Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 5, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 5, ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ಚಿಂತೆ ದೂರಾಗಲಿದೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಕಚೇರಿಯಲ್ಲಿ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ಕೆಲವರ ತಪ್ಪು ನಡವಳಿಕೆ ನಿಮ್ಮ ಭಾವನೆಗಳಿಗೆ ಧಕ್ಕೆ ತರಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ವ್ಯಾಪಾರಿಗಳು ಇತರರ ಸಲಹೆ ಮೇರೆಗೆ ನಿರ್ಧಾರ ತೆಗೆದುಕೊಳ್ಳಬೇಡಿ.
ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ನೀವು ನಿಮ್ಮ ಮಾತಿನ ಕಡೆಗೆ ಗಮನಹರಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಹಿಂದಿನ ಬಗ್ಗೆ ಆಲೋಚಿಸಿ ಸಮಯ ಕಳೆಯುವುದಕ್ಕಿಂತ ಮುಂದಿನ ವಿಷಯದ ಬಗ್ಗೆ ಗಮನಹರಿಸಿ. ನೀವು ಕೆಲಸದಲ್ಲಿ ಜಾಗ್ರತೆವಹಿಸಿ. ನೀವು ಯೋಜಿತ ರೀತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಯಾವುದೇ ಕೆಲಸವನ್ನು ಉಳಿಸಿಕೊಳ್ಳಬೇಡಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಈ ದಿನ ಬಾಕಿಯಿರುವ ಕೆಲಸದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಹಣದ ವ್ಯವಹಾರ ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ದೊಡ್ಡ ಸಾಲ ತೆಗೆದುಕೊಳ್ಳಬೇಡಿ.
ನಿಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ವೈವಾಹಿಕ ಬದುಕಿನಲ್ಲಿ ಸಂತೋಷ ಇರಲಿದೆ. ಕೆಲಸದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ ಆ ಹಣ ಮರಳಿ ಪಡೆಯಲು ಸಾಧ್ಯವಾಗುವುದು. ಕೆಲಸದ ಕಡೆಗೆ ಗಮನಹರಿಸಿ. ಅನಗತ್ಯ ವಿಷಯಗಳಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡಬೇಡಿ. ಮನೆಯಲ್ಲಿ ಹಿರಿಯರ ಮಾತನ್ನು ಗೌರವಿಸಿ. ವೈವಾಹಿಕ ಜೀವನದಲ್ಲಿ ನಂಬಿಕೆ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ಹಣದ ಬಗ್ಗೆ ಚಿಂತೆ ಮಾಡಬೇಡಿ. ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕಾಗುತ್ತದೆ, ಇಲ್ಲದಿದ್ದರೆ ನಿಮ್ಮ ಆರ್ಥಿಕ ಸ್ಥಿತಿಯು ಗಮನಾರ್ಹವಾಗಿ ಹದಗೆಡಬಹುದು. ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ಆದರೆ ಸಂಗಾತಿಯ ವರ್ತನೆ ಮನಸ್ಸಿಗೆ ಬೇಸರವನ್ನುಂಟು ಮಾಡಬಹುದು, ಏನೇ ಸಮಸ್ಯೆ ಇದ್ದರೆ ಮಾತುಕತೆಯ ಮೂಲಕ ಬಗೆಹರಿಸಿ.
ತುಲಾ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಹವಾಮಾನ ಬದಲಾವಣೆಯಿಂದ ಕೆಲವು ಆರೋಗ್ಯ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ನೀವು ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಲು ಬಯಸಿದರೆ ಇನ್ನೂ ಸ್ವಲ್ಪ ಕಾಯುವುದು ಒಳ್ಳೆಯದು, ಇಂದು ಯಾವುದೇ ಕೆಲಸವನ್ನು ತರಾತುರಿಯಲ್ಲಿ ಮಾಡಬೇಡಿ ಇಲ್ಲದಿದ್ದರೆ ನಿಮಗೆ ನಷ್ಟವಾಗಬಹುದು. ಇನ್ನು ಕೆಲಸವನ್ನು ಬದಲಾಯಿಸಲು ಕೂಡ ಈ ಅವಧು ಅನುಕೂಲಕರವಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ನಿಮ್ಮ ಗುರಿಯನ್ನು ಸಾಧಿಸಲು ನೀವು ಹೆಚ್ಚು ಶ್ರಮಿಸಬೇಕು. ಸಂಬಂಧದ ವಿಷಯದಲ್ಲಿ ಈ ದಿನ ಜಾಗ್ರತೆವಹಿಸಿ. ನಿಮ್ಮ ಕೌಟುಂಬಿಕ ಜೀವನದ ಬಗ್ಗೆಯೂ ನೀವು ಗಮನ ಹರಿಸಬೇಕು, ಸಂಬಂಧದಲ್ಲಿ
ಏರಿಳಿತಗಳಿರುತ್ತವೆ. ನಿಮ್ಮ ಸಂಬಂಧವನ್ನು ಸುಧಾರಿಸಲು ನೀವು ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ನೋಡುವುದಾದರೆ ನೇತ್ರ ಸಂಬಂಧಿ ಸಮಸ್ಯೆಗಳಿರಬಹುದು.
ಮಕರ ರಾಶಿ
ನಕಾರಾತ್ಮಕ ಸಂದರ್ಭಗಳಲ್ಲಿ ನಿಮ್ಮ ನೈತಿಕತೆಯನ್ನು ಕಾಪಾಡಿಕೊಳ್ಳಿ. ಯಾವುದೇ ಸಮಸ್ಯೆ ಎದುರಾದರೆ ಅದಕ್ಕೆ ಹೆದರುವ ಬದಲು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಯ ಸರಿಯಲ್ಲ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿದ್ದರೆ ಉತ್ತಮ ಲಾಭ ಸಿಗಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
ಕುಂಭ ರಾಶಿ
ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿದೆ. ಸಂಬಂಧಗಳಲ್ಲಿ ಮಧುರತೆ ಇರುತ್ತದೆ. ನಿಮ್ಮ ಕೆಲಸವನ್ನು ಉತ್ತಮವಾಗಿ ಪೂರ್ಣಗೊಳಿಸಲು ನೀವು ಹೆಚ್ಚು ಶ್ರಮಿಸಬೇಕು. ನೀವು ದೊಡ್ಡ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ನೀವು ಮಾನಸಿಕವಾಗಿ ಹೆಚ್ಚು ಉತ್ತಮವಾಗುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ನೀ
ಮೀನ ರಾಶಿ
ನಿಮ್ಮ ಕೋಪವನ್ನು ನೀವು ಹತೋಟಿಯಲ್ಲಿಟ್ಟುಕೊಳ್ಳಬೇಕು ಇಲ್ಲದಿದ್ದರೆ ನೀವು ಅನಗತ್ಯ ತೊಂದರೆಗೆ ಸಿಲುಕಿ ನಿಮ್ಮ ಸಮಯವನ್ನು ವ್ಯರ್ಥ ಮಾಡುತ್ತೀರಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು
ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗಿನ ಹೊಂದಾಣಿಕೆಯೂ ಉತ್ತಮವಾಗಿರುತ್ತದೆ.ಪ್ರೀತಿಯ ದಂಪತಿಗಳು ತಮ್ಮ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಬೇಕು ಇಲ್ಲದಿದ್ದರೆ ನಿಮ್ಮ ನಡುವೆ ಪ್ರತ್ಯೇಕತೆಯ ಪರಿಸ್ಥಿತಿ ಉದ್ಭವಿಸಬಹುದು. ಆರೋಗ್ಯವು ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










