ್ಯಾ ರಾಶಿ

ಕೆಲಸದಲ್ಲಿ ತಪ್ಪು ಆಗದಂತೆ ಜಾಗ್ರತೆವಹಿಸಿ, ಕುಟುಂಬದಲ್ಲಿ ಕೆಲವು ಭಿನ್ನಾಭಿಪ್ರಾಯವಿರಲಿದೆ. ಕೆಲಸದಲ್ಲಿ ತಪ್ಪು ಆದರೆ ಅದು ನಿಮ್ಮ ಪ್ರಗತಿಗೆ ತಡೆ ಉಂಟಾಗುವುದು, ಆರೋಗ್ಯದ ಬಗ್ಗೆ ಗಮನಹರಿಸಿ.

ತುಲಾ ರಾಶಿ

ನೀವು ವ್ಯವಹಾರದಲ್ಲಿ ಉತ್ತಮ ಯಶಸ್ಸು ಗಳಿಸುತ್ತೀರಿ, ವ್ಯಾಪಾರಿಗಳು ಈ ಅವಧಿಯಲ್ಲಿ ಕೆಲಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.

ವೃಶ್ಚಿಕ ರಾಶಿ

ಇಂದು ನಿಮಗೆ ಮಿಶ್ರಫಲ. ವ್ಯಾಪಾರಿಗಳಿಗೆ ಧನ ಲಾಭವಾಗಿದೆ. ನಿರ್ಗತಿಕರಿಗೆ ನಿಮ್ಮ ಕೈಯಲ್ಲಾದ ಸಹಾಯ ಮಾಡಿ, ನೀವು ಕೋಪವನ್ನು ನಿಯಂತ್ರಿಸಿ. ಆರೋಗ್ಯ ಜೀವನ ಚೆನ್ನಾಗಿರಲಿದೆ.

ಧನು ರಾಶಿ

ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಹಣ ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗಿಗಳು ತಮ್ಮ ಕೆಲಸವನ್ನು ಸರಾಗವಾಗಿ ಪೂರ್ಣಗೊಳಿಸಬಹುದು.
ವೈವಾಹಿಕ ಜೀವನ ಚೆನ್ನಾಗಿರಲಿದೆ. ಬೇರೆಯವರ ವಿಷಯದಲ್ಲಿ ಮೂಗು ತೂರಿಸಲು ಹೋಗಬೇಡಿ.

ಮಕರ ರಾಶಿ

ಈ ದಿನ ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ಒಳ್ಳೆಯದಿದೆ, ಆದರೆ ಬೇರೆಯವರಿಗೆ ಸಾಲ ನೀಡದಂತೆ ಸಲಹೆ ನೀಡಲಾಗುವುದು. ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ನೀವು ಸಂಗಾತಿಗೆ ಸಮಯ ಕೊಡಬೇಕು, ಇದರಿಂದ ನಿಮ್ಮಿಬ್ಬದ ಬಾಂಧವ್ಯ ಗಟ್ಟಿಯಾಗಲಿದೆ.

ಕುಂಭ ರಾಶಿ

ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಉದ್ಯೋಗಿಗಳು ಬಡ್ತಿ ಪಡೆಯುವ ಸಾಧ್ಯತೆಯಿದೆ. ಮಾನಸಿಕ ಒತ್ತಡದಿಂದ ದೂರವಿರಲು ಸಾಧ್ಯವಾಗುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ಆದಾಯ ಹೆಚ್ಚಾಗಲಿದೆ.

ಮೀನ ರಾಶಿ

ಇಂದು ನಿಮಗೆ ಅತ್ಯಂತ ಶುಭದಿನ. ನೀವು ಕೆಲಸದ ಕಡೆಗೆ ಗಮನಹರಿಸಬೇಕು, ವ್ಯಾಪಾರಿಗಳು ಕಾನೂನು ಬಾಹಿರ ಕೆಲಸ ಮಾಡದಿರಿ. ನೀವು ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: 14th June Lucky And Unlucky Zodiac Sigsn In Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
X
Desktop Bottom Promotion