Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 7, ದಿನ ಭವಿಷ್ಯ: ಗಣೇಶ ಹಬ್ಬದ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಗಣೇಶ ಹಬ್ಬದ ಶುಭಾಶಯಗಳು.. ಗಣೇಶನ ಕೃಪೆ ನಿಮ್ಮ ಮೇಲಿರಲಿ, ನಿಮ್ಮೆಲ್ಲಾ ಇಷ್ಟಾರ್ಥ ನೆರವೇರಲಿ, ಸೆಪ್ಟೆಂಬರ್ 7 ರಾಶಿಫಲ ನೋಡೋಣ:
ಮೇಷ ರಾಶಿ
ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ. ನೀವು ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಸಂಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಹಿರಿಯರು ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಮಿಥುನ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಲ್ಲ, ಈ ದಿನ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು. ಅನಗತ್ಯ ಕೆಲಸಗಳಿಂದ ದೂರವಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ನಡುವೆ ಹೊಂದಾಣಿಕೆ ಇರಲಿದೆ.
ಕರ್ಕ ರಾಶಿ
ಕೆಲಸದ ಒತ್ತಡವಿರುವುದರಿಂದ ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಅಪೂರ್ಣವಾಗಿರುವ ಕೆಲಸ-ಕಾರ್ಯಗಳು ಪೂರ್ಣವಾಗಲಿದೆ. ವ್ಯಾಪಾರಿಗಳು ಉದ್ಯೋಗ ಲಾಭ ಪಡೆಯುತ್ತೀರಿ. ಮನೆಯ ವಾತಾವರಣ ಇರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ನೀವು ಈ ದಿನ ಚೈತನ್ಯದಂದ ಇರುವಿರಿ.
ಸಿಂಹ ರಾಶಿ
ಬೇಡದ ವಿಷಯಗಳಲ್ಲಿ ನೀವು ಸಮಯ ಕಲೆಯಬೇಡಿ. ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ, ಈ ದಿನ ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ನೀವು ಕೋಪವನ್ನು ನಿಯಂತ್ರಿಸಬೇಕು. ವೈವಾಹಿಕ ಜೀವನದಲ್ಲಿ ಏನಾದರು ಭಿನ್ನಾಭಿಪ್ರಾಯವಾದರೆ ಅದು ಬಗೆಹರಿಯಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲು ಸೋಂಕಿನ ಸಮಸ್ಯೆವಿರಬಹುದು.
ಕನ್ಯಾ ರಾಶಿ
ಕೆಲಸ-ಕಾರ್ಯಗಳಲ್ಲಿ ಈ ದಿನ ಉತ್ತಮವಾಗಿರಲಿದೆ. ಹಣದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಪಾಲುದಾರರ ಜೊತೆ ಭಿನ್ನಾಭಿಪ್ರಾಯವಾಗದಂತೆ ಜಾಗ್ರತೆವಹಿಸಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಅರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ನಕಾರಾತ್ಮಕ ಗುಣದ ವ್ಯಕ್ತಿಗಳಿಂದ ದೂರವಿರಿ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ಖರ್ಚು ನಿಯಂತ್ರಣ ಮಾಡಬೇಕು. ವ್ಯಾಪಾರಿಗಳಿಗೆ ಈ ದಿನ ದನ ಲಾಭವಾಗಲಿದೆ. ಮನೆಯಲ್ಲಿನ ಸಮಸ್ಯೆ ಬಗೆಹರಿಯಲಿದದೆ. ನೀವು ಯಾರನ್ನಾದರು ಪ್ರೀತಿಸುತ್ತಿದ್ದರೆ ಪ್ರೀತಿ ವ್ಯಕ್ತಪಡಿಸಲು ಸೂಕ್ತ ದಿನ. ವಿವಾಹಿತರಿಗೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಈ ದಿನ ನೀವು ಮಾತಿನ ಕಡೆಗೆ ಗಮನಹರಿಸಬೇಕು, ನಿಮ್ಮ ಮಾತೇ ನಿಮಗೇ ಸಮಸ್ಯೆ ಉಂಟಾಗಬಹುದು. ಕೆಲಸದಲ್ಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಸಹ ನೀವು ಪಡೆಯುತ್ತೀರಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ, ಹಳೆಯ ಕಾಯಿಲೆ ಮರುಕಳಿಸದಂತೆ ಜಾಗ್ರತೆವಹಿಸಿ.
ಧನು ರಾಶಿ
ಈ ದಿನ ನೀವು ಕೋಪವನ್ನು ನಿಯಂತ್ರಿಸಿ, ನಕಾರಾತ್ಮಕತೆಯು ನಿಮ್ಮನ್ನು ಮೀರಿಸಲು ಬಿಡಬೇಡಿ. ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ನಿಮ್ಮ ಪ್ರಮುಖ ಕೆಲಸ ಪೂರ್ಣಗೊಳಿಸಲಾಗುವುದು. ಅವಾಹಿತರಿಗೆ ಮದುವೆ ಸಂಬಂಧ ಬರಲಿದೆ. ನೀವು ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಅನ್ನು ದೀರ್ಘಕಾಲ ಬಳಸುತ್ತಿದ್ದರೆ ಕಣ್ಣುಗಳ ಆರೋಗ್ಯದ ಮೇಲೆ ಪರಿಣಾಮ ಬಿರುವುದು.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.ಕಚೇರಿಯ ವಾತಾವರಣವು ತುಂಬಾ ಒತ್ತಡದಿಂದ ಕೂಡಿರುತ್ತದೆ. ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಕುಂಭ ರಾಶಿ
ಕೆಲಸದ ವಿಚಾರದಲ್ಲಿ ಹೆಚ್ಚು ಟೆನ್ಶನ್ ಬೇಡ. ಕೆಲಸದ ಹೊರೆ ಹೆಚ್ಚಿದ್ದರೆ ಯೋಜನೆಯ ಪ್ರಕಾರ ಮಾಡಲು ಪ್ರಯತ್ನಿಸಿ. ಮನೆಯಲ್ಲಿ ಅನಗ್ಯತ ವಿಷಯಗಳಿಗೆ ಪ್ರಾಮುಖ್ಯತೆ ನೀಡಬೇಡಿ. ಸಂಗಾತಿಯ ಜೊತೆ ಕೋಪದಿಂದ ವರ್ತಿಸಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮೀನ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನದಲ್ಲಿ ಹೊಸ ತಿರುವು ದೊರೆಯಲಿದೆ. ವ್ಯಾಪಾರಿಗಳು ಕೆಲಸದ ಕಡೆಗೆ ಗಮನಹರಿಸಿ. ಕೋಪ ನಿಯಂತ್ರಿಸಿದರೆ ಒಳ್ಳೆಯದು. ಆರೋಗ್ಯಕ್ಕಾಗಿ ಆಹಾರಕ್ರಮದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










