Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ, ಜೂನ್ 16: ಶುಭ ಭಾನುವಾರ, ಈ ದಿನ ನಿಮ್ಮ ರಾಶಿಫಲ ಹೇಗಿದೆ?
ಮೇಷ ರಾಶಿ
ಈ ದಿನ ನಿಮಗೆ ಬಿಡುವಿಲ್ಲದ ದಿನವಾಗಿದೆ, ನೀವು ಈ ದಿನದಂದು ಸಂಗಾತಿಯ ಆರೋಗ್ಯದ ಕಡೆಗೂ ಗಮನಹರಿಸಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಶ್ರಮಿಸುತ್ತಿದ್ದರೆ, ನಿಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶ ಪಡೆಯುತ್ತೀರಿ. ನೀವು ಹೊಸ ಆದಾಯದ ಮೂಲವನ್ನು ಕಂಡುಕೊಂಡಿರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆವಿರಬಹುದು.

ವೃಷಭ ರಾಶಿ
ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ, ಸಾಮರಸ್ಯ ಇರಲಿದೆ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಯಾವುದೇ ರೀತಿಯಲ್ಲಿ ಆತುರಪಡಬೇಡಿ, ಇಲ್ಲದಿದ್ದರೆ ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು. ನೀವು ಕೆಲಸವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ಬಹಳ ಎಚ್ಚರಿಕೆಯಿಂದ ಯೋಚಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ, ಅದು ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಮಿಥುನ ರಾಶಿ
ವೈಯಕ್ತಿಕ ಜೀವನದ ಸಮಸ್ಯೆಗಳು ಕೆಲಸದಲ್ಲಿ ಪ್ರಭಾವ ಬೀರದಂತೆ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅಲ್ಲದೆ ಸಾಲ ಮರು ಪಾವತಿ ಮಾಡುವ ಒತ್ತಡ ಕೂಡ ಇರಲಿದೆ. ದಿನದ ಎರಡನೇ ಭಾಗದಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಇದರಿಂದಾಗಿ ಮಾನಸಿಕ ಒತ್ತಡ ಕಡಿಮೆಯಾಗಲಿದೆ.
ಕರ್ಕ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ನೀವು ಸಾಲ ಕೊಟ್ಟಿದ್ದರೆ ಮರಳಿ ಪಡೆಯುತ್ತೀರಿ. ಈ ದಿನ ಕೆಲಸದಲ್ಲಿ ಯಶಸ್ಸು ದೊರೆಯಲಿದೆ. ಕೆಲಸವು ಯಾವುದೇ ತೊಂದರೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವನ್ನು ಮಾಡುತ್ತಿದ್ದರೆ, ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆದರೆ ನಿಮ್ಮ ನಿರ್ಧಾರಗಳನ್ನು ನೀವು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಬೇಕು. ಕಚೇರಿಯಲ್ಲಿ, ಆಲಸ್ಯ ಮತ್ತು ಸೋಮಾರಿತನವನ್ನು ತ್ಯಜಿಸಲು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ಕನ್ಯಾ ರಾಶಿ
ಹಣಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗುವುದು. ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವೈವಾಹಿಕ ಜೀವನದಲ್ಲಿ ಸ್ವಲ್ಪ ಒತ್ತಡ ಇರಲಿದೆ. ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ, ಚಿಕ್ಕ ಆರೋಗ್ಯ ಸಮಸ್ಯೆಯಿದ್ದತೂ ಜಾಗ್ರತೆವಹಿಸಬೇಕು.
ತುಲಾ ರಾಶಿ
ಈ ಸಮಯವು ನಿಮಗೆ ಬಹಳ ಮುಖ್ಯವಾಗಿದೆ, ಆದ್ದರಿಂದ ಅನುಪಯುಕ್ತ ವಿಷಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅದನ್ನು ವ್ಯರ್ಥ ಮಾಡಬೇಡಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಸಣ್ಣ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ವಿದ್ಯಾರ್ಥಿಗಳಿಗೆ ದಿನವು ಅನುಕೂಲಕರವಾಗಿರುತ್ತದೆ. ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಿಸಿಕೊಳ್ಳಲು ಪ್ರತಿದಿನ ಯೋಗ ಮತ್ತು ಧ್ಯಾನವನ್ನು ಮಾಡಿ.
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾವುದೇ ದೊಡ್ಡ ಖರ್ಚು ಮಾಡುವ ಯೋಚನೆ ತೆಗೆದು ಹಾಕಿದರೆ ಒಳ್ಳೆಯದು. ಕೆಲಸದ ವಿಷಯದಲ್ಲಿ ಇಂದು ಮಿಶ್ರಫಲ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುತ್ತೀರಿ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸಿ ಉದ್ಯೋಗವನ್ನು ಹುಡುಕುತ್ತಿದ್ದರೆ ಶೀಘ್ರದಲ್ಲಿಯೇ ಕೆಲಸ ಸಿಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುವುದಿಲ್ಲ.
ಧನು ರಾಶಿ
ಈ ದಿನ ನೀವು ಬೆಳಗ್ಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ ಮನಸ್ಸು ತುಂಬಾ ಸಂತೋಷವಾಗಿರುತ್ತದೆ. ಇಂದು ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನಿಮ್ಮ ಪಾಲುದಾರರೊಂದಿಗೆ ನಿಮ್ಮ ಸಮನ್ವಯವು ಉತ್ತಮವಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಮಕರ ರಾಶಿ'
ಮನೆಯ ವಾತಾವರಣ ಶಾಂತವಾಗಿರುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಉದ್ಯಮಿಗಳು ಇಂದು ಬಯಸಿದ ಫಲಿತಾಂಶಗಳನ್ನು ಪಡೆಯುತ್ತಾರೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಕುಂಭ ರಾಶಿ
ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಸಿಗಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರ ಫಲಿತಾಂಶ. ಅಗತ್ಯಕ್ಕಿಂತ ಹೆಚ್ಚಿನ ಹಣವನ್ನುಸಾಲ ಪಡೆಯದಂತೆ ನಿಮಗೆ ಸಲಹೆ ನೀಡಲಾಗುವುದು. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಆರೋಗ್ಯ ದುರ್ಬಲವಾಗಿರುತ್ತವೆ.
ಮೀನ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಮನ್ವಯವು ಹದಗೆಡಬಹುದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ನಿಮ್ಮ ವ್ಯವಹಾರದಲ್ಲಿ ನೀವು ಶೀಘ್ರದಲ್ಲೇ ದೊಡ್ಡ ಬದಲಾವಣೆಯನ್ನು ನೋಡುತ್ತೀರಿ. ನೀವು ಪಾಲುದಾರಿಕೆಯಲ್ಲಿ ಹೊಸ ವ್ಯವಹಾರವನ್ನು ಪ್ರಾರಂಭಿಸಿದರೆ ಒಳ್ಳೆಯ ಲಾಭ ಪಡೆಯುತ್ತೀರಿ. ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










