ಏಪ್ರಿಲ್ 27 ದಿನ ಭವಿಷ್ಯ: ಈ ದಿನ ಯಾವೆಲ್ಲಾ ರಾಶಿಗಳಿಗೆ ಶುಭವಾಗಿದೆ?

ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 27 ನಿಮಗೆ ಹೇಗಿರಲಿದೆ ಎಂದು ನೋಡೋಣ....

ತಿಥಿ: ತೃತೀಯಾ
ನಕ್ಷತ್ರ: ಜ್ಯೇಷ್ಠ
ಅಭಿಜಿತ್ ಮುಹೂರ್ತ: ಬೆಳಗ್ಗೆ 11:53ರಿಂದ 12:45ರವರೆಗೆ
ರಾಹುಕಾಲ: ಬೆಳಗ್ಗೆ 09:01ರಿಂದ 10:40ರವರೆಗೆ

Dina Bhavishya

ಮೇಷ ರಾಶಿ
ಇಂದು ಕುಟುಂಬದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನೀವು ತಾಳ್ಮೆ ಕಳೆದು ವರ್ತಿಸಬೇಡಿ. ಕುಟುಂಬದ ಸಮಸ್ಯೆಯಿಂದಾಗಿ ಕೆಲಸದ ಕಡೆಗೂ ಗಮನ ನೀಡಲು ಕಷ್ಟವಾಗುವುದು. ವ್ಯಾಪಾರಿಗಳಿಗೆ ಸರಾರಿಯಾಗಿರಲಿದೆ, ಆದರೆ ಯಾವುದೇ ಹೂಡಿಕೆಯ ನಿರ್ಧಾರ ತೆಗೆದುಕೊಳ್ಳಬೇಡಿ. ಹೆಚ್ಚು ಖರ್ಚು ಮಾಡಲು ಹೋಗದಿರಿ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಿದರೆ ಸಮಸ್ಯೆ ಹೆಚ್ಚಾಗಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಹಣದ ಖರ್ಚು ಅಧಿಕವಿರಲಿದೆ. ಇದ್ದಕ್ಕಿದ್ದಂತೆ ಖರ್ಚು ಬರಬಹುದು. ವ್ಯಾಪಾರಿಗಳು ಯಾವುದೇ ಹೊಸ ಕೆಲಸ ಆತುರದಿಂದ ಮಾಡದಂತೆ ಸಲಹೆ ನೀಡಲಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯ ಚೆನ್ನಾಗಿರಲಿದೆ.

ಮಿಥುನ ರಾಶಿ
ಈ ದಿನ ನಿಮಗೆ ಹೊಸ ಸವಾಲುಗಳನ್ನು ಎದುರಿಸಬಹುದು. ಈ ಸಮಯದಲ್ಲಿ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳಲು ಹೋಗದಿರುವುದು ಒಳ್ಳೆಯದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ದಿನ ಅಧಿಕ ಸಂಬಂಧಿಸಿದಂತೆ ಒಳ್ಳೆಯ ಅವಕಾಶಗು ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರಲಿದೆ.

ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಇತ್ತೀಚೆಗೆ ಯಾವುದೇ ಕಾರ್ಯಾಚರಣೆ ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ ಹೆಚ್ಚು ವಿಶ್ರಾಂತಿ ಕಡೆಗೆ ಗಮನಹರಿಸಿ.

ಸಿಂಹ ರಾಶಿ
ಇಂದು ಯಾವುದೇ ಸಾಲದ ವ್ಯವಹಾರ ಮಾಡಬೇಡಿ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹವಾಸ ಸಿಗಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಇತ್ತೀಚೆಗೆ ಯಾವುದೇ ಹೂಡಿಕೆಯನ್ನು ಮಾಡಿದ್ದರೆ, ಅದರಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ.

ಕನ್ಯಾ ರಾಶಿ
ಪ್ರೇಮಿಗಳ ನಡುವೆ ಕೆಲ ತಪ್ಪು ಅಭಿಪ್ರಾಯ ಉಂಟಾಗುವುದರಿಂದ ಇದು ಸಂಬಂಧದ ಮೇಲೆ ಪ್ರಭಾವ ಬೀರಬಹುದು. ನೀವು ಭಾವನಾತ್ಮಕವಾಗಿ ತುಂಬಾ ದುರ್ಬಲರಾಗುತ್ತೀರಿ. ಇದರಿಂದ ಅಳು-ಕೋಪವೆಲ್ಲಾ ಬರಲಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಮಿಶ್ರಫಲ. ಅತಿಯಾದ ಕೆಲಸದ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು.

ತುಲಾ ರಾಶಿ
ಹಣದ ಚಿಂತೆ ಹೆಚ್ಚಾಗುವುದು, ಏಕಂದರೆ ಖರ್ಚು ಹೆಚ್ಚಾಗಲಿದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಕೆಲಸದ ಜೊತೆಗೆ ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಬೇಕು. ಆರೋಗ್ಯ ಅಷ್ಟು ಚೆನ್ನಾಗಿರಲ್ಲ.

ವೃಶ್ಚಿಕ ರಾಶಿ
ವ್ಯಾಪಾರಿಗಳು ಇಂದು ಬಹಳ ಜಾಗರೂಕರಾಗಿರಬೇಕು. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಪ್ರತಿಕೂಲ ಸಂದರ್ಭಗಳಲ್ಲಿ ಸುಲಭವಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯವು ನಿಮಗೆ ಉತ್ತಮ ಯಶಸ್ಸು ಸಿಗಲಿದೆ. ನೀವು ಕೋಪ ನಿಯಂತ್ರಿಸಿದರೆ ಈ ದಿನ ಒಳ್ಳೆಯದಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಸರಾಸರಿಯಾಗಿರಲಿದೆ.

ಧನು ರಾಶಿ
ಇಂದು ನೀವು ಕೆಲವು ಹೊಸ ಸವಾಲುಗಳನ್ನು ಎದುರಿಸಬಹುದು.ಈ ದಿನ ನಿಮ್ಮ ನಿರೀಕ್ಷೆಗಳಿಗೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಉದ್ಯೋಗಿಗಳು ಇತ್ತೀಚೆಗೆ ದೊಡ್ಡ ಯೋಜನೆಯಲ್ಲಿ ಕೆಲಸ ಮಾಡಿದ್ದರೆ, ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಅದಕ್ಕೆ ಸಂಬಂಧಿಸಿದ ಅಡೆತಡೆಗಳು ದೂರಾಗಲಿದೆ. ಆರ್ಥಿಕವಾಗಿ ಈ ದಿನ ಚೆನ್ನಾಗಿರಲಿದೆ.

ಮಕರ ರಾಶಿ
ನಿಮಗೆ ಮಧುಮೇಹ ಅಥವಾ ಮೂತ್ರಪಿಂಡಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆ ಇದ್ದರೆ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳಿಗೆ ಹಾಗೂ ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಕುಂಭ ರಾಶಿ
ಈ ದಿನ ನೀವು ಕೆಲಸವನ್ನ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ನಷ್ಟವನ್ನು ಅನುಭವಿಸಿದರೆ ಅದು ಸರಿದೂಗಿಸಲು ಈ ದಿನ ಉತ್ತಮವಾಗಿರಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಇರಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಮೀನ ರಾಶಿ
ಕುಟುಂಬಸ್ಥರ ಜೊತೆಗೆ ಅನಗ್ಯತ ವಾದ ಮಾಡಲು ಹೋಗಬೇಡಿ. ಸಹೋದ್ಯೋಗಿಗಳ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಲು ಹೋಗಬೇಡಿ. ವ್ಯಾಪಾರಿಗಳ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಹೊಸ ಕೆಲಸ ಮಾಡುತ್ತಿದ್ದರೆ ಅದರಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: 27th April 2024 Daily Horoscope Prediction for All 12 Zodiac Signs in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Friday, April 26, 2024, 20:45 [IST]
X
Desktop Bottom Promotion