Latest Updates
-
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ!
ದಿನ ಭವಿಷ್ಯ ಮಾರ್ಚ್ 28: ಗುರುವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಮಾರ್ಚ್ 28 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ವೃತ್ತಿ ಜೀವನದ ವಿಷಯದಲ್ಲಿ ಈ ದಿನ ಶುಭವಾಗಿದೆ. ಕೆಲಸದಲ್ಲಿ ನೀವು ನಿರೀಕ್ಷಿಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಅನಗ್ಯತ ಚಿಂತೆಗಳಿಂದ ದೂರವಿರಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 18
ಶುಭ ಮುಹೂರ್ತ: ಬೆಳಗ್ಗೆ 8:30 ರಿಂದ ಮಧ್ಯಾಹ್ನ 12

ವೃಷಭ ರಾಶಿ
ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಕೆಲವು ಅಡೆತಡೆಗಳನ್ನು ಎದುರಿಸಿರುತ್ತೀರಿ, ಆದರೆ ಇಂದು ನಿಮಗೆ ಒಂದು ಒಳ್ಳೆಯ ಪರಿಹಾರ ಸಿಗಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಚಿಕ್ಕ ನಿರ್ಧಾರ ಕೂಡ ತುಂಬಾ ಆಲೋಚಿಸಿ ತೆಗೆದುಕೊಳ್ಳುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9:05 ರವರೆಗೆ
ಮಿಥುನ ರಾಶಿ'
ಉದ್ಯಮಿಗಳಿಗೆ ಈ ದಿನ ಶುಭವಾಗಿದೆ. ಉದ್ಯೋಗಿಗಳು ಕೆಲಸದಲ್ಲಿ ನಿರ್ಲಕ್ಷ್ಯ ತೋರಬೇಡಿ, ಇಂದು ನೀವು ನಿಮ್ಮ ಕೆಲಸದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಇಂದು ಖರ್ಚು ಇರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8:30 ರವರೆಗೆ
ಕರ್ಕ ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ, ಅನಗ್ಯತ ಕೋಪ, ವಿವಾದ ನಿಮ್ಮ ಮನೆಯ ಶಾಂತಿಯನ್ನು ಮಾತ್ರ ಕೆಡಿಸುತ್ತವೆ. ಹಣದ ವಿಷಯದಲ್ಲಿ, ನೀವು ಮಿಶ್ರ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ನೀವು ಯಶಸ್ವಿಯಾಗದಿರಬಹುದು. ಇಂದು ನೀವು ಕೆಲವು ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ತುಂಬಾ ಚಿಂತಿತರಾಗುತ್ತೀರಿ. ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:30 ರವರೆಗೆ
ಸಿಂಹ ರಾಶಿ
ಇಂದು ಉದ್ಯಮಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಇನ್ನು ಉದ್ಯೋಗಿಗಳು ಕೆಲಸದ ಬದಲಾವಣೆಯ ಬಗ್ಗೆ ಆಲೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸರಾಸರಿ ದಿನವಾಗಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 8:00 ರವರೆಗೆ
ಕನ್ಯಾ ರಾಶಿ
ನಿಮಗೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಇಂದು ತುಂಬಾ ಚೆನ್ನಾಗಿರಲಿದೆ. ಈ ದಿನ ನೀವು ಆರ್ಥಿಕ ನೆರವು ಕೇಳಿದವರಿಂದ ಹಣದ ಸಹಾಯ ಸಿಗಲಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದ್ದು ವೀಸಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ನಿಮ್ಮ ದಾರಿಯಲ್ಲಿ ಬರುವ ಅಡೆತಡೆಗಳು ಶೀಘ್ರದಲ್ಲೇ ನಿವಾರಣೆಯಾಗಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 35
ಶುಭ ಸಮಯ: ಬೆಳಿಗ್ಗೆ 7:10 ರಿಂದ 11:05 ರವರೆಗೆ
ತುಲಾ ರಾಶಿ
ಇಂದು ನೀವು ತುಂಬಾ ಸಂತೋಷವಾಗಿರುತ್ತೀರಿ. ಕಚೇರಿಯ ವಾತಾವರಣವು ತುಂಬಾ ಧನಾತ್ಮಕವಾಗಿರುತ್ತದೆ. ನಿವ್ಯಾಪಾರಿಗಳು ಈ ದಿನ ಉತ್ತಮ ಲಾಭ ಗಳಿಸಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿಲಿದೆ. ಶೀಘ್ರದಲ್ಲೇ ನೀವು ಹಳೆಯ ಸಾಲದಿಂದ ಮುಕ್ತರಾಗಬಹುದು. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 4:30 ರಿಂದ ರಾತ್ರಿ 9:15 ರವರೆಗೆ
ವೃಶ್ಚಿಕ ರಾಶಿ
ಇಂದು ಮನೆಯಲ್ಲಿನ ಸಮಸ್ಯೆ ಕಡಿಮೆಯಾಗಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಲು ನಿಮಗೆ ಸಲಹೆ ನೀಡಲಾಗುವುದು, ಇಲ್ಲದಿದ್ದರೆ ಭವಿಷ್ಯದ ಯೋಜನೆಗಳಿಗೆ ಅಡ್ಡಿಯಾಗಬಹುದು. ಇಂದು ವ್ಯಾಪಾರಸ್ಥರಿಗೆ ಸರಾಸರಿ ದಿನವಾಗಲಿದೆ. ಉತ್ತಮ ಲಾಭವನ್ನು ಗಳಿಸಲು, ನಿಮ್ಮ ವ್ಯವಹಾರ ನಿರ್ಧಾರಗಳನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಮಧ್ಯಾಹ್ನ 3:30 ರಿಂದ 5:30 ರವರೆಗೆ
ಧನು ರಾಶಿ
ನೀವು ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಈ ದಿನ ಉತ್ತಮ ಅವಕಾಶಗಳು ಸಿಗಲಿದೆ. ಪ್ರಮುಖ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಉತ್ತಮ ದಿನವಾಗಿದೆ. ಕೆಲಸವನ್ನು ಬದಿಗಿಟ್ಟು, ನಿಮ್ಮ ಕುಟುಂಬದ ಬಗ್ಗೆಯೂ ಗಮನ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿದೆ. ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9:15 ರವರೆಗೆ
ಮಕರ ರಾಶಿ
ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾರಿಗೂ ಸಾಲನೀಡಬೇಡಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಯಾರನ್ನೂ ಕುರುಡಾಗಿ ನಂಬಬೇಡಿ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ನೀವೇ ತೆಗೆದುಕೊಂಡರೆ ಉತ್ತಮ.ಬೇಡದ ವಿಷಯಗಳಲ್ಲಿ ತಮ್ಮ ಸಮಯವನ್ನು ವ್ಯರ್ಥ ಮಾಡದಂತೆ ಸಲಹೆ ನೀಡಲಾಗುವುದು. ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯ ದಿನ. ನಿಮ್ಮ ವಿದ್ಯಾಭ್ಯಾಸದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ, ಆದರೆ ಹೆಚ್ಚುತ್ತಿರುವ ವೆಚ್ಚಗಳು ನಿಮಗೆ ಚಿಂತೆಯನ್ನು ಉಂಟುಮಾಡಬಹುದು ವ್ಯಾಪಾರಿಗಳು ಮಾಡುವ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 4
ಶುಭ ಮುಹೂರ್ತ: ಬೆಳಗ್ಗೆ 9:30 ರಿಂದ ಮಧ್ಯಾಹ್ನ 12
ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ವ್ಯವಹಾರದಲ್ಲಿ ನೀವು ದೊಡ್ಡ ಮತ್ತು ಧನಾತ್ಮಕ ಬದಲಾವಣೆಗಳನ್ನು ನೋಡುತ್ತೀರಿ. ಉದ್ಯೋಗಿಗಳಿಗೆ ಬಡ್ತಿಯ ಬಲವಾದ ಸಾಧ್ಯತೆ ಇದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಬ್ಯಾಂಕಿನಿಂದ ಸಾಲ ಪಡೆದಿದ್ದರೆ, ಅದರ ಕಂತುಗಳನ್ನು ಪಾವತಿಸುವಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ನೀವು ಸ್ನಾಯು ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಬೆಳಗ್ಗೆ 6 ರಿಂದ 8:25 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











