Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಸೆಪ್ಟೆಂಬರ್ 8, ದಿನ ಭವಿಷ್ಯ:ಭಾನುವಾರದ ದಿನ ನಿಮ್ಮ ರಾಶಿಫಲ ಹೇಗಿದೆ?
ಶುಭ ಭಾನುವಾರ, ಈ ದಿನ ನಿಮ್ಮ ರಾಶಿಯ ರಾಶಿಫಲ ಹೇಗಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಬಾಕಿಯಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ವೈಯಕ್ತಿಕ ಬದುಕಿನ ಬಗ್ಗೆ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಒತ್ತಡ ತೆಗೆದುಕೊಳ್ಳಬೇಡಿ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದಾದರೆ ಚೆನ್ನಾಗಿ ಯೋಚಿಸಿ ತೆಗೆದುಕೊಳ್ಳಿ ಎಂದು ಸಲಹೆ ನೀಡಲಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇನ್ನು ಮನೆಯಲ್ಲಿ ಹೆಚ್ಚು ಕೋಪದಿಂದ ವರ್ತಿಸಬೇಡಿ. ನಿಮಗೆ ಯಕೃತ್ತು ಸಂಬಂಧಿತ ಯಾವುದೇ ಕಾಯಿಲೆ ಇದ್ದರೆ ಜಾಗ್ರತೆವಹಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಇನ್ನು ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನೆಯಲ್ಲಿನ ಮಸಸ್ಯೆ ಬಗೆಹರಿಯುವ ಸೂಚನೆಯಿದೆ. ವ್ಯಾಪಾರಿಗಳಿಗೂ ಈ ದಿನ ಧನ ಲಾಭವಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೂ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳು ಬಯಸಿದ ಲಾಭ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ, ಆದರೆ ಹೆಚ್ಚು ಯೋಚಿಸದೆ ಹಣ ಖರ್ಚು ಮಾಡಬೇಡಿ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ, ಕುಟುಂಬ ಬದುಕಿನಲ್ಲಿ ಸಂತೋಷ ಇರಲಿದೆ.
ಸಿಂಹ ರಾಶಿ
ಕೆಲಸದ ಸ್ಥಳದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳ ಸಾಧ್ಯತೆಯಿದೆ. ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯವಿರಬಹುದು, ಏನೇ ಸಮಸ್ಯೆಯಿದ್ದರೆ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಆರ್ಥಿಕವಾಗಿ ಈ ಸಮಯ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ಸಮಯದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ವೃತ್ತಿ ಬದುಕಿನ ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿದರೆ ಒಳ್ಳೆಯದು.ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ಹೆಚ್ಚು ಹಣ ಖರ್ಚು ಮಾಡಲು ಹೋಗಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಂಗಾತಿಯ ಬೆಂಬಲ ನಿಮಗೆ ಸಿಗುವುದರಿಂದ ಕೆಲವೊಂದು ನಿರ್ಧಾರಗಳನ್ನು ಆತ್ಮವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ, ವ್ಯಾಪಾರವನ್ನು ವಿಸ್ತರಿಸಲು ಉತ್ತಮ ಅವಕಾಶವೂ ಸಿಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಧನು ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದರೆ ಸುಧಾರಣೆ ಕಂಡು ಬರುವುದು. ಹಣದ ವಿಚಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಈ ದಿನ ಅತಿಯಾಗಿ ಕೋಪಗೊಳ್ಳಬೇಡಿ, ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ವೈವಾಹಿಕ, ಪ್ರಿತಿ ಬದುಕು ಚೆನ್ನಾಗಿರಲಿದೆ, ಆರೋಗ್ಯ ಕುಡ ಸಾಧಾರಣವಾಗಿರಲಿದೆ.
ಮಕರ ರಾಶಿ
ಸ್ಥಗಿತಗೊಂಡ ವ್ಯಾಪಾರ ಯೋಜನೆಗಳು ಮತ್ತೆ ಶುರು ಮಾಡಲು ಇದು ಸೂಕ್ತ ಸಮಯ. ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವೈವಾಹಿಕ ಬದುಕಿನಲ್ಲಿನ ಭಿನ್ನಾಭಿಪ್ರಾಯ ದೂರಾಗುವುದು.
ಕುಂಭ ರಾಶಿ
ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಚಿಂತೆ ದೂರವಾಗಲಿದೆ. ಸಂಗಾತಿಗೆ ಅರೋಗ್ಯ ಸಮಸ್ಯೆ ಇದ್ದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಹಾಗೂ ಸಂಗಾತಿನ ನಡುವೆ ಹೊಂದಾಣಿಕೆ ಇರುವುದರಿಂದ ಯಾವುದೇ ಸಮಸ್ಯೆ ಇರಲ್ಲ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಕಾಡಬಹುದು.
ಮೀನ ರಾಶಿ
ಹಣದ ವಿಷಯದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ಉಳಿತಾಯದತ್ತ ಗಮನಹರಿಸಿ ಮತ್ತು ಅನಗತ್ಯ ವೆಚ್ಚಗಳಿಂದ ದೂರವಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ನೀವು ಸಂಗಾತಿಯ ಭಾವನೆಗಳನ್ನು ಗೌರವಿಸುವುದು ಒಳ್ಳೆಯದು. ಚಿಕ್ಕ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications