ದಿನ ಭವಿಷ್ಯ: ಜೂನ್ 23, ಈ ದಿನ ನಿಮ್ಮ ರಾಶಿಫಲ ಹೇಗಿದೆ?

ಶುಭ ದಿನ... ಭಾನುವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಮೇಷ ರಾಶಿ

ಕೆಲವೊಂದು ಹೊಸ ಸವಾಲುಗಳು ಬರಬಹುದು, ನೀವು ನಿಮ್ಮ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ಆರ್ಥಿಕವಾಗಿ ಈ ದಿನ ಅಷ್ಟು ಒಳ್ಳೆಯದಲ್ಲ, ಕೆಲಸದ ಜಾಗದಲ್ಲಿ ತಪ್ಪು ಮಾಡದಂತೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ. ಈ ದಿನ ಆರೋಗ್ಯ ನಿರ್ಲಕ್ಷ್ಯಬೇಡ, ಕೋಪ ನಿಯಂತ್ರಿಸಿ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ತುಂಬಾನೇ ಖುಷಿಯಾಗುವುದು, ನಿಮ್ಮ ಪ್ರಮುಖ ಆಸೆ ಈಡೇರಬಹುದು. ವ್ಯಾಪಾರಿಗಳು ದಾಖಲೆ ಪತ್ರಗಳ ಕಡೆಗೆ ಗಮನಹರಿಸಿ, ಉದ್ಯೋಗದಲ್ಲಿ ಈ ದಿನ ಅನುಕೂಲಕರವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಶುಭವಾಗಿದೆ.

ಮಿಥುನ ರಾಶಿ

ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರತಿಕೂಲ ಸಂದರ್ಭಗಳಲ್ಲಿ ನೀವು ಪ್ರೀತಿಪಾತ್ರರಿಂದ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಬೇಕಾಗುತ್ತದೆ. ಆದರೆ ಅದರಿಂದ ಲಾಭ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಗಾತಿಯ ಭಾವನೆಯ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಈ ದಿನ ನಿಮ್ಮ ವೃತ್ತಿ ಬದುಕಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಹಣದ ವಿಷಯದಲ್ಲಿ ನಿಮಗೆ ಯಾವುದೇ ಸಮಸ್ಯೆ ಇದ್ದರೆ ಈ ದಿನ ಆ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ನಿಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಶೀಘ್ರವೇ ಕಾಣಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಲಾಭ ಪಡೆಯುತ್ತೀರಿ, ಹಣಕಾಸಿನ ವಹಿವಾಟುಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ನಿಮ್ಮ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.

ಕನ್ಯಾ ರಾಶಿ

ಕನ್ಯಾ ರಾಶಿಯವರು ಈ ಅವಧಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ . ನಿಮ್ಮ ವೈಯಕ್ತಿಕ ಜೀವನದಲ್ಲಿ ಯಾವುದೇ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ಅಲ್ಲದೆ ನೀವು ಯಾರನ್ನೂ ಕುರುಡಾಗಿ ನಂಬಬೇಡಿ. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸಬೇಕು, ಕುಟುಂಬ ಜೀವನದಲ್ಲಿಯೂ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ತುಲಾ ರಾಶಿ'

ವೈವಾಹಿಕ ಜೀವನದಲ್ಲಿ ಅಹಂ ಬಿಟ್ಟುಕೊಳ್ಳಬೇಡಿ, ವ್ಯಾಪಾರಿಗಳು ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಹಳೆಯ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದ ಬ್ಯುಸಿ ನಡುವೆಯೂ ಸಂಗಾತಿಗೆ ಸಮಯ ಕೊಡಲು ಪ್ರಯತ್ನಿಸಿ.

ವೃಶ್ಚಿಕ ರಾಶಿ

ಆರ್ಥಿಕ ಸಮಸ್ಯೆಗಳಿರಬಹುದು, ಈ ದಿನ ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಡಿ, ಇಲ್ಲದಿದ್ದರೆ ಬೇರೆಯವರು ಲಾಭ ಪಡೆಯಬಹುದು. ಉದ್ಯೋಗಿಗಳು ಕಟ್ಟುನಿಟ್ಟಿನ ವರ್ತನೆ ನಿಮಗೆ ತೊಂದರೆ ನೀಡಬಹುದು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಅವಾಹಿತರಿಗೆ ವಿವಾಹ ಪ್ರಸ್ತಾಪ ಬರಲಿದೆ.
ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯಬೇಡ.

ಧನು ರಾಶಿ

ಈ ದಿನ ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿರುತ್ತದೆ. ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುತ್ತೀರಿ. ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ. ಪ್ರೇಮಿಗಳು ತಮ್ಮ ಪ್ರೀತಿ ಬಗ್ಗೆ ಮನೆಯಲ್ಲಿ ಹೇಳಿಕೊಳ್ಳಬಹುದು.
ಆರೋಗ್ಯದ ಬಗ್ಗೆ ನೋಡುವುದಾದರೆ ಅಜೀರ್ಣ, ಗ್ಯಾಸ್, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.

ಮಕರ ರಾಶಿ

ನಿಮ್ಮ ಪ್ರಮುಖ ನಿರ್ಧಾರಗಳನ್ನು ಪೂರ್ಣ ವಿಶ್ವಾಸದಿಂದ ಮಾಡಬೇಕು. ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವು ನಿಮಗೆ ಪ್ರಯೋಜನಕಾರಿ. ಆಸ್ತಿಗೆ ಸಂಬಂಧಿಸಿದಂತೆ ಲಾಭವನ್ನು ಪಡೆಯಬಹುದು, ಕುಟುಂಬದ ಹಿರಿಯರ ಜೊತೆಗೆ ಮಾತನಾಡುವಾಗ ಜಾಗ್ರತೆವಹಿಸಿ. ಪ್ರೀತಿ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.

ಕುಂಭ ರಾಶಿ

ಈ ದಿನ ನಿಮಗೆ ಅಷ್ಟೊಂದು ಶುಭವಲ್ಲ, ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ನಿಮ್ಮ ಆತ್ಮವಿಶ್ವಾಸ ಕುಸಿಯಲು ಬಿಡಬೇಡಿ. ವ್ಯಾಪಾರಿಗಳು ದೊಡ್ಡ ಹೂಡಿಕೆ ಮಾಡಲು ದಿನವು ಸೂಕ್ತವಲ್ಲ. ಹಣದ ವಿಷಯದಲ್ಲಿ ಆತುರಬೇಡ, ಆತುರ ಮತ್ತು ಅವಸರದಲ್ಲಿ ಯಾವುದೇ ಕೆಲಸವನ್ನು ಮಾಡಬೇಡಿ, ಗಾಡಿ ನಿಧಾನಕ್ಕೆ ಓಡಿಸಿ.

ಮೀನ ರಾಶಿ

ಈ ದಿನ ನೀವು ಹಿರಿಯರ ಮಾತುಗಳನ್ನು ನಿರ್ಲಕ್ಷ್ಯ ಮಾಡುವುದನ್ನು ತಪ್ಪಿಸಿ. ವ್ಯಾಪಾರಿಗಳು ಕೆಲವು ಪ್ರಮುಖ ಕೆಲಸಗಳಲ್ಲಿ ಅಡಚಣೆ ಉಂಟಾಗಬಹುದು. ನೀವು ಹಣಕಾಸಿನ ನಷ್ಟವನ್ನು ಸಹ ಅನುಭವಿಸುವ ಸಾಧ್ಯತೆಯಿದೆ. ನೀವು ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಈ ದಿನ ವಿವಾಹ ಪ್ರಸ್ತಾಪ ಬರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಆಯಾಸ ಹೆಚ್ಚಾಗಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: 23rd June 2024 Daily Horoscope Prediction for All 12 Zodiac Signs in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada:
Story first published: Saturday, June 22, 2024, 22:09 [IST]
X
Desktop Bottom Promotion