Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ ಏಪ್ರಿಲ್ 8: ಗ್ರಹಣದ ಈ ದಿನ ಯಾವೆಲ್ಲಾ ರಾಶಿಗಳು ಜಾಗ್ರತೆ
ವೈದಿಕಶಾಸ್ತ್ರದ ಪ್ರಕಾರ ಏಪ್ರಿಲ್ 8 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ನೀವು ವೈಯಕ್ತಿಕ ಜೀವನದಲ್ಲಿ ಆಗಲಿ ಅಥವಾ ವೃತ್ತಿ ಜೀವನದಲ್ಲಿ ಆಗಲಿ ಯಾವುದೇ ಕೆಲಸವನ್ನೂ ತರಾತುರಿಯಲ್ಲಿ ಮಾಡಬೇಡಿ. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ಈ ದಿನ ಮಾನಸಿಕ ಒತ್ತಡ ಅಧಿಕವಿರಲಿದೆ, ಇದರಿಂದಾಗಿ ಕೆಲಸದ ಕಡೆಗೆ ಗಮನ ಹರಿಸಲು ಸಾಧ್ಯವಿಲ್ಲ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 3:20 ರಿಂದ 5:20 ರವರೆಗೆ

ವೃಷಭ ರಾಶಿ
ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ಹೋಗಬೇಡಿ. ಉದ್ಯಮಿಗಳು ಆತುರದಿಂದ ಕಾಗದ ವ್ಯವಹಾರ ಮಾಡಬೇಡಿ. ಈ ದಿನ ಹಣದ ಖರ್ಚು ಅದಿಕವಿರಲಿದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರಲಿದೆ. ಈ ದಿನ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಸಂಜೆ 5 ರಿಂದ ರಾತ್ರಿ 9:15 ರವರೆಗೆ
ಮಿಥುನ ರಾಶಿ
ಮನೆಯ ವಾತಾವರಣ ಸುಧಾರಣೆ ಆಗಲಿದೆ. ಇಂದು ನೀವು ನಿಮ್ಮ ದೊಡ್ಡ ಕುಟುಂಬಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಸಮಯದಿಂದ ಪ್ರಯತ್ನಿಸುತ್ತಿದ್ದರೆ ಈ ದಿನ ಉತ್ತಮವಾಗಿದೆ. ಕೆಲಸದ ಹೊರೆ ಅಧಿಕವಿರಲಿದೆ. ಉತ್ತಮ ಲಾಭಕ್ಕಾಗಿ ತಮ್ಮ ವ್ಯಾಪಾರ ಯೋಜನೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 27
ಶುಭ ಸಮಯ: ಬೆಳಿಗ್ಗೆ 7:30 ರಿಂದ 11 ರವರೆಗೆ
ಕರ್ಕ ರಾಶಿ
ಈ ದಿನ ಆರೋಗ್ಯ ಸಮಸ್ಯೆಯಿಂದಾಗಿ ಹಣ ಖರ್ಚಾಗುವುದು. ಕೆಲಸದಲ್ಲಿ ನಿರ್ಲಕ್ಷ್ಯವು ಒಳ್ಳೆಯದಲ್ಲ. ಈ ದಿನ ಕೆಲಸ ಸಂಬಂಧಿತ ಈ ಪ್ರಯಾಣವು ತುಂಬಾ ಆಯಾಸದಾಯಕವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿದರೆ ಉತ್ತಮ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ಸಿಂಹ ರಾಶಿ
ನೀವು ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಈ ದಿನ ನಿಮಗೆ ಉತ್ತಮವಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಕೆಲಸ ಮಾಡುವವರು ತಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಬಡ್ತಿ ಪಡೆಯಬಹುದು, ನಿಮ್ಮ ಸಂಬಳವೂ ಹೆಚ್ಚಾಗುತ್ತದೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಪಡೆಯಲು ಬಯಸಿದರೆ, ನೀವು ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ನೀವು ತಕ್ಷಣ ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಬೆಳಗ್ಗೆ 9:40 ರಿಂದ 11:20 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ನೀವು ಶೀಘ್ರದಲ್ಲೇ ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ನಿ ಸಂಗಾತಿಯೊಂದಿಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ:45
ಶುಭ ಸಮಯ: ಬೆಳಿಗ್ಗೆ 7 ರಿಂದ 10:30 ರವರೆಗೆ
ತುಲಾ ರಾಶಿ
ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ಉದ್ಯೋಗಿಗಳು ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ, ಆತುರಪಡಬೇಡಿ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ನೀವು ಕೋಪ ನಿಯಂತ್ರಿಸಿದರೆ ಅನೇಕ ಸಮಸ್ಯೆ ತಡೆಗಟ್ಟಲು ಸಹಕಾರಿ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಇಂದು ತುಂಬಾ ಒಳ್ಳೆಯದನ್ನು ಅನುಭವಿಸುವಿರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 6 ರಿಂದ 10 ರವರೆಗೆ
ವೃಶ್ಚಿಕ ರಾಶಿ
ವ್ಯಾಪಾರಿಗಳು ತಮ್ಮ ಸ್ಪರ್ಧಿಗಳ ಬಗ್ಗೆ ಜಾಗರೂಕರಾಗಿರಬೇಕು,. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಆದರೆ, ನೀವು ಇಂದು ಯಾವುದೇ ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬೇಡಿ. ನೀವು ಯಾವುದೇ ದೈಹಿಕ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ
ಧನು ರಾಶಿ
ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ದಿನ ಹಣದ ಖರ್ಚು ಅಧಿಕವಿರಲಿದೆ. ಅನಗತ್ಯ ವೆಚ್ಚಗಳು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಸಮಯಕ್ಕೆ ಸರಿಯಾಗಿ ಕಾಳಜಿ ವಹಿಸಿದರೆ ಉತ್ತಮ. ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಹೃದಯ ಸಂಬಂಧಿ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಮಧ್ಯಾಹ್ನ 2:55 ರಿಂದ 6:30 ರವರೆಗೆ
ಮಕರ ರಾಶಿ
ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಅತಿಯಾದ ಕೆಲಸದ ಹೊರೆಯಿಂದಾಗಿ ನೀವು ತುಂಬಾ ದಣಿದಿರಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ.
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಯತ್ನಗಳನ್ನು ಮಾಡುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ನಿಮ್ಮ ಅಧ್ಯಯನದ ಮೇಲೆ ನೀವು ಸಂಪೂರ್ಣವಾಗಿ ಗಮನಹರಿಸಬೇಕು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಗ್ಗೆ 8:30 ರಿಂದ 11 ರವರೆಗೆ
ಕುಂಭ ರಾಶಿ
ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಯೋಚಿಸಿ ಆರ್ಥಿಕ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಮೀನ ರಾಶಿ
ಇಂದು ನೀವು ವಾಹನವನ್ನು ಬಹಳ ಎಚ್ಚರಿಕೆಯಿಂದ ಬಳಸಲು ಸಲಹೆ ನೀಡಲಾಗುವುದು. ನಿರ್ಲಕ್ಷ್ಯವು ದುಬಾರಿಯಾಗಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಉತ್ತಮ. ಉದ್ಯೋಗಿಗಳು ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಹೂಡಿಕೆ ಇತ್ಯಾದಿಗಳಿಗೆ ದಿನವು ಸೂಕ್ತವಲ್ಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 36
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










