Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 23, ದಿನ ಭವಿಷ್ಯ: 12 ರಾಶಿಗಳಲ್ಲಿ ಈ ದಿನ 4 ರಾಶಿಯವರು ಜಾಗ್ರತೆವಹಿಸಿ
ಶುಭೋದಯ ಮೇ 23 ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ಜ್ಯೋತಿಷ್ಯಫಲ ನೀಡಲಾಗಿದೆ ನೋಡಿ:
ಮೇಷ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಿ. ನೀವು ವೈಯಕ್ತಿಕ ಅಥವಾ ವೃತ್ತಿಪರ ಜೀವನ, ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಣದ ಚಿಂತೆ ನಿಮ್ಮನ್ನು ತುಂಬಾನೇ ಕಾಡಬಹುದು. ನೀವು ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚಿಸುವುದನ್ನು ತಪ್ಪಿಸಿದರೆ ಉತ್ತಮ. ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.

ವೃಷಭ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಸಾಲ ನೀಡಲು ಹೋಗಬೇಡಿ, ಏಕೆಂದರೆ ಸಾಲ ಕೊಟ್ಟ ಹಣ ಮರಳಿ ಸಿಗುವುದು ತುಂಬಾನೇ ಕಷ್ಟವಾಗಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಶಾಪಿಂಗ್ ಕಡೆಗೆ ಗಮನಹರಿಸಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಸಾಧ್ಯವಾದರೆ, ಇಂದು ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಕೆಲಸದ ವಿಷಯದಲ್ಲಿ ಇಂದು ನಿಮಗೆ ಬಹಳ ಮುಖ್ಯವಾಗಿದೆ. ನೀವು ಇಂದು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವನ್ನು ಕೈಗೊಂಡರೆ, ನೀವು ಸೂಕ್ತ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಆದರೆ ನೀವಯ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡುವ ತಪ್ಪು ಮಾಡಬೇಡಿ.
ಕರ್ಕ ರಾಶಿ
ಈ ದಿನ ನಿಮಗೆ ಕೆಲಸದಲ್ಲಿ ಉತ್ತಮವಾಗಿರಲಿದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಅವಿವಾಹಿತರಾಗಿದ್ದು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಮನೆಯವರೊಂದಿಗೆ ಈ ಕುರಿತು ಮಾತನಾಡಿ, ಧನಾತ್ಮಕ ಪ್ರತಿಕ್ರಿಯೆ ಸಿಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಆರ್ಥಿಕವಾಗಿ ಈ ದಿನ ಯಾವುದೇ ಸಮಸ್ಯೆಯಿಲ್ಲ, ಉದ್ಯೋಗಿಗಳಿಗೆ ಕಚೇರಿಯಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸುವಂತೆ ಸಲಹೆ ನೀಡಲಾಗುವುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಚಿಕ್ಕ ವಿಷಯಗಳಿಗೆ ಕೋಪಗೊಳ್ಳುವ ನಿಮ್ಮ ಅಭ್ಯಾಸವು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಆರೋಗ್ಯದ ದೃಷ್ಟಿಯಿಂದ ಈ ದಿನವು ಸರಾಸರಿಯಾಗಿರುತ್ತದೆ.
ಕನ್ಯಾ ರಾಶಿ
ಪ್ರೇಮ ಜೀವನದಲ್ಲಿ ಸ್ಥಿರತೆ ಇರಲಿದೆ. ವಿವಾಹಿತರಿಗೆ ಇಂದು ಬಹಳ ಸ್ಮರಣೀಯ ದಿನವಾಗಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಕೆಲಸದಲ್ಲಿ ನೂವು ಊಹಿಸಿದಂತೆಯೇ ಪ್ರತಿಫಲ ಸಿಗುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಈ ದಿನ ತುಂಬಾ ಜಾಗರೂಕರಾಗಿರಿ, ಇಲ್ಲದಿದ್ದರೆ ಮೋಸ ಹೋಗಬಹುದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ, ಆರೋಗ್ಯ ಸಮಸ್ಯೆಯಿದ್ದರೆ ಒಳ್ಳೆಯ ತಜ್ಞರಿಗೆ ತೋರಿಸಿ. .
ವೃಶ್ಚಿಕ ರಾಶಿ
ಈ ದಿನ ಕುಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಜೊತೆಗೆ ಆರ್ಥಿಕ ನಷ್ಟ ಕೂಡ ನಿಮ್ಮ ಚಿಂತೆ ಹೆಚ್ಚಿಸುವುದು. ವ್ಯಾಪಾರಿಗಳುತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ರೊಮ್ಯಾಂಟಿಕ್ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಧನು ರಾಶಿ
ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ, ನೀವು ಪ್ರಮುಖ ಹಣಕಾಸಿನ ವಹಿವಾಟುಗಳನ್ನು ತಪ್ಪಿಸಬೇಕು. ವ್ಯಾಪಾರಿಗಳಿಗೆ ಈ ದಿನ ಸರಾಸರಿಯಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ, ಇಂದು ನಿಮಗೆ ಒಳ್ಳೆಯ ದಿನವಲ್ಲ.
ಮಕರ ರಾಶಿ
ಮಕರ ರಾಶಿಯ ನಿರುದ್ಯೋಗಿಗಳು ಕೆಲಸಕ್ಕಾಗಿ ಪ್ರಯತ್ನಿಸಿದ್ದರೆ ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ವ್ಯಾಪಾರಿಗಳಿಗೂ ಲಾಭದಾಯಕವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಊಹಿಸಿದಂತೆಯೇ ಫಲ ಸಿಗುವುದರಿಂದ ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಕುಂಭ ರಾಶಿ
ಕೆಲಸವನ್ನು ಬದಿಗಿಟ್ಟು, ನಿಮ್ಮ ಕೌಟುಂಬಿಕ ಜೀವನಕ್ಕೆ ಹೆಚ್ಚಿನ ಗಮನ ನೀಡಿದರೆ ಒಳ್ಳೆಯದು. ಅಧ್ಯಯನ ಮುಗಿಸಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯ ದಿನವಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ನೀವು ಪ್ರೀತಿಯಲ್ಲಿ ಇದ್ದರೆ ನಿಮ್ಮ ಸಂಗಾತಿಯು ನಿಮಗೆ ಮದುವೆಯ ಪ್ರಸ್ತಾಪವನ್ನು ಮಾಡಬಹುದು. ಇನ್ನು ಮದುವೆಗೆ ಸಂಬಂಧ ಹುಡುಕುತ್ತಿರುವವರಿಗೂ ಈ ದಿನ ಉತ್ತಮವಾಗಿರಲಿದೆ, ಕಚೇರಿಯಲ್ಲಿ ಸಮಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ವ್ಯಾಪಾರಿಗಳು ಹೆಚ್ಚಿನ ಲಾಭವನ್ನು ಪಡೆಯಲು ಮೋಸದ ಮಾರ್ಗ ಹಿಡಿದರೆ ನಷ್ಟವನ್ನು ಅನುಭವಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನರಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










