Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ: ಏಪ್ರಿಲ್ 30 ತಿಂಗಳ ಕೊನೆಯ ದಿನದ ರಾಶಿಫಲ
ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 30 ನಿಮಗೆ ಹೇಗಿರಲಿದೆ ಎಂದು ನೋಡೋಣ....
ಮೇಷ ರಾಶಿ
ಕೆಲಸದಲ್ಲಿ ಈ ದಿನ ನಿಮಗೆ ಶುಭವಾಗಿದೆ. ಮೇಲಾಧಿಕಾರಿಗಳ ಸಹಾಯದಿಂದಾಗಿ ನಿಮ್ಮೆಲ್ಲಾ ಕೆಲಸಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಖರ್ಚು ಸ್ವಲ್ಪ ಕಡಿಮೆ ಮಾಡುವುದು ಒಳ್ಳೆಯದು. ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.

ವೃಷಭ ರಾಶಿ
ಉದ್ಯೋಗಿಗಳು ಇಂದು ಕಷ್ಟದ ಕೆಲಸವನ್ನು ಕೂಡ ಸುಲಭವಾಗಿ ಮಾಡಿ ಮುಗಿಸುವುದರಿಂದ ನಿಮ್ಮ ಕೆಲಸ ನೋಡಿ ಮೇಲಾಧಿಕಾರಿಗಳು ಮೆಚ್ಚಿಕೊಳ್ಳುತ್ತಾರೆ. ವ್ಯಾಪಾರಿಗಳಿಗೆ ಈ ದಿನ ವ್ಯಾಪಾರದಲ್ಲಿ ಸ್ವಲ್ಪ ಪ್ರಗತಿ ಕಾಣಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ, ಆದರೆ ಖರ್ಚುಗಳು ಹೆಚ್ಚಾಗಲಿದೆ.
ಮಿಥುನ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ಇಂದು ನಿಮ್ಮ ಕೆಲಸ ಯಾವುದೇ ಸಮಸ್ಯೆಯಿಲ್ಲದೆ ಪೂರ್ಣಗೊಳ್ಳಬಹುದು. ಇನ್ನು ಖರ್ಚು ಸ್ವಲ್ಪ ಅಧಿಕವಿರಲಿದೆ. ಆರ್ಥಿಕ ನಿರ್ಧಾರಗಳನ್ನು ಅವಸರದಿಂದ ತೆಗೆದುಕೊಳ್ಳಬೇಡಿ. ಇನ್ನು ಈ ದಿನ ಆರೋಗ್ಯ ಸ್ವಲ್ಪ ದುರ್ಬಲವಾಗಿರಬಹುದು.
ಕರ್ಕ ರಾಶಿ
ಕರ್ಕ ರಾಶಿಯ ವಿವಾಹಿತರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ನಿಮ್ಮ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ನಿಮ್ಮ ಪ್ರಗತಿಯ ಮೇಲೆ ಪ್ರಭಾವ ಬೀರುವುದು. ಆರೋಗ್ಯ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಮಿಶ್ರ ಫಲ.
ಸಿಂಹ ರಾಶಿ
ಈ ದಿನ ಆರ್ಥಿಕ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸುವಂತೆ ಸಲಹೆ ನೀಡಲಾಗುವುದು. ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ.ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಮೈ ತೂಕ ನಿಯಂತ್ರಿಸಿದರೆ ಒಳ್ಳೆಯದು.
ಕನ್ಯಾ ರಾಶಿ
ನಿಮ್ಮ ದಾಂಪತ್ಯ ಜೀವನ ತುಂಬಾ ಚೆನ್ನಾಗಿರಲಿದೆ . ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಸಣ್ಣ ಹೂಡಿಕೆ ಮಾಡಲು ಯೋಜಿಸುತ್ತಿದ್ದಅದಕ್ಕೆ ಈ ದಿನ ಉತ್ತಮವಾಗಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ಆದರೆ ಆಪೀಸ್‌ನಲ್ಲಿ ಮಾತ್ರನಾಡುವಾಗ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯಬಹುದು. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ನೀವು ನಿಮ್ಮ ಚಿಂತೆಯನ್ನು ದೂರ ಮಾಡಲು ಪ್ರಯತ್ನಿಸಬೇಕು, ಚಿಂತೆ ನಿಮ್ಮ ಮನಸ್ಸಿನ ಹಾಗೂ ದೈಹಿಕ ಆರೋಗ್ಯ ಹಾಳು ಮಾಡುತ್ತದೆ, ಆದ್ದರಿಂದ ಧ್ಯಾನ ಮಾಡಿ, ನಿಮ್ಮ ಮನಸ್ಸಿನಲ್ಲಿರುವ ಅನಗ್ಯತ ಯೋಚನೆ ಹೊರಹಾಕಿ. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಕೆಟ್ಟ ಚಟಗಳಿದ್ದರೆ ಆದಷ್ಟೂ ಬೇಗ ಅದರಿಂದ ಹೊರಬನ್ನಿ.
ವೃಶ್ಚಿಕ ರಾಶಿ
ಕಚೇರಿಯಲ್ಲಿ ನಡೆಯುವ ಒಳ ರಾಜಕೀಯದಿಂದ ದೂರವಿರಬೇಕು. ವ್ಯಾಪಾರಿಗಳು ಈ ದಿನ ನಿರೀಕ್ಷಿಸಿದ ಲಾಭ ಗಳಿಸಲು ಕಷ್ಟವಾಗಬಹುದು. ಹಣದ ಚಿಂತೆ ಹೆಚ್ಚಾಗಲಿದೆ. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ, ಆರೋಗ್ಯ ದುರ್ಬಲವಾಗಿದ್ದರೆ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಧನು ರಾಶಿ
ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದನ್ನು ಪರಿಹರಿಸಲು ಕುಟುಂಬದವರು ಸಹಾಯ ಮಾಡಬಹುದು. ಕೆಲಸದಲ್ಲಿ ಯಾವುದೇ ಸಮಸ್ಯೆಯಿಲ್ಲ. ವ್ಯಾಪಾರಿಗಳು ಏನಾದರೂ ಹೊಸತು ಟ್ರೈ ಮಾಡುವುದಾದರೆ ಅನುಭವಿಗಳಿಂದ ಸಲಹೆ ಪಡೆಯಿರಿ. ಆರೋಗ್ಯದ ಬಗ್ಗೆ ಜಾಗ್ರತೆ.
ಮಕರ ರಾಶಿ
ಕೆಲಸದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ವ್ಯಾಪಾರಿಗಳು ಈ ದಿನ ಪ್ರಯಾಣ ಮಾಡಬೇಕಾಗಿ ಬರುವುದು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಬಿಪ್ರಾಯಗಳು ಇರಲಿದೆ.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ, ಆರೋಗ್ಯ ಸಾಧಾರಣವಾಗಿರಲಿದೆ.
ಕುಂಭ ರಾಶಿ
ಇಂದು ನಿಮಗೆ ಮಿಶ್ರಫಲ. ಕೆಲವು ಪ್ರಮುಖ ಕೆಲಸಗಳಿಗೆ ಅಡ್ಡಿಯಾಗಬಹುದು. ಉದ್ಯೋಗಿಗಳು ತಮ್ಮ ಬಡ್ತಿಗಾಗಿ ಬಹಳ ಸಮಯದಿಂದ ಕಾಯುತ್ತಿದ್ದರೆ, ಇನ್ನೂ ಸ್ವಲ್ಪ ಸಮಯ ಕಾಯಲು ನಿಮಗೆ ಸಲಹೆ ನೀಡಲಾಗುವುದು. ಶೀಘ್ರದಲ್ಲೇ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ವ್ಯಾಪಾರಿಗಳು ದೊಡ್ಡ ಹೂಡಿಕೆ ಮಾಡುವ ಮುನ್ನ ಆಲೋಚನೆ ಮಾಡುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಹಾಗೂ ಆರೋಗ್ಯ ಚೆನ್ನಾಗಿರಲಿದೆ, ಅನಗ್ಯತ ಚಿಂತೆ ಬಿಡಿ.
ಮೀನ ರಾಶಿ
ಹಣದ ವಿಷಯದಲ್ಲಿ ಈ ದಿನ ತುಂಬಾ ಒಳ್ಳೆಯದು. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಇಂದು ನಿಮಗೆ ಒಳ್ಳೆಯ ಸುದ್ದಿ ಸಿಗಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











