ದಿನ ಭವಿಷ್ಯ ಏಪ್ರಿಲ್ 5: ಶುಕ್ರವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ವೈದಿಕಶಾಸ್ತ್ರದ ಪ್ರಕಾರ ಏಪ್ರಿಲ್ 5 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:

ಮೇಷ ರಾಶಿ

ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ದೀರ್ಘಕಾಲದಿಂದ ಶ್ರಮಿಸುತ್ತಿದ್ದರೆ, ಇಂದು ನೀವು ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ಕಣ್ಣಿನ ಆರೋಗ್ಯದ ಕೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಗ್ಗೆ 5 ರಿಂದ 7 ರವರೆಗೆ

Dina Bhavishya

ವೃಷಭ ರಾಶಿ

ನಿಮ್ಮ ಮನಸ್ಸಿನ ಆಸೆ ಈಡೇರಲಿದೆ. ಇಂದು ನೀವು ಕೆಲಸದ ಸ್ಥಳದಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು. ಉದ್ಯಮಿಗಳು ಭಾರಿ ಆರ್ಥಿಕ ಲಾಭವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನಿಮ್ಮ ವ್ಯವಹಾರದಲ್ಲಿ ಇಂದು ನೀವು ದೊಡ್ಡ ಬದಲಾವಣೆಯನ್ನು ನೋಡುತ್ತೀರಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಕೆಲವು ಅನಗತ್ಯ ಖರ್ಚುಗಳು ಉಂಟಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ

ಮಿಥುನ ರಾಶಿ

ಅತಿಯಾದ ಆಸಕ್ತಿಯಿಂದ ಮಾಡುವ ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ಉದ್ಯಮಿಗಳು ಭಾರಿ ಆರ್ಥಿಕ ಲಾಭವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಕೆಲವು ಅನಗತ್ಯ ಖರ್ಚುಗಳು ಉಂಟಾಗಬಹುದು. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಒಳ್ಳೆಯದು ಇಲ್ಲದಿದ್ದರೆ ನಿಮ್ಮ ಹಣದ ಸಮಸ್ಯೆ ಹೆಚ್ಚಾಗುವುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ

ಕರ್ಕ ರಾಶಿ'

ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಹಣದ ವಿಷಯಗಳಲ್ಲಿ ನೀವು ಅದೃಷ್ಟವನ್ನು ಪಡೆಯುತ್ತೀರಿ. ಕಡಿಮೆ ಶ್ರಮದಿಂದ ಉತ್ತಮ ಹಣ ಗಳಿಸಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30 ರವರೆಗೆ

ಸಿಂಹ ರಾಶಿ

ಉದ್ಯೋಗಸ್ಥರಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ಈ ದಿನ ಹೆಚ್ಚು ಹಣ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು. ನಿಮ್ಮ ಕುಟುಂಬದ ಕಡೆಗೆ ಗಮನಹರಿಸಬೇಕು. ನಿಮಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಇದ್ದರೆ ಇಂದು ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 40
ಶುಭ ಸಮಯ: ಬೆಳಗ್ಗೆ 7:30 ರಿಂದ 10 ರವರೆಗೆ

ಕನ್ಯಾ ರಾಶಿ

ಇಂದು ನಿಮಗೆ ಸ್ವಲ್ಪ ಸವಾಲಾಗಿರುತ್ತದೆ . ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಇದು ನಿಮ್ಮ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಇಂದು ಕೆಲಸಕ್ಕಾಗಿ ಪ್ರಯಾಣಿಸಿದರೆ, ನಿಮ್ಮ ಪ್ರಯಾಣವು ನಿಮ್ಮ ಸಮಯ ಮತ್ತು ಹಣವನ್ನು ಮಾತ್ರ ವ್ಯರ್ಥ ಮಾಡುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 26
ಶುಭ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ

ತುಲಾ ರಾಶಿ

ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಇಂದು ನೀವು ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ನಿಮ್ಮ ಒಡಹುಟ್ಟಿದವರ ಜೊತೆ ಸಂಬಂದ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಅಗತ್ಯಕ್ಕಿಂತ ಹೆಚ್ಚು ಖರ್ಚು ಆಗಬಹುದು. ಆರೋಗ್ಯದ ಬಗ್ಗೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಸಂಜೆ 5 ರಿಂದ 7:30 ರವರೆಗೆ

ವೃಶ್ಚಿಕ ರಾಶಿ

ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ತುಂಬಾನೇ ಗಮನ ಹರಿಸಬೇಕು, ನಿಮ್ಮ ಮನಸ್ಸು ಬೇರೆಯತ್ತ ಹರಿಯಲು ಬಿಡಬೇಡಿ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಕಛೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಇರುತ್ತದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಲ್ಲ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಏರಿಳಿತಗಳಿಂದ ಕೂಡಿರುತ್ತದೆ. ತಂದೆಯ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ

ಆರ್ಥಿಕವಾಗಿ ಈ ದಿನ ಒಳ್ಳೆಯದು. ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸುತ್ತೀರಿ. ನಿರುದ್ಯೋಗಳಾಗಿದ್ದರೆ ನೀವು ಶೀಘ್ರದಲ್ಲೇ ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಆದರೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ

ಮಕರ ರಾಶಿ

ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಲ್ಲ, ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನೀವು ತೆಗೆದುಕೊಳ್ಳುವ ಯಾವುದೇ ಆತುರದ ನಿರ್ಧಾರವು ನಿಮ್ಮ ಸಮಸ್ಯೆ ಹೆಚ್ಚಿಸುತ್ತದೆ. ಉದ್ಯೋಗಸ್ಥರು ಕಚೇರಿಯಲ್ಲಿ ಅತಿಯಾದ ಆತ್ಮವಿಶ್ವಾಸ ಪ್ರದರ್ಶನ ಮಾಡಲು ಹೋಗಬೇಡಿ. ಹಣದ ವಿಷಯದಲ್ಲಿ, ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಿದರೆ, ನಿಮ್ಮ ಹಣಕಾಸಿನ ಸಮಸ್ಯೆಗಳು ಶೀಘ್ರದಲ್ಲೇ ದೂರವಾಗಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಿಗ್ಗೆ 6 ರಿಂದ 9:50 ರವರೆಗೆ

ಕುಂಭ ರಾಶಿ

ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆಯಿದ್ದರೆ, ನಿಮ್ಮ ಆಲೋಚನೆಗಳನ್ನು ನಿಮ್ಮ ಪ್ರೀತಿಪಾತ್ರರ ಜೊತೆ ಮುಕ್ತವಾಗಿ ಹಂಚಿಕೊಳ್ಳಿ. ಇಂದು ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದುಂದು ವೆಚ್ಚ ಮಾಡಬೇಡಿ. ಕೆಲಸದ ವಿಷಯದಲ್ಲಿ ದಿನವು ಮಿಶ್ರಫಲ. ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತವೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 8
ಶುಭ ಸಮಯ: ಸಂಜೆ 7:35 ರಿಂದ 9:15 ರವರೆಗೆ

ಮೀನ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಆದಾಯ ಹೆಚ್ಚಾಗಲಿದೆ. ಇಂದು ನಿಮ್ಮ ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು. ನಿಮ್ಮ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ಪ್ರಯತ್ನಿಸುವುದು ಉತ್ತಮ. ಆರೋಗ್ಯದ ದೃಷ್ಟಿಯಿಂದ ಇಂದು ಸಾಮಾನ್ಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಬೆಳಗ್ಗೆ 7:30 ರಿಂದ 11 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: April 5 Daily Horoscope Prediction Of 12 Zodiac Signs 2024 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Pieces, Capricorn, Aquarius, And Pisces In Kannada
Story first published: Thursday, April 4, 2024, 21:01 [IST]
X
Desktop Bottom Promotion