ದಿನ ಭವಿಷ್ಯ: ಜೂನ್ 15, ಈ ದಿನ ನಿಮ್ಮ ರಾಶಿಫಲ ಹೇಗಿದೆ?

ಜೂನ್ 15, ಶುಭ ದಿನ...

ಮೇಷ ರಾಶಿ

ಉದ್ಯೋಗಿಗಳು ಈ ದಿನ ಕೆಲಸದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ತುಂಬಾನೇ ಒತ್ತಡ ಇರಲಿದೆ. ನಿಮ್ಮ ಕೆಲಸವನ್ನು ನೀವು ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯಿಂದ ಮಾಡಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.

Dina Bhavishya

ವೃಷಭ ರಾಶಿ

ಕೆಲಸದಲ್ಲಿ ಈ ದಿನ ಏರಳಿತಗಳಿಂದ ಕೂಡಿರಲಿದೆ, ನಿಮ್ಮ ಅತಿಯಾದ ಆತ್ಮವಿಶ್ವಾಸ ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ಈ ದಿನ ನೀವು ಊಹಿಸಿದಂತೆ ಫಲ ಸಿಗದೆ ನಿರಾಸೆಯಾಗಬಹುದು. ಕುಟುಂಬದಲ್ಲಿ ಸಾಧಾರಣ ಇರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.

ಮಿಥುನ ರಾಶಿ

ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಇಂದು ನಿಮಗೆ ಮಿಶ್ರ ಫಲಿತಾಂಶ. ನೀವು ಸಾಲವನ್ನು ತೆಗೆದುಕೊಳ್ಳುವ ಅಥವಾ ಎರವಲು ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಅಗ್ಯತಕ್ಕಿಂತ ಹೆಚ್ಚು ಸಾಲ ತೆಗೆಯಬೇಡಿ. ಉದ್ಯೋಗಿಗಳು ಪ್ರಗತಿ ಹೊಂದಬಹುದು. ವ್ಯಾಪಾರಿಗಳುಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಯಾವುದೇ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಪ್ರೀತಿಯ ಸಂಗಾತಿ ಜೊತೆ ಕೆಲ ಭಿನ್ನಾಭಿಪ್ರಾಯವಿರಬಹುದು.

ಕರ್ಕ ರಾಶಿ

ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ನೀವು ಹೆಚ್ಚು ಶ್ರಮಿಸಬೇಕು. ನೀವು ಈಗಾಗಲೇ ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಪ್ರಸ್ತುತ ಕೆಲಸದಲ್ಲಿ ತೃಪ್ತರಾಗಿಲ್ಲದಿದ್ದರೆ ಹೊಸ ಕೆಲಸಕ್ಕೆ ಪ್ರಯತ್ನಿಸಿ, ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ನೀವು ಕಚೇರಿಯಲ್ಲಿ ನಿಮ್ಮ ಕೆಲಸ ಮೇಲಧಿಕಾರಿಗಳು ನಿಮ್ಮ ಶ್ರಮವನ್ನು ಗಮನಿಸಬಹುದು. ನೀವು ಶೀಘ್ರದಲ್ಲೇ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮಿಗಳು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ದಿನದ ಎರಡನೇ ಭಾಗದಲ್ಲಿ ನೀವು ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ಖರ್ಚು ಅದಿಕವಿರಲಿದೆ, ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.

ಕನ್ಯಾ ರಾಶಿ

ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರ. ಇಂದು ಉದ್ಯಮಿಗಳಿಗೆ ಹೊಸ ಅವಕಾಶ ಸಿಗಲಿದೆ. ನಿಮ್ಮ ವ್ಯವಹಾರದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಸುಧಾರಿಸಲಿದೆ.


ತುಲಾ ರಾಶಿ

ಗೃಹ ಜೀವನದಲ್ಲಿ ಕೆಲವು ಸಮಸ್ಯೆಗಳಿರಬಹುದು. ನೀವು ಸಮಸ್ಯೆ ಬುದ್ಧಿವಂತಿಕೆಯಿಂದ ಪರಿಹರಿಸಲು ಪ್ರಯತ್ನಿಸಿದರೆ ಉತ್ತಮ. ಖರ್ಚು ಹೆಚ್ಚಿರಲಿದೆ, ಇಂದು ಅನಗತ್ಯ ಖರ್ಚುಗಳು ಬರಬಹುದು. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ತಾಯಿಯ ಆರೋಗ್ಯದ ಬಗ್ಗೆ ಚಿಂತೆ ಕಾಡಬಹುದು. ಈ ದಿನ ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ. ಈ ದಿನ ಹಣದ ವಿಷಯಗಳಲ್ಲಿ ಜಾಗರೂಕರಾಗಿರಲು ನಿಮಗೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ ಇಂದು ಉತ್ತಮ ದಿನವಾಗಲಿದೆ.

ಧನು ರಾಶಿ

ಉದ್ಯೋಗಿಗಳು ಈ ದಿನ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಿಮ್ಮ ಶ್ರಮದ ಕ್ರೆಡಿಟ್ ಅನ್ನು ಬೇರೆಯವರು ತೆಗೆದುಕೊಳ್ಳುತ್ತಾರೆ. ವ್ಯಾಪಾರಿಗಳು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನೀವು ಹಣಕಾಸಿನ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರುತ್ತವೆ.

ಮಕರ ರಾಶಿ

ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ನಿಮ್ಮ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಕಷ್ಟಪಟ್ಟು ಕೆಲಸ ಮಾಡಲು ಸಲಹೆ ನೀಡಲಾಗುವುದು. ಇದಲ್ಲದೆ, ನಿಮ್ಮ ಖರ್ಚುಗಳ ಮೇಲೆಯೂ ನೀವು ಗಮನ ಹರಿಸಬೇಕು. ಸಣ್ಣ ವಿಷಯಗಳಿಗೆ ಜಗಳವಾಡಿದರೆ ನಿಮ್ಮ ಸಂಬಂಧವು ಇನ್ನಷ್ಟು ದುರ್ಬಲವಾಗಬಹುದು. ಹವಾಮಾನ ಬದಲಾವಣೆಯಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.

ಕುಂಭ ರಾಶಿ

ಕುಟುಂಬದಲ್ಲಿ ಶೀಘ್ರದಲ್ಲೇ ನಿಮ್ಮ ಮನೆಯಲ್ಲಿ ಶುಭ ಕಾರ್ಯವನ್ನು ಆಯೋಜಿಸಲಾಗುವುದು. ಉದ್ಯೋಗಸ್ಥರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಲಿದೆ. ನಿಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಪ್ರಖ್ಯಾತ ವ್ಯಕ್ತಿಗಳ ಬೆಂಬಲವನ್ನೂ ನೀವು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಉದಾರವಾಗಿ ಖರ್ಚು ಮಾಡುವಿರಿ.ಈ ದಿನ ನೀವು ಧನಾತ್ಮಕ ಶಕ್ತಿಯಿಂದ ಸುತ್ತುವರೆದಿರುವಿರಿ.

ಮೀನ ರಾಶಿ

ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ , ಆದಾಯ ಹೆಚ್ಚಾಗಲಿದೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಯಾವುದೇ ಕೆಲಸವನ್ನು ಇಂದು ನೀವು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: 15th June 2024 Daily Horoscope Prediction for All 12 Zodiac Signs in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Friday, June 14, 2024, 21:58 [IST]
X
Desktop Bottom Promotion