Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ಏಪ್ರಿಲ್ 11: ಗುರುವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಏಪ್ರಿಲ್ 11 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ವಿದ್ಯಾರ್ಥಿಗಳು ತಮ್ಮ ಶ್ರಮಕ್ಕೆ ತಕ್ಕಂತೆ ಫಲಿತಾಂಶ ಪಡೆಯಬಹುದು. ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ಕೆಲಸದಲ್ಲಿ ಇಂದು ಮಿಶ್ರಫಲ. ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು ಇಲ್ಲದಿದ್ದರೆ ನಿಮ್ಮ ಆರೋಗ್ಯ ಹದಗೆಡಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ದೈನಂದಿನ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಮಧ್ಯಾಹ್ನ 12:50 ರಿಂದ 3:30 ರವರೆಗೆ

ವೃಷಭ ರಾಶಿ
ಯಾವುದೇ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಖಬೇಡಿ, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ಮಗುವಿನ ಶಿಕ್ಷಣ ಇತ್ಯಾದಿಗಳಿಗೆ ಸಂಬಂಧಿಸಿದಂತೆ ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ನೀವು ಮುಂಚಿತವಾಗಿ ಸಿದ್ಧಪಡಿಸಿದರೆ, ನೀವು ಉಳಿತಾಯದತ್ತಲೂ ಗಮನ ಹರಿಸಲು ಸಾಧ್ಯವಾಗುವುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ
ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಸವಾಲಿನಿಂದ ಕೂಡಿದೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಇದೆಲ್ಲವೂ ನಿಮ್ಮ ಶ್ರಮದ ಫಲ. ಇಂದು ನೀವು ಹಣದ ವಿಷಯದಲ್ಲಿ ತುಂಬಾ ಅದೃಷ್ಟದ ದಿನ. ಕಡಿಮೆ ಶ್ರಮದಿಂದ ಉತ್ತಮ ಹಣ ಗಳಿಸಬಹುದು. ತುಂಬಾ ಸಮಯದಿಂದ ಬರಬೇಕಾಗಿದ್ದ ಹಣ ನಿಮ್ಮ ಕೈ ಸೇರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 7:30 ರಿಂದ 9:20 ರವರೆಗೆ
ಕರ್ಕ ರಾಶಿ
ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ, ನಿಮ್ಮ ಮಾತಿನ ಮೇಲಿ ನಿಗಾ ಇರಲಿ, ಇಲ್ಲದಿದ್ದರೆ ನಿಮ್ಮ ಮಾತು ಸಂಗಾತಿಯ ಮನಸ್ಸು ನೋಯಿಸಬಹುದು. ಕಚೇರಿಯಲ್ಲಿ, ನಿಮ್ಮ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಲು ಹೋಗಬೇಡಿ, ವ್ಯಾಪರಿಗಳು ಈ ದಿನ ಜಾಗ್ರತೆವಹಿಸಿ.ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಬರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 7:50 ರಿಂದ 10:35 ರವರೆಗೆ
ಸಿಂಹ ರಾಶಿ
ವ್ಯಾಪಾರಿಗಳಿಗೆ ಇಂದು ಬಹಳ ಲಾಭದಾಯಕ ದಿನವಾಗಿದೆ. ನೀವು ಬಯಸಿದ ಲಾಭವನ್ನು ಪಡೆಯಬಹುದು ಅಲ್ಲದೆ ನಿಮ್ಮ ವ್ಯವಹಾರದ ನಿರ್ಧಾರಗಳನ್ನು ನೀವು ಪೂರ್ಣ ವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ಉದ್ಯೋಗಸ್ಥರು ಇಂದು ಕೆಲಸಕ್ಕಾಗಿ ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನು ನೀವು ಮುಂದುವರಿಸಬೇಕು. ಆರೋಗ್ಯದ ಕಡೆಗೆ ಸ್ವಲ್ಪ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 29
ಶುಭ ಮುಹೂರ್ತ: ಮಧ್ಯಾಹ್ನ 1 ರಿಂದ 3 ರವರೆಗೆ
ಕನ್ಯಾ ರಾಶಿ
ಗ್ರಹಗಳ ನಕಾರಾತ್ಮಕ ಪ್ರಭಾವದಿಂದಾಗಿ, ಸೋಮಾರಿತನ ಇರಲಿದೆ, ನೀವು ಕೆಲಸದಲ್ಲಿ ಹೆಚ್ಚು ಆಸಕ್ತಿಯನ್ನು ತೋರುವುದಿಲ್ಲ. ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಮಾಡಲು ಹೊರಟರೆ ಆ ಕೆಲಸಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ, ಆದರೆ ನಿಮ್ಮ ಈ ಸಮಸ್ಯೆ ತಾತ್ಕಾಲಿಕವಾಗಿರುವುದರಿಂದ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಖರ್ಚು ನಿಯಂತ್ರಿಸಿದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಗ್ಗೆ 5:30 ರಿಂದ 10 ರವರೆಗೆ
