Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ ಏಪ್ರಿಲ್ 7: ಭಾನುವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಏಪ್ರಿಲ್ 7 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ, ಲಾಭ ಗಳಸಿಲು ಸಾಧ್ಯವಾಗುವುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಬಯಸಿದರೆ ಉತ್ತಮ ಲಾಭ ಗಳಿಸಬಹುದು. ವಿಶೇಷವಾಗಿ ನೀವು ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹಣದ ವಿಷಯದಲ್ಲಿ ಇಂದು ನಿಮಗೆ ಸರಾಸರಿ ದಿನವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಸಂಜೆ 4:20 ರಿಂದ 7 ರವರೆಗೆ

ವೃಷಭ ರಾಶಿ
ನೀವು ವಿವಾಹಿತರಾಗಿದ್ದರೆ ನಿಮ್ಮ ವೈವಾಹಿಕ ಜೀವನದ ಕಡೆಗೆ ಹೆಚ್ಚು ಗಮನ ಕೊಡಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬಂದರೆ ಆತುರ ಬೇಡ, ಸಮಧಾನದಿಂದ ಅವರ ಬಗ್ಗೆ ತಿಳಿದು ನಂತರ ನಿರ್ಧಾರಕ್ಕೆ ಬನ್ನಿ. ವ್ಯಾಪಾರಿಗಳು ಈ ದಿನ ಹೆಚ್ಚಿನ ಶ್ರಮ ಹಾಕಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಮಧ್ಯಾಹ್ನ 2 ರಿಂದ 4:30 ರವರೆಗೆ
ಮಿಥುನ ರಾಶಿ
ಖಾಸಗಿ ಕಂಪನಿಯ ಉದ್ಯೋಗಿಗಳಿಗೆ ಕೆಲಸದಲ್ಲಿ ಅಧಿಕ ಒತ್ತಡವಿರಲಿದೆ. ನಿಮ್ಮ ಕೆಲಸವನ್ನು ಎಚ್ಚರಿಕೆಯಿಂದ ಮಾಡಲು ಸಲಹೆ ನೀಡಲಾಗುವುದು. ಇಂದು ವ್ಯಾಪಾರಸ್ಥರಿಗೆ ಮಿಶ್ರ ಫಲಿತಾಂಶಗಳ ದಿನವಾಗಿರುತ್ತದೆ. ನಿಮಗೆ ಹೆಚ್ಚಿನ ಲಾಭವಾಗಲಿ ನಷ್ಟವಾಗಲಿ ಆಗುವುದಿಲ್ಲ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 6:50 ರಿಂದ 9:20 ರವರೆಗೆ
ಕರ್ಕ ರಾಶಿ
ಉದ್ಯೋಗಸ್ಥರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಉದ್ಯಮಿಗಳು ಕಾನೂನು ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಯಾವುದೇ ಕಾನೂನು ಬಾಹಿರ ಕೆಲಸ ಮಾಡಲು ಹೋಗಬೇಡಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಲ್ಲ. ಖರ್ಚು ಹೆಚ್ಚಿರಲಿದೆ, ಆರೋಗ್ಯದ ವಿಷಯದಲ್ಲಿಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಸಂಜೆ 5:10 ರಿಂದ 8:10 ರವರೆಗೆ
ಸಿಂಹ ರಾಶಿ
ಕೆಲಸದಲ್ಲಿ ಈ ದಿನ ಶುಭ ದಿನ. ಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ವ್ಯಾಪಾರಸ್ಥರು ದೊಡ್ಡ ಹೂಡಿಕೆ ಮಾಡಲು ಬಯಸಿದರೆ, ಅವರು ಹೆಚ್ಚು ಆತುರಪಡಬಾರದು. ಹಣದ ವಿಷಯದಲ್ಲಿ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ. ಅಧಿಕ ಖರ್ಚು ಮಾಡಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕನ್ಯಾ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಈ ದಿನ ನಿಮಗೆ ಲಾಭದಾಯಕವಾಗಿರಲಿದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 4:30 ರಿಂದ 8:50 ರವರೆಗೆ
ತುಲಾ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳು ಇಂದು ಅಪೇಕ್ಷಿತ ಲಾಭವನ್ನು ಪಡೆಯುತ್ತಾರೆ. ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ ಇಂದು ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 5:95 ರಿಂದ 7:05 ರವರೆಗೆ
ವೃಶ್ಚಿಕ ರಾಶಿ'
ಈ ದಿನ ಆರೋಗ್ಯ ಸಮಸ್ಯೆ ಇರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ. ವ್ಯಾಪಾರಿಗಳು ಕಾನೂನು ಸಂಬಂಧಿಸಿದ ವಿಷಯದಲ್ಲಿ ಜಾಗ್ರತೆವಹಿಸಿ. ತ್ವರಿತ ಲಾಭವನ್ನು ಗಳಿಸ ಅಡ್ಡಮಾರ್ಗ ಹಿಡಿಯಬೇಡಿ. ಮನೆಯ ವಾತಾವರಣ ಶಾಂತವಾಗಿರುತ್ತದೆ.
ಅದೃಷ್ಟದ ಬಣ್ಣ: ಬೆಳ್ಳಿ
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 1:30 ರಿಂದ 4:30 ರವರೆಗೆ
ಧನು ರಾಶಿ
ಈ ದಿನ ಕೋಪದ ಕೈಗೆ ಬುದ್ಧಿ ನೀಡಬೇಡಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಹೆಚ್ಚಿನ ಖರ್ಚು ಇರಲಿದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಮಿಶ್ರಫಲ. ಕೆಲವೊಂದು ಆರೋಗ್ಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ಈ ದಿನ ಅಷ್ಟೊಂದು ಅನುಕೂಲಕರವಲ್ಲ. ಉದ್ಯೋಗಿಗಳಿಗೆ, ವ್ಯವಹಾರಗಳಿಗೆ ಈ ದಿನ ಪ್ರತಿಕೂಲಕವಾಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 6 ರಿಂದ 9 ರವರೆಗೆ
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವವರು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಬಯಸಿದರೆ ಅನುಭವಿ ವ್ಯಕ್ತಿಗಳಿಂದ ಸಲಹೆ ಪಡೆಯುವುದು ಒಳ್ಳೆಯದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಹಣಕಾಸಿನ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿದೆ. ನೀವು ಇತ್ತೀಚೆಗೆ ಸಣ್ಣ ಹೂಡಿಕೆಯನ್ನು ಮಾಡಿದ್ದರೆ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಸಂಜೆ 6 ರಿಂದ ರಾತ್ರಿ 8:30 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications