Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 3, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 3, ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಯಾವುದೇ ವಿಷಯದಲ್ಲಿ ಆಗಲಿ ಆತ್ಮವಿಶ್ವಾಸ ತೋರಿಸಬೇಡಿ. ವ್ಯಾಪಾರಿಗಳು ಕೆಲವು ಹೊಸ ತಂತ್ರಗಳನ್ನು ಮಾಡಬೇಕಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆದರೆ ನಿಮ್ಮ ಸಂಗಾತಿಯ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು, ಏನೇ ಸಮಸ್ಯೆಯಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ. ಅರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಹೂಡಿಕೆ ಇತ್ಯಾದಿಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಆತುರಪಡಬೇಡಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳು ನಿಮಗೆ ಯಶಸ್ಸನ್ನು ತರಬಹುದು. ವೈವಾಹಿಕ ಜೀವನ ಚೆನ್ನಾಗಿರುತ್ತದೆ, ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಪ್ರಮುಖ ಡಾಕ್ಯೂಮೆಂಟ್‌ಗಳು ಮಿಸ್ ಆಗದಂತೆ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ನಡುವೆ ಅಂತರ ಹೆಚ್ಚಾಗಬಹುದು.
ಕರ್ಕ ರಾಶಿ
ಕೆಟ್ಟ ವಿಷಯಗಳ ಬಗ್ಗೆ ಚಿಂತೆ ಮಾಡಬೇಡಿ, ವೈಯಕ್ತಿಕ ಜೀವನದಲ್ಲಿ ನೀವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಅನಗತ್ಯ ಖರ್ಚುಗಳಿಂದ ದೂರವಿರಿ. ಭವಿಷ್ಯದಲ್ಲಿ ನೀವು ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಸಂಬಂಧ ಸುಧಾರಿಸಲಿದೆ. ಹೆಚ್ಚುತ್ತಿರುವ ಕೆಲಸದ ಹೊರೆ ನಿಮ್ಮ ಆಯಾಸವನ್ನು ಹೆಚ್ಚಿಸಬಹುದು.
ಸಿಂಹ ರಾಶಿ
ನಿಮ್ಮ ಕೆಲಸದ ಕಡೆಗೆ ಗಮನಹರಿಸುತ್ತೀರಿ. ನೀವು ಕೌಟುಂಬಿಕ ಜೀವನದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ನಿಮ್ಮ ಸಂಬಂಧವು ಸುಧಾರಿಸುತ್ತದೆ. ವ್ಯಾಪಾರಿಗಳಿಗೆ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಹವಾಮಾನ ಬದಲಾವಣೆಯಿಂದ ಆರೋಗ್ಯ ಹಠಾತ್ತನೆ ಹದಗೆಡಬಹುದು.
ಕನ್ಯಾ ರಾಶಿ
ಆದಾಯವು ಉತ್ತಮವಾಗಿರುತ್ತದೆ ಆದರೆ ನಿರಂತರ ವೆಚ್ಚಗಳ ಹೆಚ್ಚಳದಿಂದ ನಿಮ್ಮ ಚಿಂತೆಗಳು ಹೆಚ್ಚಾಗಬಹುದು. ಕೆಲಸದ ಕಡೆಗೆ ಗಮನಹರಿಸಬೇಕು, ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ, ನೀವು ನಿಮ್ಮ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಕೋಪ, ಅಹಂಕಾರ ಸಂಬಂಧದ ಮೇಲೆ ಪರಿಣಾಮ ಬೀರುವುದು.
ತುಲಾ ರಾಶಿ
ವಿದೇಶಕ್ಕೆ ಹೋಗಿ ಉದ್ಯೋಗ ಪಡೆಯಲು ಬಯಸುವವರಿಗೆ ಒಳ್ಳೆಯ ಸುದ್ದಿ ಸಿಗಬಹುದು. ವ್ಯಾಪಾರಿಗಳಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗಬಹುದು. ಮನೆಯ ವಾತಾವರಣ ಸುಧಾರಿಸುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಬಲಗೊಳ್ಳುತ್ತದೆ. ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ವೃಶ್ಚಿಕ ರಾಶಿ
ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳಿರಬಹುದು. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಮನೆಯಲ್ಲಿ ವಾತಾವರಣ ಚೆನ್ನಾಗಿರಲ್ಲ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಧನು ರಾಶಿ
ಎಲ್ಲಾ ಕೆಲಸ ಒಟ್ಟಿಗೆ ಮಾಡಲು ಹೋಗಬೇಡಿ, ಯಾವುದೂ ಪೂರ್ಣವಾಗಲ್ಲ, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.ಅನಗತ್ಯ ವೆಚ್ಚಗಳನ್ನು ತಪ್ಪಿಸಿ ಮತ್ತು ಉಳಿತಾಯದತ್ತ ಹೆಚ್ಚಿನ ಗಮನ ಹರಿಸಲು ಪ್ರಯತ್ನಿಸಿ. ಆರೋಗ್ಯ ಚೆನ್ನಾಗಿರುತ್ತದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ವೈವಾಹಿಕ, ಪ್ರೀತಿ ಬದುಕು ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ಸೂಕ್ತ ವೈದ್ಯರನ್ನು ಭೇಟಿಯಾಗಿ.
ಮಕರ ರಾಶಿ
ಸಮಯಕ್ಕೆ ಅನುಗುಣವಾಗಿ ತಕ್ಷಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಅತಿಯಾಗಿ ಯೋಚಿಸುವುದರಿಂದ ಒಳ್ಳೆಯ ಅವಕಾಶ ನಿಮ್ಮ ಕೈಯಿಂದ ಜಾರಿಹೋಗಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು. ವ್ಯಾಪಾರಿಗಳು ಇಂದು ಹೆಚ್ಚು ಶ್ರಮಿಸಬೇಕಾಗಬಹುದು, ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಮತ್ತು ನಿಮ್ಮ ವೀಸಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚು ಆಯಾಸ ಮಾಡಿಕೊಳ್ಳಬೇಡಿ.
ಕುಂಭ ರಾಶಿ
ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ನೀವು ಹಣದ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಬೇಕು. ವ್ಯಾಪಾರಿಗಳು ಪ್ರಚಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕುಟುಂಬದ ಸದಸ್ಯರ ಅನುಚಿತ ವರ್ತನೆಯು ನಿಮಗೆ ಒತ್ತಡವನ್ನು ಉಂಟುಮಾಡಬಹುದು. ಆದರೆ ನೀವು ನಿಮ್ಮ ಭಾವನೆಗಳನ್ನು ನೀವು ನಿಯಂತ್ರಿಸಬೇಕು. ಸಂಬಂಧದ ಕಡೆಗೆ ಗಮನಹರಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಹಲ್ಲುನೋವಿನ ಸಮಸ್ಯೆವಿರಬಹುದು.
ಮೀನ ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ಯಾವುದೇ ಬಾಕಿ ಉಳಿದಿರುವ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ಗಮನಹರಿಸಬೇಕು, ವ್ಯಾಪಾರಿಗಳು
ದೊಡ್ಡ ಲಾಭಕ್ಕಾಗಿ ಸಣ್ಣ ಲಾಭಗಳನ್ನು ನಿರ್ಲಕ್ಷಿಸಬೇಡಿ. ಈ ಸಮಯದಲ್ಲಿ ನೀವು ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಿ. ನಿಮ್ಮ ಸಂಬಂಧವು ಸುಧಾರಿಸುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications