ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಶನಿವಾರದ ಈ ದಿನ (ಏಪ್ರಿಲ್ 20) ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ

ವೈವಾಹಿಕ ಜೀವನದಲ್ಲಿನ ಸಮಸ್ಯೆಯಿಂದಾಗಿ ನಿಮಗೆ ಬೇಸರವಾಗುವುದು. ಸಂಗಾತಿಯ ಭಾವನೆಯನ್ನು ಅರ್ಥಮಾಡಿಕೊಳ್ಳಬೇಕು. ನೀವು ಹೊಸ ಪ್ರಾರಂಭವನ್ನು ಮಾಡಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಯಾವುದೇ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಿದ್ದರೆ, ನಿಮ್ಮ ನಿರ್ಧಾರವನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಲು ನಿಮಗೆ ಸಲಹೆ ನೀಡಲಾಗುವುದು. ಉದ್ಯೋಗಸ್ಥರಿಗೆ ಇಂದು ಬಿಡುವಿಲ್ಲದ ದಿನವಾಗಿರುತ್ತದೆ. ಆದರೆ ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಚಿಂತೆಯಿಲ್ಲದೆ ಇರಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 40
ಶುಭ ಸಮಯ: ಮಧ್ಯಾಹ್ನ 12:50 ರಿಂದ ಸಂಜೆ 4 ರವರೆಗೆ

Dina Bhavishya

ವೃಷಭ ರಾಶಿ

ನಿಮ್ಮ ರಹಸ್ಯ ಶತ್ರುಗಳೊಂದಿಗೆ ನೀವು ಜಾಗರೂಕರಾಗಿರಬೇಕು ಇಲ್ಲದಿದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು. ಕೆಲಸದಲ್ಲಿ ಈ ದಿನ ಚೆನ್ನಾಗಿರಲಿದೆ. ಈ ದಿನ ಯಾರಿಗೂ ಸಾಲ ನೀಡದಿರುವುದು ಒಳ್ಳೆಯದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 1
ಶುಭ ಸಮಯ: ಸಂಜೆ 6:30 ರಿಂದ ರಾತ್ರಿ 9 ರವರೆಗೆ

ಮಿಥುನ ರಾಶಿ

ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಈ ದಿನ ನಿಮ್ಮ ಕೆಲಸದಲ್ಲಿ ಯಾವುದೇ ಅಡೆತಡೆ ಇರಲ್ಲ.
ಕಚೇರಿಯಲ್ಲಿ ಯಾರ ಬಗ್ಗೆ ತಮಾಷೆ ಮಾಡಬೇಡಿ. ಆರೋಗ್ಯ ಈ ದಿನ ಉತ್ತಮವಾಗಿರುವುದಿಲ್ಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಗ್ಗೆ 6:20 ರಿಂದ 8:30 ರವರೆಗೆ

ಕರ್ಕ ರಾಶಿ

ವೈವಾಹಿಕ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ಹಣದ ವಿಚಾರದಲ್ಲಿ ಈ ದಿನ ಉತ್ತಮವಲ್ಲ. ಕಚೇರಿಯಲ್ಲಿ ಕೆಲಸವನ್ನು ಬೇಗ ಮಾಡಿ ಮುಗಿಸಲು ಪ್ರಯತ್ನಿಸಿ. ವ್ಯಾಪಾರಿಗಳು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 23
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಸಿಂಹ ರಾಶಿ

ನೀವು ಕಚೇರಿಯಲ್ಲಿ ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನೀವು ಆಸ್ತಿಯಲ್ಲಿ ಹೂಡಿಕೆ ಮಾಡಲು ಬಯಸಿದರೆ ಅದು ನಿಮಗೆ ಪ್ರಯೋಜನಕಾರಿಯಾಗಿದೆ. ಮನೆಯಲ್ಲಿ ಹಿರಿಯರ ಮಾತುಗಳನ್ನು ನಿರ್ಲಕ್ಷಿಸಬೇಡಿ. ಸಂಗಾತಿಯ ಮನಸ್ಸಿಗೆ ಬೇಸರವಾಗುವ ಕೆಲಸ ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಗ್ಗೆ 5:15 ರಿಂದ 8 ರವರೆಗೆ

ಕನ್ಯಾ ರಾಶಿ

ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಇಂದು ನಿಮಗೆ ತುಂಬಾ ಅದೃಷ್ಟದ ದಿನವಾಗಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತಾರೆ. ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಇಂದು ನೀವು ದೊಡ್ಡ ಲಾಭವನ್ನು ಪಡೆಯಬಹುದು. ಇಂದು ನೀವು ಮನೆಯಲ್ಲಿ ಸಣ್ಣ ಪಾರ್ಟಿಯನ್ನು ಆಯೋಜಿಸುವ ಸಾಧ್ಯತೆಯಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹಣಕಾಸಿನ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ

ತುಲಾ ರಾಶಿ

ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಲಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಿದರೆ ಖಂಡಿತ ಯಶಸ್ಸು ಸಿಗಲಿದೆ. ವ್ಯಾಪಾರಿಗಳು ನಿರೀಕ್ಷಿತ ಫಲಿತಾಂಶ ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿಸಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ:45
ಶುಭ ಸಮಯ: ಸಂಜೆ 5:20 ರಿಂದ ರಾತ್ರಿ 9:15 ರವರೆಗೆ

ವೃಶ್ಚಿಕ ರಾಶಿ

ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಗೌರವ ಹೆಚ್ಚಾಗುತ್ತದೆ. ಇಂದು ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ನೀವು ಷೇರು ಮಾರುಕಟ್ಟೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದರೆ ಇಂದು ನಿಮಗೆ ಲಾಭದಾಯಕವಾಗಿರುತ್ತದೆ. ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ ಕೆಲ ಭಿನ್ನಾಭಿಪ್ರಾಯವಿರಬಹುದು. ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 6:30 ರಿಂದ 9:50 ರವರೆಗೆ

ಧನು ರಾಶಿ

ಈ ಸಮಯದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತಪ್ಪಿಸಲು ವ್ಯಾಪಾರಿಗಳಿಗೆ ಸಲಹೆ ನೀಡಲಾಗುವುದು, ಉದ್ಯೋಗಿಗಳು ತಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ನಿಮ್ಮ ಸಂಗಾತಿಯ ಮನಸ್ಥಿತಿ ಚೆನ್ನಾಗಿರಲ್ಲ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಏರಳಿತಗಳಿಂದ ಕೂಡಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 9:15 ರವರೆಗೆ

ಮಕರ ರಾಶಿ

ವ್ಯಾಪಾರಿಗಳು ಇಂದು ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ನೀವು ದೊಡ್ಡ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಚೆನ್ನಾಗಿ ಯೋಚಿಸಿ ಮಾಡಿ. ನೀವು ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಸಂಬಳಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆ ಸಮಸ್ಯೆ ಬಗೆಹರಿಯಲಿದೆ. ವೈಯಕ್ತಿಕ ಜೀವನದಲ್ಲಿ ಕೆಲವು ಗೊಂದಲಗಳು ಹೆಚ್ಚಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8:20 ರವರೆಗೆ

ಕುಂಭ ರಾಶಿ

ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ತುಂಬಾ ಕಷ್ಟಕರವಾದ ದಿನವಾಗಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಆರೋಗ್ಯವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

ಮೀನ ರಾಶಿ

ನೀವು ಅವಿವಾಹಿತರಾಗಿದ್ದರೆ ಈ ದಿನ ನಿಮ್ಮ ಜೀವನ ಸಂಗಾತಿಯನ್ನು ಭೇಟಿಯಾಗಬಹುದು. ಹಣದ ವಿಷಯಗಳಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ತಾಯಿ ಲಕ್ಷ್ಮಿಯ ಅನುಗ್ರಹದಿಂದ ನಿಮಗೆ ಸಂಪತ್ತು ಲಭಿಸಲಿದೆ. ವ್ಯಾಪಾರಸ್ಥರ ಯಾವುದೇ ಬಾಕಿ ಕೆಲಸಗಳನ್ನು ಇಂದು ಪೂರ್ಣಗೊಳಿಸಬಹುದು. ಹೊಸ ವ್ಯಾಪಾರ ಯೋಜನೆಗಳನ್ನು ಮಾಡಲು ದಿನವು ಅನುಕೂಲಕರವಾಗಿದೆ. ಉದ್ಯೋಗಸ್ಥರಿಗೆ ಸಾಮಾನ್ಯ ದಿನ ಇರುತ್ತದೆ. ಮಧುಮೇಹಿಗಳು ಜಾಗ್ರತೆವಹಿಸಬೇಕು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಗ್ಗೆ 6 ರಿಂದ 9:25 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: April 20 Daily Horoscope Prediction Of 12 Zodiac Signs 2024 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Pieces, Capricorn, Aquarius, And Pisces In Kannada
X
Desktop Bottom Promotion