Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 31 ದಿನ ಭವಿಷ್ಯ: ಮೇ ತಿಂಗಳ ಕೊನೆಯ ದಿನ 12 ರಾಶಿಗಳ ರಾಶಿಫಲ
ಶುಭೋದಯ, ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡೋಣ:
ಮೇಷ ರಾಶಿ
ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಇದ್ದ ಅಡೆತಡೆ ನಿವಾರಣೆಯಾಗಲಿದೆ, ಹೀಗಾಗಿ ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಯಾವುದೇ ದೊಡ್ಡ ಸಮಸ್ಯೆಯಿಲ್ಲ, ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಶೀಘ್ರವೇ ಶುಭ ಸುದ್ದಿ ಪಡೆಯುತ್ತೀರಿ.

ವೃಷಭ ರಾಶಿ
ಈ ದಿನ ನೀವು ನಿಮ್ಮ ವೃತ್ತಿಜೀವನಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ವ್ಯಾಪಾರಿಗಳು ಈ ದಿನ ಯಾವುದೇ ಹೊಸ ರಿಸ್ಕ್ ತೆಗೆದುಕೊಳ್ಳಬೇಡಿ. ಉದ್ಯೋಗಿಗಳು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ತಂಗಳು ಆಹಾರ ಸೇವಿಸಬೇಡಿ.
ಮಿಥುನ ರಾಶಿ
ಈ ದಿನ ನಿಮ್ಮ ಸಂಗಾತಿಯ ಜೊತೆಗೆ ಖುಷಿಯಿಂದ ಕಳೆಯುತ್ತೀರಿ. ಉದ್ಯೋಗಿಗಳ ಎಲ್ಲಾ ಕೆಲಸವು ಯಾವುದೇ ಅಡೆತಡೆಯಿಲ್ಲದೆ ಸುಲಭವಾಗಿ ಪೂರ್ಣಗೊಳ್ಳಲಿವೆ. ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಪಡೆಯಬಹುದು. ಇನ್ನು ಆರೋಗ್ಯವೂ ಚೆನ್ನಾಗಿರಲಿದೆ.
ಕರ್ಕ ರಾಶಿ
ಮನೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೀವು ತಾಳ್ಮೆಯಿಂದ ವರ್ತಿಸಿ, ಕೋಪ ನಿಯಂತ್ರಿಸಿದರೆ ಒಳ್ಳೆಯದು. ಹಣದ ವಿಷಯದಲ್ಲಿ ಈ ದಿನ ಉತ್ತಮವಲ್ಲ. ಮಾರಾಟ ಮತ್ತು ಮಾರ್ಕೆಟಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಈ ದಿ ದೊಡ್ಡ ಸವಾಲನ್ನು ಎದುರಿಸಬೇಕಾಗಬಹುದು, ಜಾಗ್ರತೆವಹಿಸಿ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಸಿಂಹ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸದ ಜಾಗದಲ್ಲಿ ಕೋಪವನ್ನು ನಿಯಂತ್ರಿಸಿ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಕನ್ಯಾ ರಾಶಿ
ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ಅವರ ಸಲಹೆ ಪಡೆದ ಬಳಿಕವಷ್ಟೇ ಮುಂದುವರೆಯಿರಿ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲು ಹೋಗದಿರಿ.
ತುಲಾ ರಾಶಿ
ನೀವು ಫಿಟ್ನೆಸ್ ಕಡೆಗೆ ತುಂಬಾನೇ ಗಮನಹರಿಸುತ್ತೀರಿ. ವ್ಯಾಪಾರಿಗಳಿಗೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯವೂ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಹೆಚ್ಚು ಫಲಪ್ರದವಾಗಿದೆ. ಉದ್ಯೋಗಿಗಳು ಕೆಲಸದ ಜಾಗದಲ್ಲಿ ತಪ್ಪುಗಳು ಉಂಟಾಗದಂತೆ ಜಾಗ್ರತೆವಹಿಸಿ. ವಿದ್ಯಾರ್ಥಿಗಳು ಇತರ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸುವ ಬದಲು ತಮ್ಮ ಅಧ್ಯಯನದತ್ತ ಗಮನಹರಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಧನು ರಾಶಿ
ಇಂದು ನೀವು ನಿಮ್ಮ ಕುಟುಂಬದ ಜೊತೆಗೆ ಹೆಚಚಾಗಿ ಸಮಯ ಕಳೆಯುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಮಿಶ್ರಫಲ. ಪ್ರಮುಖ ದಾಖಲೆಗಳನ್ನು ಮಾಡುವಾಗ ಆತುರಪಡಬೇಡಿ, ಪ್ರೇಮಿಗಳ ನಡುವೆ ಪರಸ್ಪರ ನಂಬಿಕೆಯ ಕೊರತೆ ಇರುತ್ತದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಮಕರ ರಾಶಿ
ಕೆಲಸದಲ್ಲಿ ಈ ದಿನ ಶುಭವಾಗಿದೆ, ಸಂಬಳಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಯಾವುದೇ ಬಾಕಿಯಿರುವ ಕೆಲಸವೂ ಪೂರ್ಣಗೊಳ್ಳುತ್ತದೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ.
ಕುಂಭ ರಾಶಿ
ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವನ್ನು ಅವಸರದಲ್ಲಿ ಮಾಡಬೇಡಿ.ಹಣದ ವಿಷಯಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು.
ಈ ದಿನ ಕೋಪ ನಿಯಂತ್ರಿಸಿ, ಆರೋಗ್ಯಕ್ಕಾಗಿ ಅತಿಯಾದ ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ.
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಜವಾಬ್ದಾರಿಗಳ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ನಿಮ್ಮ ಕೆಲಸವನ್ನು ನೀವು ಯೋಜನೆಯಂತೆಯೇ ಪೂರ್ಣಗೊಳಿಸಿದರೆ, ನೀವು ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ. ಉದ್ಯೋಗಸ್ಥರಿಗೆ ಈ ದಿನ ಸರಾಸರಿಯಾಗಿರಲಿದೆ. ನಿಮ್ಮ ಆದಾಯ ಹೆಚ್ಚಾಗುವ ಬಲವಾದ ಸಾಧ್ಯತೆಯಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications