ದಿನ ಭವಿಷ್ಯ ಮಾರ್ಚ್‌ 19: ಮಂಗಳವಾರ ದ್ವಾದಶ ರಾಶಿಗಳಲ್ಲಿ ಯಾವ ರಾಶಿಗಳಿಗೆ ಶುಭ?

ವೈದಿಕಶಾಸ್ತ್ರದ ಪ್ರಕಾರ ಮಾರ್ಚ್‌ 19 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:

ಮೇಷ ರಾಶಿ

ಈ ದಿನ ಕೆಲಸದ ವಿಷಯದಲ್ಲಿ ನಿಮಗೆ ಉತ್ತಮವಾಗಿದೆ, ನಿಮ್ಮ ಕೌಶಲ್ಯ ಬಾಸ್‌ನ ಗಮನಕ್ಕೆ ಬರುತ್ತದೆ, ವ್ಯಾಪಾರಿಗಳು ಆರ್ಥಿಕ ಲಾಭ ಗಳಿಸುವಿರಿ. ಕುಟುಂಬ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ತುಂಬಾ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ

Dina Bhavishya

ವೃಷಭ ರಾಶಿ

ಅನಗತ್ಯ ಮಾತುಕತೆಗಳಲ್ಲಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ, ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯದ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ ಅತಿಯಾದ ಒತ್ತಡವನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ಅದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಬೆಳಿಗ್ಗೆ 6:50 ರಿಂದ 10 ರವರೆಗೆ

ಮಿಥುನ ರಾಶಿ

ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಕೆಲಸದ ಒತ್ತಡ ಕಡಿಮೆ ಇರಲಿದೆ, ವ್ಯಾಪಾರಿಗಳಿಗೆ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನಿಮ್ಮ ವ್ಯವಹಾರದಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ನೀವು ಕಾಣುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ

ಕರ್ಕ ರಾಶಿ

ಉದ್ಯೋಗಿಗಳಿಗೆ ಇಂದು ಕಷ್ಟದ ದಿನವಾಗಿದೆ. ವ್ಯಾಪಾರಿಗಳಿಗೆ ಈ ದಿನ ದುಬಾರಿಯಾಗಬಹುದು, ಇಂದು ನೀವು ಅನಗತ್ಯ ಚಟುವಟಿಕೆಗಳಿಗೆ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ನೀವು ಅಂತಹ ನಿರ್ಲಕ್ಷ್ಯವನ್ನು ತಪ್ಪಿಸಿದರೆ ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಈ ದಿನ ಅನಗ್ಯತವಾಗಿ ಖರ್ಚು ಮಾಡಬೇಡಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ಕೈ ಅಥವಾ ಪಾದಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ

ಸಿಂಹ ರಾಶಿ

ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ, ನಿಮ್ಮ ಯಾವುದೇ ಕೆಲಸವನ್ನು ಕಚೇರಿಯಲ್ಲಿ ಅಪೂರ್ಣವಾಗಿ ಬಿಡಬೇಡಿ. ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ವ್ಯಾಪಾರಿಗಳು ಈ ದಿನ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಕೆಲವು ಕೆಲಸಗಳು ಮಧ್ಯದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಲ್ಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 4:50 ರಿಂದ 7 ರವರೆಗೆ

ಕನ್ಯಾ ರಾಶಿ

ವ್ಯಾಪಾರಿಗಳು ಈ ದಿನ ಮಾಡುವ ಪ್ರಯಾಣದಿಂದ ಧನಾತ್ಮಕ ಫಲಿತಾಂಶ ಪಡೆಯುತ್ತೀರಿ.ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನವು ತುಂಬಾ ವಿಶೇಷವಾಗಿರುತ್ತದೆ. ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ, ಹೆಚ್ಚಿನ ಆರೋಗ್ಯ ಸಮಸ್ಯೆ ಉಂಟಾದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 6
ಶುಭ ಮುಹೂರ್ತ: ಬೆಳಗ್ಗೆ 10.30 ರಿಂದ ಮಧ್ಯಾಹ್ನ 12

ತುಲಾ ರಾಶಿ

ಈ ದಿನ ತುಂಬಾ ಖುಷಿಯಿಂದ ಕಳೆಯುತ್ತೀರಿ. ನೀವು ಉದ್ಯೋಗ ಪಡೆಯುವ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಇತ್ತೀಚೆಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರೆ ಅದರ ಉತ್ತಮ ಫಲಿತಾಂಶ ದೊರೆಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಸಂಜೆ 6 ರಿಂದ 8:15 ರವರೆಗೆ

ವೃಶ್ಚಿಕ ರಾಶಿ

ಇಂದು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ಹಣದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಧನು ರಾಶಿ

ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕೆಲಸದಲ್ಲಿ ಇಂದು ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲವು ಹೆಚ್ಚುವರಿ ಜವಾಬ್ದಾರಿಗಳು ಸಿಗಬಹುದು. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಿದರೆ ಉತ್ತಮ. ಸಂಗಾತಿಯೊಂದಿಗೆ ಮಾತನಾಡುವಾಗ ಎಚ್ಚರವಹಿಸಿ, ನಿಮ್ಮ ಮಾತುಗಳು ಭಿನ್ನಾಭಿಪ್ರಾಯ ಉಂಟು ಮಾಡಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಶುಭ ಮುಹೂರ್ತ: ಬೆಳಗ್ಗೆ 7.30 ರಿಂದ ಮಧ್ಯಾಹ್ನ 12

ಮಕರ ರಾಶಿ

ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಿ. ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ತೊಂದರೆಗೆ ಸಿಕ್ಕಹಾಕಿಕೊಳ್ಳುತ್ತೀರಿ. ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಹಳೆಯ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ವಿಶ್ರಾಂತಿ ಕಡೆಯೂ ಗಮನಹರಿಸಿ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಸಂಜೆ 4:55 ರಿಂದ ರಾತ್ರಿ 8:05 ರವರೆಗೆ

ಕುಂಭ ರಾಶಿ

ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಇಂದು ಸುಧಾರಣೆ ಕಂಡು ಬರಲಿದೆ. ಕೆಲಸ ಮಾಡುವವರು ಕಚೇರಿಯಲ್ಲಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಅನಾವಶ್ಯಕ ಸಂಗತಿಗಳಿಂದ ದೂರವಿರಿ ಇಲ್ಲದಿದ್ದರೆ ನಿಮಗೇ ನಷ್ಟ. ವ್ಯಾಪಾರಸ್ಥರಿಗೆ ಲಾಭದ ದಿನ, ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 42
ಶುಭ ಸಮಯ: ಬೆಳಿಗ್ಗೆ 5 ರಿಂದ 9:15 ರವರೆಗೆ

ಮೀನ ರಾಶಿ

ವ್ಯಾಪಾರಸ್ಥರಿಗೆ ಇಂದು ಬಹಳ ಒಳ್ಳೆಯ ದಿನವಾಗಲಿದೆ. ನೀವು ಉದ್ಯೋಗದಲ್ಲಿದ್ದರೆ ಮತ್ತು ನಿಮ್ಮ ಬಡ್ತಿಗಾಗಿ ಕಾಯುತ್ತಿದ್ದರೆ, ನೀವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಹದಗೆಡುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 36
ಶುಭ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:30 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Dina Bhavishya: March 19 Daily Horoscope Prediction Of 12 Zodiac Signs 2024 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Pieces, Capricorn, Aquarius, And Pisces In Kannada
Story first published: Monday, March 18, 2024, 20:37 [IST]
X
Desktop Bottom Promotion