Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಮೇ 27 ದಿನ ಭವಿಷ್ಯ: ಸೋಮವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಸೋಮವಾರದ ರಾಶಿಫಲ ನಿಮ್ಮ ರಾಶಿಯ ಮೇಲೆ ಬೀರಿರುವ ಪ್ರಭಾವ...
ಮೇಷ ರಾಶಿ
ನೀವು ಉದ್ಯೋಗಿಯಾಗಿದ್ದರೆ ಕೆಲಸದಲ್ಲಿ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿ. ವ್ಯಾಪಾರಿಗಳೇ, ಅಜಾಗರೂಕತೆಯು ನಿಮಗೆ ದೊಡ್ಡ ನಷ್ಟವನ್ನು ಉಂಟುಮಾಡಬಹುದು. ಪ್ರೇಮ ಜೀವನದಲ್ಲಿ ಪರಿಸ್ಥಿತಿಯು ಪ್ರತಿಕೂಲವಾಗಿ ಕಾಣುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಆಪ್ತರು ನೀಡುವ ಸಲಹೆಯನ್ನು ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲು ನೀವು ಹಣ ಖರ್ಚಿನ ಬಗ್ಗೆ ಜಾಗ್ರತೆವಹಿಸಿ, ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಲ್ಲ, ಈ ದಿನ ನೀವು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ಉದ್ಯೋಗಿಗಳು ಈ ದಿನ ಕೆಲಸದಲ್ಲಿ ತಪ್ಪುಗಳು ಆಗದಂತೆ ಜಾಗ್ರತೆವಹಿಸಿ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಮಡು ಬರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ಕರ್ಕ ರಾಶಿ
ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕುಟುಂಬದ ಸದಸ್ಯರಿಂದ ನೀವು ಒಳ್ಳೆಯ ಸುದ್ದಿ ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ನೀವು ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ಬಡ್ತಿ ಪಡೆಯಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಖರ್ಚು ಅದಿಕವಿರಲಿದೆ, ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.
ಕನ್ಯಾ ರಾಶಿ
ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲು ಅನಗತ್ಯ ವಿವಾದಗಳನ್ನು ತಪ್ಪಿಸಬೇಕು . ನಿಮ್ಮ ಹಣವನ್ನು ಕೆಲವು ಹೊಸ ಕೆಲಸಗಳಲ್ಲಿ ಹೂಡಿಕೆ ಮಾಡಲು ನೀವು ಯೋಚಿಸುತ್ತಿದ್ದರೆ ಈ ಸಮಯವು ಸರಿಯಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ತುಲಾ ರಾಶಿ
ತುಲಾ ರಾಶಿಯ ಉದ್ಯೋಗಸ್ಥ ಮಹಿಳೆಯರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರುತ್ತದೆ. ಮನೆಯ ವಾತಾವರಣ ಇಂದು ಚೆನ್ನಾಗಿರುವುದಿಲ್ಲ. ಕುಟುಂಬದ ಕಿರಿಯ ಸದಸ್ಯರೊಂದಿಗೆ ಕೆಲ ಭಿನ್ನಾಭಿಪ್ರಾಯವಿರಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಖರ್ಚು ಇರಲಿದೆ.
ವೃಶ್ಚಿಕ ರಾಶಿ
ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ. ಉದ್ಯೋಗದ ಜೊತೆಗೆ ಚಿಕ್ಕ ವ್ಯವಹಾರ ಮಾಡಲು ಬಯಸುವುದಾದರೆ ಅದರತ್ತ ಗಮನಹರಿಸಿ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಧನು ರಾಶಿ
ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ನಿಮ್ಮ ಯಾವುದೇ ಸರಿಯಾದ ವ್ಯಾಪಾರ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದ್ಯಾರ್ಥಿಗಳು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಮಕರ ರಾಶಿ
ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಲ್ಲ. ಹಣದ ಸಮಸ್ಯೆವಿರಬಹುದು, ಉದ್ಯೋಗಿಗಳು ಈ ದಿನ ಕಚೇರಿಯಲ್ಲಿ ಸಮಧಾನದಿಂದ ವರ್ತಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಸಮಸ್ಯೆಗಳಿರಬಹುದು.
ಕುಂಭ ರಾಶಿ
ವ್ಯಾಪಾರಿಗಳಿಗೆ ಈ ದಿನ ತುಂಬಾ ಮುಖ್ಯವಾಗಿದೆ. ಕಚೇರಿಯಲ್ಲಿ ಅತ್ಯಂತ ಸಮತೋಲಿತ ರೀತಿಯಲ್ಲಿ ವರ್ತಿಸುವಂತೆ ಸಲಹೆ ನೀಡಲಾಗುವುದು. ಕೆಲಸದ ಹೊರೆ ನಿಮ್ಮನ್ನು ಕೆರಳಿಸಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಮಾನಸಿಕ ಒತ್ತಡ ಅಧಿಕವಿರಲಿದೆ.
ಮೀನ ರಾಶಿ
ಪ್ರೇಮಿಗಳಿಗೆ ಈ ದಿನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ದೈನಂದಿನ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಶಾಂತಿಯುತವಾಗಿ ವರ್ತಿಸಲು ಸಲಹೆ ನೀಡಲಾಗುವುದು. ಮಧುಮೇಹದ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications