ಆಗಸ್ಟ್ 30, ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ವೈದಿಕಶಾಸ್ತ್ರದ ಪ್ರಕಾರ ಈ ದಿನದ ಭವಿಷ್ಯ ನೋಡೋಣ:

ಮೇಷ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ಸಾಲ ಕೊಟ್ಟ ಹಣ ಮರಳಿ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಸಂಗಾತಿಯ ಆರೋಗ್ಯ ದುರ್ಬಲವಾಗಿರುತ್ತದೆ. ಮಧುಮೇಹ ಇದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ಜಾಗ್ರತೆವಹಿಸಬೇಡಿ.

Dina Bhavishya

ವೃಷಭ ರಾಶಿ

ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕೂಡ ಗಮನಹರಿಸಿ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರವನ್ನುಆತುರದಿಂದ ತೆಗೆದುಕೊಳ್ಳಬೇಡಿ. ಆರ್ಥಿಕ ಸ್ಥಿತಿ ಬಗ್ಗೆ ಸುಧಾರಿಸಲು ನೀವು ಖರ್ಚು ಬಗ್ಗೆ ನಿಯಂತ್ರಿಸಬೇಕು. ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು.ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಮೈ ತೂಕ ಹೆಚ್ಚಾಗುವುದನ್ನು ತಡೆಗಟ್ಟಿದರೆ ಕಷ್ಟ.

ಮಿಥುನ ರಾಶಿ

ವೈಯಕ್ತಿಕ ಸಮಸ್ಯೆ ಕೆಲಸದ ಮೇಲೆ ಪ್ರಭಾವ ಬೀರಬಹುದು. ಆದರೆ ಕೆಲಸದ ಬಗ್ಗೆ ನಿರ್ಲಕ್ಷ್ಯ ಮಾಡದಂತೆ ಸಲಹೆ ನೀಡಲಾಗುವುದು. ಆರೋಗ್ಯಕ್ಕೆ ಸಂಬಂಧಿಸಿದ ಸಣ್ಣ ಸಮಸ್ಯೆಗಳನ್ನು ಸಹ ನಿರ್ಲಕ್ಷಿಸಬೇಡಿ. ವ್ಯಾಪಾರಿಗಳಿಗೆ ಧನ ಲಾಭವಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.


ಕರ್ಕ ರಾಶಿ

ಈ ದಿನ ಶುಭವಾಗಿದೆ. ಯಾವುದೇ ಆಸೆ ಈಡೇರಿದರೆ ಮನಸ್ಸು ತುಂಬಾ ಸಂತೋಷವಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ವ್ಯಾಪಾರಿಗಳಿಗೆ ಈ ದಿನ ಅಷ್ಟೊಂದು ಅನುಕೂಲಕರವಲ್ಲ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ.

ಸಿಂಹ ರಾಶಿ

ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳು ರಹಸ್ಯ ಶತ್ರುಗಳ ಬಗ್ಗೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳ ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಚರ್ಮದ ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.


ಕನ್ಯಾ ರಾಶಿ

ಹಣದ ಬಗ್ಗೆ ಅತಿಯಾದ ಚಿಂತೆ ಬೇಡ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅರೋಗ್ಯ ಉತ್ತಮವಾಗಿರಲಿದೆ.

ತುಲಾ ರಾಶಿ

ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಬಹುದು. ಇದು ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಗುರಿಯತ್ತ ಗಮನ ಹರಿಸುವುದು ಉತ್ತಮ. ಕೋಪದಿಂದ ಮಾತನಾಡಬೇಡಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಗಮನಹರಿಸಿ.

ವೃಶ್ಚಿಕ ರಾಶಿ

ಉದ್ಯೋಗಕ್ಕಾಗಿ ಮಾಡುವ ಪ್ರಯತ್ನಗಳು ಯಶಸ್ವಿಯಾಗಬಹುದು. ಈ ದಿನ ಅತ್ಮವಿಶ್ವಾಸ ಚೆನ್ನಾಗಿರಲಿದೆ. ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಕೆಲಸದ ಜಾಗದಲ್ಲಿ ಅನುಪಯುಕ್ತ ವಿಷಯಗಳ ಕಡೆಗೆ ಗಮನಹರಿಸಿ. ಪ್ರೇಮಿಗಳಿಗೆ ದಿನ ವಿಶೇಷವಾಗಿರಲಿದೆ.

ಧನು ರಾಶಿ

ಹಣಕಾಸಿನ ವಿಷಯಗಳಲ್ಲಿ ಯಾವುದೇ ರೀತಿಯಲ್ಲಿ ಆತುರಪಡಬೇಡಿ. ಈ ದಿನ ಯಾವುದೇ ಆತುರದ ನಿರ್ಧಾರ ಮಾಡಬೇಡಿ. ಕೆಲಸಕ್ಕೆ ಸಂಬಂಧಿಸಿದ ಚಿಂತೆಗಳು ನಿಮ್ಮನ್ನು ಕಾಡಬಹುದು. ಆದರೆ ನೀವು ಧನಾತ್ಮಕವಾಗಿ ಉಳಿಯಬೇಕು. ನಿಮ್ಮ ಪ್ರಮುಖ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು.ಕೆಲಸದಲ್ಲಿ ಹೆಚ್ಚಿನ ಒತ್ತಡವಿರಲಿದೆ.
ಕುಟುಂಬದಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು.

ಮಕರ ರಾಶಿ

ಈ ದಿನ ಉತ್ತಮವಾಗಿದೆ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳು ಉತ್ತಮ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿನ ಸುಧಾರಣೆಯಿಂದಾಗಿ ನಿಮ್ಮ ಪ್ರಮುಖ ಚಿಂತೆಗಳು ದೂರವಾಗುತ್ತವೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಯೋಜನೆಯನ್ನು ಮಾಡಬಹುದು. ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ.
ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ಕುಂಭ ರಾಶಿ

ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶವನ್ನು ಪಡೆಯಬಹುದು. ಇದೆಲ್ಲವೂ ನಿಮ್ಮ ಶ್ರಮದ ಫಲ. ನೀವು ಬ್ಯಾಂಕಿನಿಂದ ಸಾಲವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬದದಲ್ಲಿ ಪರಿಸ್ಥಿತಿ ಚೆನ್ನಾಗಿರಲ್ಲ, ನೀವು ತಾಳ್ಮೆಯಿಮದ ಬಗೆಹರಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ನೆಗಡಿ, ಕೆಮ್ಮು, ಗಂಟಲು ನೋವು ಮುಂತಾದ ಸಮಸ್ಯೆಗಳಿರಬಹುದು.


ಮೀನ ರಾಶಿ

ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬೇಡಿ. ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿಯನ್ನು ಸ್ವೀಕರಿಸಿದ ನಂತರ ನಿಮ್ಮ ಮನಸ್ಸು ತುಂಬಾ ಸಂತೋಷವಾಗುತ್ತದೆ. ನೀವು ಹೊಸ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ದಿನ ನಿಮಗೆ ಶುಭವಾಗಿದೆ. ಆರೋಗ್ಯವು ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಮನೆಯಲ್ಲಿ ವಾತಾವರಣವು ಉತ್ತಮವಾಗಿರುತ್ತದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆಯ ಸಮಸ್ಯೆವಿರಬಹುದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: Dina Bhavishya 30th August 2024: Aries to Pisces Horoscope Prediction Today for all zodiacs in Kannada

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada:
Story first published: Thursday, August 29, 2024, 21:45 [IST]
X
Desktop Bottom Promotion