ಮೇ 24, ದಿನ ಭವಿಷ್ಯ: 12 ರಾಶಿಗಳಲ್ಲಿ ಕನ್ಯಾ ರಾಶಿಯವರೇ ಅನಗ್ಯತ ಚಿಂತೆ ಬೇಡ, ಉಳಿದ ರಾಶಿಗಳಿಗೆ ಹೇಗಿರಲಿದೆ?

ಶುಕ್ರವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:

ಮೇಷ ರಾಶಿ

ನೀವು ವ್ಯಾಪಾರಸ್ಥರಾಗಿದ್ದು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ನೀವು ನಿಮಗೆ ಮೋಸ ಆಗದಿರಲು ಹೆಚ್ಚು ಗಮನಹರಿಸುವುದು ಒಳ್ಳೆಯದು. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ಸಾಲದ ಒತ್ತಡ ಹೆಚ್ಚಿರಬಹುದು, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ದಿನ ತುಂಬಾ ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ಇಂದು ನೀವು ಸಂಗಾತಿಯೊಂದಿಗೆ ಕೋಪಗೊಳ್ಳಬೇಡಿ, ಅವಿವಾಹಿತರಿಗೆ ಮದುವೆಯ ಪ್ರಸ್ತಾಪ ಬರಬಹುದು. ಕೆಲಸದಲ್ಲಿ ಸರಾಸರಿ ಇರಲಿದೆ. ಕೆಲಸದಲ್ಲಿ ಮೇಲಾಧಿಕಾರಿಗಳು ಸೂಚಿಸಿದ ಸಲಹೆ ಪಾಲಿಸಿದರೆ ಒಳ್ಳೆಯದು. ಹಣದ ಸಮಸ್ಯೆ ಬಗೆಹರಿಯಲಿದೆ, ಆರೋಗ್ಯ ಸಮಸ್ಯೆಗಳಿರಬಹುದು.

ಮಿಥುನ ರಾಶಿ

ಈ ದಿನ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಆದಾಯ ಹೆಚ್ಚಿಸಲು ನೀವು ನಿಮ್ಮ ಪ್ರಯತ್ನವನ್ನು ಮತ್ತಷ್ಟು ಚುರುಕುಗೊಳಿಸಿ. ಉದ್ಯೋಗಿಗಳು ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳನ್ನು ಹೆಚ್ಚು ನಂಬುವುದನ್ನು ತಪ್ಪಿಸಿ. ಉದ್ಯಮಿಗಳಿಗೆ ಬಹಳ ಲಾಭದಾಯಕ ದಿನವಾಗಿದೆ. ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಕರ್ಕ ರಾಶಿ

ಉದ್ಯಮಿಗಳು ಸಕಾರಾತ್ಮಕ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರಿಗಳು ಹೊಸ ವ್ಯವಹಾರ ಪ್ರಾರಂಭಿಸಲು ಬಯಸಿದರೆ ಈ ದಿನ ಉತ್ತಮವಾಗಿದೆ. ಇನ್ನು ವೈವಾಹಿಕ ಜೀವನ ಚೆನ್ನಾಗಿರಲು ಕೆಲಸದಿಂದಾಗಿ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆಹಾರಕ್ರಮದ ಕಡೆಗೆ ಗಮನಹರಿಸಿ, ಎಣ್ಣೆಯಲ್ಲಿ ಕರಿದ ಪದಾರ್ಥ ಸೇವಿಸಬೇಡಿ.

ಸಿಂಹ ರಾಶಿ

ಈಗ ಇರುವ ಕೆಲಸದಲ್ಲಿ ನೀವು ಅತೃಪ್ತರಾಗಿದ್ದರೆ ದೊಡ್ಡ ಕಂಪನಿಯಿಂದ ಸಂದರ್ಶನಕ್ಕೆ ಕರೆಯಬಹುದು. ವ್ಯಾಪಾರಿಗಳು ಈ ದಿನ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡಚಣೆ ಉಂಟಾಗಬಹುದು. ನಿಮ್ಮ ಆರ್ಥಿಕ ನಷ್ಟದ ಸಾಧ್ಯತೆಯೂ ಇದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.

ಕನ್ಯಾ ರಾಶಿ

ನೀವು ಅನಗ್ಯತ ಚಿಂತೆ ಮಾಡದೆ ನಿಮ್ಮ ಕೆಲಸದ ಕಡೆಗೆ ಗಮನ ಹರಿಸಿ. ಅನಗತ್ಯ ಚಿಂತೆ ನಿಮ್ಮ ಆರೋಗ್ಯವನ್ನೂ ಹಾಳು ಮಾಡುತ್ತದೆ. ಹಣದ ವಿಷಯದಲ್ಲಿ ಜಾಗರೂಕರಾಗಿರಿ. ಯಾರಿಗೂ ಸಾಲ ನೀಡಲು ಹೋಗಬೇಡಿ. ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಇಂದು ವಿದ್ಯಾರ್ಥಿಗಳಿಗೆ ಬಹಳ ವಿಶೇಷವಾದ ದಿನವಾಗಲಿದೆ.

ತುಲಾ ರಾಶಿ

ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಖುಷಿಯ ಸುದ್ದಿ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯಕ್ಕಾಗಿ ಜೀವನಶೈಲಿ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ವೈವಾಹಿಕ ಜೀವನ ಚೆನ್ನಾಗಿರಲು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರೆ ಉತ್ತಮ. ಅದೇ ಸಮಯದಲ್ಲಿ, ಈ ರಾಶಿಯ ವಿವಾಹಿತರಿಗೆ ಇಂದು ಬಹಳ ವಿಶೇಷವಾದ ದಿನವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಬಹಿರಂಗವಾಗಿ ಖರ್ಚು ಮಾಡುವಿರಿ. ಕೆ ಆರೋಗ್ಯ ಚೆನ್ನಾಗಿರಲಿದೆ.

ಧನು ರಾಶಿ

ಈ ದಿನ ಖುಷಿ-ಖುಷಿಯಿಂದ ಕಳೆಯಿರಿ. ವ್ಯಾಪಾರಿಗಳು ಈ ದಿನ ಯೋಗ್ಯವಾದ ಲಾಭವನ್ನು ಪಡೆಯುತ್ತಾರೆ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನೀವು ಹೆಚ್ಚು ಆತುರಪಡಬೇಡಿ. ಕೆಲವರು ನಿಮ್ಮನ್ನು ಗೊಂದಲಗೊಳಿಸಲು ಪ್ರಯತ್ನಿಸಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆ ನೋವಿನ ಸಮಸ್ಯೆವಿರಬಹುದು.

ಮಕರ ರಾಶಿ

ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ದೂರಾಗಲಿದೆ. ಆರ್ಥಿಕವಾಗಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ. ವ್ಯಾಪಾರಿಗಳು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಹಳೆಯ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸಬೇಕಾಗುವುದು, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಕುಂಭ ರಾಶಿ

ಮನೆಯಲ್ಲಿ ವಯಸ್ಸಾದ ಸದಸ್ಯರು ಇದ್ದರೆ, ಅವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಕೆಲಸ ಕಾರ್ಯಗಳು ನೀವು ಊಹಿಸಿದಂತೆ ನಡೆಯಲಿದೆ, ಇದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ನೀವು ಅನಗತ್ಯ ವಿಷಯಗಳಿಂದ ದೂರವಿರಿ ಇಲ್ಲದಿದ್ದರೆ ನಂತರ ವಿಷಾದಿಸುತ್ತೀರಿ. ಹಣದ ವಿಷಯದಲ್ಲಿ ಮಿಶ್ರಫಲ.

ಮೀನ ರಾಶಿ

ಈ ದಿನ ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರುತ್ತದೆ. ಹಿಂದೆ ತೆಗೆದುಕೊಂಡ ಯಾವುದೇ ವ್ಯವಹಾರ ನಿರ್ಧಾರದಿಂದ ನೀವು ಸೂಕ್ತ ಫಲಿತಾಂಶಗಳನ್ನು ಪಡೆಯಬಹುದು. ಆತುರ ಮತ್ತು ಅವಸರದಲ್ಲಿ ಯಾವುದೇ ಕೆಲಸ ಮಾಡದಂತೆ ಸೂಚಿಸಲಾಗುವುದು. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಆರೋಗ್ಯ ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: Daily Horoscope Prediction for 12 Zodiac Signs on 24th May 2024 in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, May 23, 2024, 21:54 [IST]
X
Desktop Bottom Promotion