Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 2, ದಿನ ಭವಿಷ್ಯ: ಅಮವಾಸ್ಯೆಯ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 2, ಅಮವಾಸ್ಯೆ ದಿನ ನಿಮಗೆ ಹೇಗಿದೆ?
ಮೇಷ ರಾಶಿ
ಈ ದಿನ ಸವಾಲಿನಿಂದ ಕೂಡಿರಲಿದೆ, ಈ ದಿನ ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಎದುರಾಗಬಹುದು, ವೃತ್ತಿಗೆ ಸಂಬಂಧಿಸಿದ ಸಂಬಂಧಿಸಿದ ನಿರ್ಧಾರ ಅತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಹಣಕಾಸಿನ ಯೋಜನೆಯನ್ನು ಯಾರ ಜೊತೆ ಹಂಚಿಕೊಳ್ಳಬೇಡಿ. ಆರೋಗ್ಯ ದುರ್ಬಲವಾಗಿರಲಿದೆ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಚಿಂತೆಗಳು ದೂರಾಗುವುದು. ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಧನ ಲಾಭವಾಗಲಿದೆ. ಪ್ರೀತಿ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ದಿನ ಕೋಪವನ್ನು ನಿಯಂತ್ರಿಸಿ. ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಲಿದೆ, ಇದು ಆರೋಗ್ಯದ ಮೇಲೂ ಪರಿಣಾಮ ಬೀರುವುದು. ಇನ್ನು ದೂರದ ಪ್ರಯಾಣ ಮಾಡುವುದಾದರೆ ಅದನ್ನು ತಪ್ಪಿಸುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ, ಪ್ರೀತಿಯನ್ನು ವ್ಯಕ್ತಪಡಿಸಲು ಈ ದಿನ ಉತ್ತಮವಾಗಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ನೀವು ನಕಾರಾತ್ಮಕತೆಯಿಂದ ದೂರವಿರಿ. ಕೆಲಸದ ಕಾರ್ಯದ ಕಡೆಗೆ ಗಮನಹರಿಸುವುದು ಒಳ್ಳೆಯದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ವ್ಯಾಪಾರಿಗಳು ವ್ಯವಹಾರದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ತಪ್ಪುಗಳನ್ನು ಮಾಡದಂತೆ ಜಾಗ್ರತೆವಹಿಸಿ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಗೌರವಿಸಿ. ನಿಮ್ಮ ಜೀವನ ಸಂಗಾತಿಗಾಗಿ ಏನಾದರೂ ವಿಶೇಷವಾದದ್ದನ್ನು ಮಾಡಲು ಪ್ರಯತ್ನಿಸಿ. ಇದು ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ. ಕೊಲೆಸ್ಟ್ರಾಲ್ ಮುಂತಾದ ಅರೋಗ್ಯ ಸಮಸ್ಯೆ ಇದ್ದರೆ ಜಾಗ್ರತೆವಹಿಸಿ.
ಸಿಂಹ ರಾಶಿ
ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ, ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ಅರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಅಸ್ತಿ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ.
ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತಾರೆ. ವ್ಯಾಪಾರಿಗಳು ರಿಸ್ಕ್ ತೆಗೆದುಕೊಳ್ಳದಿದ್ದರೆ ಒಳ್ಳೆಯದು. ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಬೆನ್ನು ಹಾಗೂ ಭುಜ ನೋವಿನ ಸಮಸ್ಯೆವಿರಬಹುದು.
ಕನ್ಯಾ ರಾಶಿ
ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ದೊಡ್ಡ ಹಣಕಾಸಿನ ವಹಿವಾಟು ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು.
ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ, ಅರೋಗ್ಯದ ಬಗ್ಗೆ ನೋಡುವುದಾದರೆ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜಿತ ರೀತಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಷ್ಪ್ರಯೋಜಕ ವಿಷಯಗಳಲ್ಲಿ ಸಮಯವನ್ನು ವ್ಯರ್ಥ ಮಾಡುವ ಬದಲು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸಿದರೆ ಉತ್ತಮ. ಕುಟುಂಬ ಜೀವನ ಚೆನ್ನಾಗಿರಲಿದೆ.
ಆರೋಗ್ಯದ ದೃಷ್ಟಿಯಿಂದ ಈ ದಿನ ಮುಖ್ಯವಾಗಿದೆ.
ವೃಶ್ಚಿಕ ರಾಶಿ
ಕೆಲಸದಲ್ಲಿ ಈ ದಿನ ಧನಾತ್ಮಕವಾಗಿರುತ್ತದೆ. ವ್ಯಾಪಾರಿಗಳಿಗೆಬ ಧನ ಲಾಭವಾಗಲಿದೆ. ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಈ ದಿನ ಯಾರಿಗೂ ಸಾಲ ನೀಡಬೇಡಿ. ಉದ್ಯೋಗಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸುವುದು ಒಳ್ಳೆಯದು.
ಧನು ರಾಶಿ
ಕುಟುಂಬದ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಕೆಲಸದ ಬಗ್ಗೆ ಚಿಂತೆ ಇರುತ್ತದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ವಿಫಲವಾದರೆ ಆತ್ಮವಿಶ್ವಾಸ ಕುಸಿಯಬಹುದು, ಅದರೆ ಎಲ್ಲವನ್ನು ಧೈರ್ಯದಿಂದ ಎದುರಿಸಿ ಎಂದು ಸಲಹೆ ನೀಡಲಾಗುವುದು. ನಿಮ್ಮ ಮಾತಿನಿಂದ ಯಾರನ್ನೂ ನೋಯಿಸಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಮಕರ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ವಿಯಾಗುತ್ತೀರಿ. ಈ ದಿನ ಕೆಲಸದಲ್ಲಿಯೂ ಉತ್ತಮವಾಗಿದೆ, ಆರ್ಥಿಕ ಸಮಸ್ಯೆ ಬಗೆಹರಿಯಲಿದೆ.
ವ್ಯವಹಾರದ ದೃಷ್ಟಿಯಿಂದ ಈ ದಿನ ನಿಮಗೆ ಲಾಭದಾಯಕವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ನಿರ್ಲಕ್ಷ್ಯಬೇಡ.
ಕುಂಭ ರಾಶಿ
ವೃತ್ತಿಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು, ನೀವು ನಿಮ್ಮ ಹಿರಿಯರು ಮತ್ತು ಅನುಭವಿ ವ್ಯಕ್ತಿಗಳಿಂದ ಸಲಹೆ ಪಡೆಯುವುದು ಒಳ್ಳೆಯದು. ವ್ಯಾಪಾರಿಗಳು ಗಡಿಬಿಡಿಯಿಂದ ಕೆಲಸ ಮಾಡಿದರೆ ನಷ್ಟ ಉಂಟಾಗಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯ ಸರಾಸರಿಯಾಗಿರಲಿದೆ.
ಮೀನ ರಾಶಿ
ಈ ದಿನ ನಿಮ್ಮ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ಆರ್ಥಿಕ ಅಂಶವು ಬಲವಾಗಿ ಉಳಿಯುತ್ತದೆ. ಕೆಲಸ ಕಾರ್ಯಗಳು ಯೋಜಿತ ರೀತಿಯಲ್ಲಿ ಮಾಡಬಹುದು. ನಿಮ್ಮ ಸಹೋದರ ಅಥವಾ ಸಹೋದರಿಯ ವೃತ್ತಿಗೆ ಸಂಬಂಧಿಸಿದಂತೆ ನೀವು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅರೋಗ್ಯ
ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications