Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ ಏಪ್ರಿಲ್ 26, 2024: ಶುಕ್ರವಾರ 12 ರಾಶಿಗಳಿಗೆ ಹೇಗಿರಲಿದೆ?
ಏಪ್ರಿಲ್ 26ರಂದು 12 ರಾಶಿಗಳ ರಾಶಿಫಲ
ತಿಥಿ: ದ್ವಿತೀಯಾ
ಅಭಿಜಿತ್ ಮುಹೂರ್ತ: ಬೆಳಗ್ಗೆ 11:53ರಿಂದ 12:45
ರಾಹುಕಾಲ: ಬೆಳಗ್ಗೆ 10:40ರಿಂದ ಮಧ್ಯಾಹ್ನ 12:19ರವರೆಗೆ

ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಉದ್ಯೋಗಿಗಳಿಗೆ ಕೆಲವು ಸವಾಲುಗಳು ಎದುರಾಗಬಹುದು. ವ್ಯಾಪಾರಿಗಳು ಈ ದಿನ ಆರ್ಥಿಕ ಸಂಕಷ್ಟ ಹೆಚ್ಚಾಗುವುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಬಿಪ್ರಾಯ ಉಂಟಾಗಬಹುದು. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಎದುರಾಗಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಿಗ್ಗೆ 6 ರಿಂದ 10 ರವರೆಗೆ
ವೃಷಭ ರಾಶಿ
ನಿಮಗೆ ಯಾವುದಾದರೂ ಕಾನೂನು ಪ್ರಕರಣ ಎದುರಿಸುತ್ತಿದ್ದರೆ ಕಾನೂನು ಸಲಹೆಗಾರರಿಂದ ಸಲಹೆ ಪಡೆದರೆ ತುಂಬಾನೇ ಒಳ್ಳೆಯದು. ನಿಮ್ಮ ಕೆಲವೊಂದು ಆತುರದ ನಿರ್ಧಾರಗಳು ದೊಡ್ಡ ಖರ್ಚಿಗೆ ಕಾರಣವಾಗಬಹುದು, ಆದ್ದರಿಂದ ಜಾಗ್ರತೆವಹಿಸಿದರೆ ಒಳ್ಳೆಯದು. ಈ ಸಮಯದಲ್ಲಿ ಖರ್ಚುಗಳು ಹೆಚ್ಚುವುದರಿಂದ ಹಣದ ಸಮಸ್ಯೆ ಕಾಡಬಹುದು. ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ಸಮಯ ಒಳ್ಳೆಯದಿದೆ. ನೀವು ಕೆಲಸದ ಬಗ್ಗೆ ಗಮನಹರಿಸಬೇಕು. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಮಿಥುನ ರಾಶಿ
ವಿದ್ಯಾರ್ಥಿಗಳಾಗಿದ್ದರೆ ಅನಗ್ಯತ ವಿಷಯಗಳಿಂದ ದುರವಿರುವುದು ಒಳ್ಳೆಯದು. ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ನೀವು ಯಾವುದೇ ಕಾನೂನುಬಾಹಿರ ಕೆಲಸ ಮಾಡದಂತೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಮಧ್ಯಾಹ್ನ 3:30 ರಿಂದ 5 ರವರೆಗೆ
ಕರ್ಕ ರಾಶಿ
ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಅನುಭವಿ ವ್ಯಕ್ತಿಯಿಂದ ಕೆಲವು ಸಲಹೆ ಪಡೆಯಬಹುದು. ಕೆಲಸದ ಸ್ಥಳದಲ್ಲಿ ಇಂತಹ ವಿಷಯಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗುವುದು. ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಏನಾದರೂ ಸಾಲ ಮಾಡಿದ್ದರೆ ಶೀಘ್ರದಲ್ಲಿಯೇ ಸಾಲಮುಕ್ತರಾಗಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಇಂದು ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ:47
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಸಿಂಹ ರಾಶಿ
ವ್ಯಾಪಾರಿಗಳಿಗೆ ಈ ದಿನ ಕೆಲವು ಅಡೆತಡೆಗಳಿರಬಹುದು. ಉದ್ಯೋಗಿಗಳು ಕೆಲಸದ ಕಡೆಗೆ ತುಂಬಾನೇ ಗಮನಹರಿಸಿ. ಹಣದ ಸ್ಥಿತಿ ಚೆನ್ನಾಗಿರಲಿದೆ. ಶೀಘ್ರದಲ್ಲಿಯೇ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಆರೋಗ್ಯಕ್ಕ ಸಂಬಂಧಿಸಿದಂತೆ ಔಷಧಗಳನ್ನು ನಿಯಮಿತವಾಗಿ ಸೇವಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ
ಕನ್ಯಾ ರಾಶಿ
ಈ ದಿನ ಮನಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನಿಮಗೆ ಬೇಗನೆ ಕೋಪ ಬರಲಿದೆ. ಕೋಪದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿರುವುದು ಒಳ್ಳೆಯದು. ಈ ದಿನ ಅಧಿಕ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದಲ್ಲಿ ಏನಾದರೂ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 3:15 ರಿಂದ 6 ರವರೆಗೆ
ತುಲಾ ರಾಶಿ
ನಿಮ್ಮ ದಾಂಪತ್ಯ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸವನ್ನು ಊಹಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚುತ್ತಿರುವ ಕೋಪ ನಿಯಂತ್ರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ನೀವು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಹೆತ್ತವರ ಆಶೀರ್ವಾದ ಪಡೆದು ಪ್ರಾರಂಭಿಸಿ ಯಶಸ್ಸು ಗಳಿಸುತ್ತೀರಿ. ಮನೆಯಲ್ಲಿ ಸೀಘ್ರದಲ್ಲಿಯೇ ಶುಭಕಾರ್ಯ ನಡೆಯಲಿದೆ. ಉದ್ಯೋಗಿಗಳು ಹಾಗೂ ವ್ಯಾಪಾರಿಗಳು ಪ್ರಗತಿಯನ್ನು ಕಾಣುತ್ತೀರಿ. ಆದಾಯ ಉತ್ತಮವಾಗುವುದರಿಮದ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಗಂಟಲು ನೋವು ಅಥವಾ ಬಾಯಿ ಹುಣ್ಣುಗಳಿಂದ ಬಳಲುತ್ತಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ:42
ಶುಭ ಸಮಯ: ಬೆಳಗ್ಗೆ 7:20 ರಿಂದ 11:30 ರವರೆಗೆ
ಧನು ರಾಶಿ
ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ನೀವು ಯಾರೊಂದಿಗಾದರೂ ಸಾಲ ಪಡೆದಿದ್ದರೆ ಅದನ್ನು ಮರಳಿಸಲು ಒತ್ತಡವಿರಬಹುದು. ಕೆಲಸದಲ್ಲಿ ಈ ದಿನ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳು ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 36
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ
ಮಕರ ರಾಶಿ
ಇಂದು ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರಲಿದೆ, ಕೆಲಸದಲ್ಲಿ ಅಸಡ್ಡೆ ತೋರಬೇಡಿ. ನಿಮ್ಮ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ಪ್ರಯತ್ನಿಸಿದರೆ ಉತ್ತಮ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ನೀವು ಪ್ರಯತ್ನಮುಂದುವರೆಸಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 4 ರಿಂದ ರಾತ್ರಿ 9:15 ರವರೆಗೆ
ಕುಂಭ ರಾಶಿ
ಉದ್ಯೋಗಸ್ಥರಿಗೆ ಉತ್ತಮ ಪ್ರಗತಿ ಕಂಡುಬರಲಿದೆ. ವ್ಯಾಪಾರಗಳು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಮೋಜು ಮಾಡುವ ಅವಕಾಶವನ್ನು ಪಡೆಯುತ್ತೀರಿ. ಇಂದು ನೀವು ನಿಮ್ಮ ನೆಚ್ಚಿನ ಭಕ್ಷ್ಯಗಳನ್ನು ಸಹ ಆನಂದಿಸುವಿರಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಬೆಳಿಗ್ಗೆ 9:30 ರಿಂದ 11:20 ರವರೆಗೆ
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆಸಂಗಾತಿಯೊಂದಿಗಿನ ಸಂಬಂಧನ್ನಾಗಿರಲಿದೆ. ಖರ್ಚು ಅಧಿಕವಿರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಬೆಳಿಗ್ಗೆ 6 ರಿಂದ 9:15 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