ತುಲಾ ರಾಶಿ
ಕಳೆದ ಕೆಲವು ದಿನಗಳಿಂದ ನಿಮ್ಮ ವೈವಾಹಿಕ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ. ನಿಮ್ಮ ಮಾತಿನ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಹಾಗೂ ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸಹ ನೀವು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಇಂದು ಬಾಕಿ ಇರುವ ಹಣವನ್ನು ಮರಳಿ ಪಡೆಯಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಕೆಲ ಆರೋಗ್ಯ ಸಮಸ್ಯೆವಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30 ರವರೆಗೆ
ವೃಶ್ಚಿಕ ರಾಶಿ
ಉದ್ಯೋಗಿಗಳು ಶುಭ ಸುದ್ದಿಯನ್ನು ಪಡೆಯಬಹುದು. ಇಂದು ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ವ್ಯಾಪಾರಿಗಳು ಇಂದು ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ವಿಶೇಷವಾಗಿ ನೀವು ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನೀವು ಎಚ್ಚರಿಕೆಯಿಂದ ಯೋಚಿಸಿದ ನಂತರವೇ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳಬೇಕು, ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಪಾಲುದಾರರ ಮೇಲೆ ಒಂದ ಕಣ್ಣಿಡುವುದು ಒಳ್ಳೆಯದು. ಹಣದ ವಿಷಯದಲ್ಲಿ ಇಂದು ನಿಮಗೆ ಸರಾಸರಿ ದಿನವಾಗಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ಮುಹೂರ್ತ: ಬೆಳಗ್ಗೆ 8 ರಿಂದ ಮಧ್ಯಾಹ್ನ 12
ಧನು ರಾಶಿ
ಇಂದು ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಈ ದಿನ ಹಣ ಗಳಿಸುವ ಉತ್ತಮ ಅವಕಾಶ ನಿಮ್ಮ ಕೈಯಿಂದ ಕೈ ತಪ್ಪಬಹುದು. ನಿಮ್ಮ ಸಂಗಾತಿಯು ತುಂಬಾ ರೊಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ, ಅವರ ಭಾವನೆಯ ಕಡೆಗೂ ಗಮನ ನೀಡಬೇಕು. ಅತಿಯಾದ ಮಾನಸಿಕ ಒತ್ತಡವು ನಿಮ್ಮ ಆರೋಗ್ಯವನ್ನು ಹಾಳುಮಾಡುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಗ್ಗೆ 6:20 ರಿಂದ 11 ರವರೆಗೆ
ಮಕರ ರಾಶಿ
ಈ ದಿನ ನೀವು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಿಮ್ಮ ಮೇಲೆ ಹೆಚ್ಚು ಒತ್ತಡ ಹೇರಬೇಡಿ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಆದಾಯದಲ್ಲಿ ಹೆಚ್ಚಳವಾಗುವ ಬಲವಾದ ಸಾಧ್ಯತೆಯಿದೆ. ನೀವು ಯಾವುದೇ ಹಳೆಯ ಸಾಲವನ್ನು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರಸ್ಥರಿಗೆ ಯಾವುದೇ ಬಾಕಿ ಉಳಿದಿರುವ ದಾಖಲೆಗಳನ್ನು ಪೂರ್ಣಗೊಳಿಸಬಹುದು. ದಿನದ ಎರಡನೇ ಭಾಗದಲ್ಲಿ ನೀವು ಹಣಕಾಸಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ:45
ಶುಭ ಸಮಯ: ಸಂಜೆ 7 ರಿಂದ 9:15 ರವರೆಗೆ
ಕುಂಭ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ವ್ಯಾಪಾರಿಗಳು ಕೆಲವು ಪ್ರಮುಖ ವ್ಯಾಪಾರ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಬಯಸಿದರೆ ನೀವು ಉತ್ತಮ ಕೊಡುಗೆಯನ್ನು ಪಡೆಯಬಹುದು. ಉದ್ಯೋಗಿಗಳ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲಾಗುವುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 22
ಶುಭ ಸಮಯ: ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 1 ರವರೆಗೆ
ಮೀನ ರಾಶಿ
ಉದ್ಯೋಗಸ್ಥರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ವ್ಯಾಪಾರಗಳು ಇಂದು ಬಹಳ ಲಾಭದಾಯಕ ದಿನವಾಗಿದೆ. ಕುಟುಂಬ ಜೀವನ ಚೆನ್ಬಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 7:20 ರಿಂದ 8:20 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










