Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ಮಾರ್ಚ್ 10 : ಭಾನುವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಮಾರ್ಚ್ 10 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ
ಮೇಷ ರಾಶಿ
ಕೆಲಸಕ್ಕೆ ಸಂಬಂಧಿಸಿದ ಹಠಾತ್ ಪ್ರಯಾಣವು ನಿಮಗೆ ಒತ್ತಡವನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಆಯಾಸ ಮತ್ತು ಒತ್ತಡವನ್ನು ಅನುಭವಿಸುವಿರಿ. ನೀವು ಸರ್ಕಾರಿ ಕೆಲಸದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ನಿಮ್ಮ ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡಲು ಸಲಹೆ ನೀಡಲಾಗುವುದು. ಒಂದು ಸಣ್ಣ ತಪ್ಪು ಮಾಡಿದರೂ ಅದರ ಪರಿಣಾಮವನ್ನು ಅನುಭವಿಸಬೇಕಾಗಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲಿತಾಂಶದ ದಿನ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಬೇಕಾಗುತ್ತದೆ. ಐಷಾರಾಮಿಗಳಿಗಾಗಿ ಹೆಚ್ಚು ಹಣವನ್ನು ಖರ್ಚು ಮಾಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ

ವೃಷಭ ರಾಶಿ
ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ಸಲಹೆ ನೀಡಲಾಗುವುದು, ಇಲ್ಲದಿದ್ದರೆ ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯುತ್ತವೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮನೆಯ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು. ಉಳಿತಾಯದ ಕಡೆಗೂ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುವುದು. ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ನಿಮ್ಮ ವಿದ್ಯಾಭ್ಯಾಸದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಗ್ಗೆ 7 ರಿಂದ ಮಧ್ಯಾಹ್ನ 12:30 ರವರೆಗೆ
ಮಿಥುನ ರಾಶಿ
ಕೆಲಸದಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮಗೆ ಕೆಲವು ಒಳ್ಳೆಯ ಸುದ್ದಿ ಸಿಗಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ವಿವಾದ ತಪ್ಪಿಸಲು ಸಲಹೆ ನೀಡಲಾಗುವುದು. ಇಲ್ಲದಿದ್ದರೆ ವ್ಯವಹಾರದಲ್ಲಿ ದೊಡ್ಡ ನಷ್ಟಗಳು ಉಂಟಾಗಬಹುದು. ನೀವಿಂದು ಚಿಕ್ಕ ನಿರ್ಧಾರಗಳನ್ನು ಕೂಡ ಬಹಳ ಯೋಚಿಸಿ ತೆಗೆದುಕೊಂಡರೆ ಉತ್ತಮ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ಆರೋಗ್ಯ ಹದಗೆಡುವ ಲಕ್ಷಣಗಳಿವೆ, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಸಂಜೆ 4:05 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಕೆಲಸದಲ್ಲಿಮಿಶ್ರಫಲ, ಮಾರ್ಕೆಟಿಂಗ್‌ನಲ್ಲಿ ಇಂದು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನೀವು ಉದ್ಯೋಗದ ಜೊತೆಗೆ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ನೀವು ಹೆಚ್ಚು ಆತುರಪಡಬೇಡಿ. ಅದರ ಬಗ್ಗೆ ಚೆನ್ನಾಗಿ ವಿಚಾರಿಸಿದ ಬಳಿಕವಷ್ಟೇ ಮಾಡಿ. ನಿಮ್ಮ ಬಿಡುವಿಲ್ಲದ ದಿನಚರಿಯಿಂದಾಗಿ, ಇಂದು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ಹೆಚ್ಚು ಗಮನ ಹರಿಸಲು ನಿಮಗೆ ಸಾಧ್ಯವಾಗದಿರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಗ್ಗೆ 5:45 ರಿಂದ 10:25 ರವರೆಗೆ
ಸಿಂಹ ರಾಶಿ
ಹಣದ ಬಗ್ಗೆ ಅತಿಯಾಗಿ ಚಿಂತೆ ಮಾಡಬೇಡಿ, ಸರಿಯಾದ ಸಮಯ ಬಂದಾಗ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲವು ಪ್ರಮುಖ ಕೆಲಸವನ್ನು ನಿಯೋಜಿಸಬಹುದು. ಅಂತಹ ಪರಿಸ್ಥಿತಿಯಲ್ಲಿ ಗಾಬರಿಯಾಗುವ ಬದಲಿಗೆ ಸಮಧಾನದಿಂದ ಕೆಲಸ ಮಾಡಿ.. ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 31
ಶುಭ ಮುಹೂರ್ತ: ಮಧ್ಯಾಹ್ನ 1 ರಿಂದ 3 ರವರೆಗೆ
ಕನ್ಯಾ ರಾಶಿ
ಸಂಗಾತಿಯ ಆರೋಗ್ಯ ಸಮಸ್ಯೆ ಚಿಂತೆ ಹೆಚ್ಚಿಸುವುದು, ಈ ಸಮಯದಲ್ಲಿ ಅವರಿಗೆ ಉತ್ತಮ ಆರೈಕೆಯ ಅಗತ್ಯವಿದೆ. ನೀವು ಅವರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿದರೆ ಉತ್ತಮ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದರೂ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಉದ್ಯಮಿಗಳ ಆರ್ಥಿಕ ಸ್ಥಿತಿ ಸುಧಾರಿಸುವ ಲಕ್ಷಣಗಳಿವೆ. ನಿಮಗೆ ಒಳ್ಳೆಯ ಅವಕಾಶ ಸಿಗಬಹುದು. ನೀವು ವಿಶ್ರಾಂತಿಯತ್ತ ಗಮನ ಹರಿಸಿದರೆ ಉತ್ತಮ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಮಧ್ಯಾಹ್ನ 2:15 ರಿಂದ ರಾತ್ರಿ 8:10 ರವರೆಗೆ
ತುಲಾ ರಾಶಿ
ಕೆಲಸದ ದೃಷ್ಟಿಯಿಂದ ಇಂದು ಶುಭವಲ್ಲ, ನಿಮ್ಮ ವಿಳಂಬವು ಇಂದು ನಿಮ್ಮ ಮೇಲಾಧಿಕಾರಿಗಳನ್ನು ಅಸಮಾಧಾನಗೊಳಿಸಬಹುದು. ವ್ಯಾಪಾರಿಗಳು ಅನಗತ್ಯವಾಗಿ ಓಡಾಡಬೇಕಾಗುತ್ತದೆ. ಇಂದು ನಿಮ್ಮ ಕೆಲವು ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನುಮತ್ತಷ್ಟು ಚುರುಕುಗೊಳಿಸಬೇಕು. ಮನೆಯ ವಾತಾವರಣ ಶಾಂತವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದಸ ಸಂಖ್ಯೆ: 20
ಶುಭ ಸಮಯ: ಬೆಳಿಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ
ವೃಶ್ಚಿಕ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹಣಕಾಸಿನ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿರುತ್ತದೆ. ಹೊಸ ಆದಾಯದ ಮೂಲವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಶೀಘ್ರದಲ್ಲೇ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಕಚೇರಿಯಲ್ಲಿ ನಿಮ್ಮ ಸಕಾರಾತ್ಮಕತೆಯು ಇಂದು ನಿಮ್ಮ ಉನ್ನತ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು. ನೀವು ಹೊಸ ಆಲೋಚನೆಗಳಿಂದ ತುಂಬಿರುತ್ತೀರಿ. ವ್ಯಾಪಾರಸ್ಥರಿಗೆ ದಿನವು ಸಾಮಾನ್ಯವಾಗಿರುತ್ತದೆ. ಪ್ರಮುಖ ದಾಖಲೆಗಳನ್ನು ಮಾಡುವಾಗ ಆತುರಪಡಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 7 ರವರೆಗೆ
ಧನು ರಾಶಿ
ದಂಪತಿಗಳು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಕೆಲವು ಅಪೂರ್ಣ ಕೆಲಸಗಳು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯುತ್ತಾರೆ. ಅದರಲ್ಲೂ ಮರ, ಕಬ್ಬಿಣ, ಆಹಾರ ಪದಾರ್ಥಗಳು, ಸ್ಟೇಷನರಿ ಮುಂತಾದವುಗಳಿಗೆ ಸಂಬಂಧಿಸಿದ ವ್ಯಾಪಾರ ಮಾಡಿದರೆ ನಿರೀಕ್ಷಿತ ಫಲಿತಾಂಶ ಸಿಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಶುಭ ಮುಹೂರ್ತ: ಮಧ್ಯಾಹ್ನ 1:30 ರಿಂದ 4 ರವರೆಗೆ
ಮಕರ ರಾಶಿ
ಮಕರ ರಾಶಿಯವರಿಗೆ ಇಂದು ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ನಿಮ್ಮ ಸಂಗಾತಿಯೊಂದಿಗೆ ಪರಸ್ಪರ ಬಾಂಧವ್ಯ ಹೆಚ್ಚಾಗುತ್ತದೆ. ಕುಟುಂಬ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 38
ಶುಭ ಸಮಯ: ಬೆಳಗ್ಗೆ 7:55 ರಿಂದ 10:30 ರವರೆಗೆ
ಕುಂಭ ರಾಶಿ
ಮನೆಯ ಹಿರಿಯರೊಂದಿಗೆ ಮಾತನಾಡುವಾಗ, ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಬಳಸಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಕೆಲವು ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥರು ಇಂದು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು. ನೀವು ಮಧುಮೇಹದಿಂದ ಬಳಲುತ್ತಿದ್ದರೆ ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 6 ರಿಂದ 8:15 ರವರೆಗೆ
ಮೀನ ರಾಶಿ
ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಪ್ರೇಮಿಗಳಿಗೆ ಈ ದಿನವು ತುಂಬಾ ವಿಶೇಷವಾಗಿರುತ್ತದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹಣ ಗಳಿಸುವ ಸಾಧ್ಯತೆಯೂ ಇದೆ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಾಗಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಗಾಢ ಗುಲಾಬಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 2:30 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










