ದಿನ ಭವಿಷ್ಯ ಏಪ್ರಿಲ್ 18: ಗುರುವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಗುರುವಾರದ ಈ ದಿನ (ಏಪ್ರಿಲ್ 18) ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ

ಅನೇಕ ಕೆಲಸವನ್ನು ಒಂದೇ ಬಾರಿ ಮಾಡಲು ಹೋಗಬೇಡಿ. ಹಾಗೆ ಮಾಡಿದರೆ ಕೆಲಸದಲ್ಲಿ ಅನೇಕ ತಪ್ಪುಗಾಗುವುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ವ್ಯಾಪಾರಿಗಳಿಗೆ ಈ ದಿನ ಸರಾಸರಿಯಾಗಿರಲಿದೆ. ಮನೆಯಲ್ಲಿನ ಸಮಸ್ಯೆಯನ್ನು ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಿಗ್ಗೆ 5 ರಿಂದ ರಾತ್ರಿ 8 ರವರೆಗೆ

Dina Rashi Bhavishya

ವೃಷಭ ರಾಶಿ

ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಹೆಚ್ಚಿನ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ನೀವು ಹೊಸ ತಂತ್ರಜ್ಞಾನವನ್ನು ಬಳಸಿದರೆ, ನೀವು ಶೀಘ್ರದಲ್ಲೇ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಮನೆಯ ವಾತಾವರಣ ಸಂತೋಷದಿಮದ ಕೂಡಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಮಧ್ಯಾಹ್ನ 2:45 ರಿಂದ 4 ರವರೆಗೆ

ಮಿಥುನ ರಾಶಿ

ಈ ದಿನ ಪ್ರೇಮಿಗಳಿಗೆ, ವಿವಾಹಿತರಿಗೆ ರೊಮ್ಯಾಂಟಿಕ್ ದಿನವಾಗಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಹಣಕಾಸಿಗೆ ಸಂಬಂಧಿಸಿದ ನಿರ್ಧಾರವನ್ನು ಆತುರದಿಂದ ತೆಗೆದುಕೊಲ್ಳಬೇಡಿ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಲಿದೆ. ದೈಹಿಕ-ಮಾನಸಿಕ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಬೆಳಿಗ್ಗೆ 8:05 ರಿಂದ 10:20 ರವರೆಗೆ

ಕರ್ಕ ರಾಶಿ

ನಿಮ್ಮ ಕುಟುಂಬ ಸದಸ್ಯರೊಂದಿಗೆ ಒಳ್ಳೆಯ ಸಮಯ ಕಳೆಯಬಹುದು. ಹಣದ ಖರ್ಚು ಅಧಿಕವಿರಲಿದೆ, ಸಾಲ ಮಾಡಲು ಹೋಗಬೇಡಿ. ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳು ಈ ದಿನ ಹೆಚ್ಚು ಶ್ರಮಪಡಬೇಕು. ನಿಮ್ಮ ವ್ಯವಹಾರ ಪ್ರಗತಿಗೊಳಿಸಲು ಅನುಭವಿ ವ್ಯಕ್ತಿಯಿಂದ ಮಾರ್ಗದರ್ಶನ ಪಡೆಯಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಶುಭ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ

ನೀವು ಇತ್ತೀಚೆಗೆ ಯಾವುದೇ ಕಾರ್ಯಾಚರಣೆ ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಇಂದು ನಿಮಗೆ ಲಾಭದಾಯಕವಾಗಿರುತ್ತದೆ. ಚಿಕ್ಕ ವಿಷಯಕ್ಕೆ ಕೋಪ ಡಪುವ ಸ್ವಭಾವವೇ ನಮಗೆ ಸಮಸ್ಯೆಯಾಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಮಧ್ಯಾಹ್ನ 2 ರಿಂದ 4:30 ರವರೆಗೆ

ಕನ್ಯಾ ರಾಶಿ

ಈ ದಿನ ಅನಗ್ಯತ ಚಿಂತೆ ಮಾಡುತ್ತಿದ್ದೀರಿ ಎಂದು ಹೇಳಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲು ಹೋದರೆ, ನೀವು ಜಾಗರೂಕರಾಗಿರಿ, ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 26
ಶುಭ ಸಮಯ: ಬೆಳಗ್ಗೆ 4:20 ರಿಂದ 8:50 ರವರೆಗೆ

ತುಲಾ ರಾಶಿ

ಕಚೇರಿಯಲ್ಲಿ, ನಿಮ್ಮ ಕೆಲಸವನ್ನು ಹೆಚ್ಚಿನ ಗಮನಹರಿಸಿ ಮಾಡಲು ಸಲಹೆ ನೀಡಲಾಗುವುದು. ವ್ಯಾಪಾರಸ್ಥರಿಗೆ ಲಾಭದ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಹೊಸ ಆದಾಯದ ಮೂಲವನ್ನು ಸಹ ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಸಂಜೆ 7 ರಿಂದ 9:05 ರವರೆಗೆ

ವೃಶ್ಚಿಕ ರಾಶಿ

ವ್ಯಾಪಾರಿಗಳು ಈ ದಿನ ಶುಭ ಸುದ್ದಿಯನ್ನು ಪಡೆಯಬಹುದು. ಹಣದ ಬಗ್ಗೆ ಹೇಳುವುದಾದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ತುಂಬಾನೇ ಶುಭವಾಗಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ

ಧನು ರಾಶಿ

ಇಂದು ಮನಸ್ಸಿನಲ್ಲಿ ಬೇಸರವಿರುತ್ತದೆ, ಯಾವುದೇ ಕೆಲಸದ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು.
ವ್ಯಾಪಾರಿಗಳ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ ಮಾಡುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ

ಮಕರ ರಾಶಿ

ನೀವು ಬಯಸಿದಂತೆ ವರ್ಗಾವಣೆ ಸಿಗಲಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ನಷ್ಟವನ್ನು ಅನುಭವಿಸಿದರೆ, ಅದನ್ನು ಸರಿದೂಗಿಸಲು ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ಮನೆಯಲ್ಲಿ ವಯಸ್ಸಾದವರು ಇದ್ದರೆ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಡುವ ಸಾಧ್ಯತೆ ಇದೆ. ಇಂದು ನೀವು ವೈದ್ಯರು ಮತ್ತು ಔಷಧಿಗಳಿಗಾಗಿ ಬಹಳಷ್ಟು ಹಣವನ್ನು ಖರ್ಚಾಗಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಗ್ಗೆ 6:20 ರಿಂದ 9:15 ರವರೆಗೆ

ಕುಂಭ ರಾಶಿ

ನಿಮ್ಮ ಕೌಟುಂಬಿಕ ಜೀವನದ ಕಡೆಗೆ ಹೆಚ್ಚಿ ಗಮನಹರಿಸಬೇಕು. ನಿಮ್ಮ ಆದಾಯವನ್ನು ಹೆಚ್ಚಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಶೀಘ್ರದಲ್ಲೇ ನೀವು ಎಲ್ಲಾ ಸಾಲಗಳಿಂದ ಮುಕ್ತರಾಗಬಹುದು.ವ್ಯಾಪಾರಸ್ಥರಿಗೆ ಇಂದು ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ಆರೋಗ್ಯ ಕೂಡ ಸುಧಾರಣೆಯಾಗಲಿದೆ
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ:42
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ

ನೀವು ವಿದ್ಯಾರ್ಥಿಯಾಗಿದ್ದರೆ ನೀವು ನಿಮ್ಮ ಅಧ್ಯಯನದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 4 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: April 18 Daily Horoscope Prediction Of 12 Zodiac Signs 2024 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Pieces, Capricorn, Aquarius, And Pisces In Kannada
Story first published: Wednesday, April 17, 2024, 20:10 [IST]
X
Desktop Bottom Promotion