Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya: ಈ ಶನಿವಾರ ಯಾರಿಗೆ ಶುಭದಿನ
ವೈದಿಕ ಶಾಸ್ತ್ರದ ಪ್ರಕಾರ ನವೆಂಬರ್ 01 (01 November Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಅನುಕೂಲಕರ ದಿನ. ನಿಮ್ಮ ಹಲವು ಕೆಲಸಗಳು ನೀವು ಅಂದುಕೊಂಡ ರೀತಿಯಲ್ಲಿಯೇ ನಡೆಯಲಿವೆ. ನಿಮ್ಮ ಹಣಕಾಸು ಸ್ಥಿತಿ ಇಂದು ಸುಧಾರಿಸಲಿದೆ. ಆಪ್ತರಿಂದ ಸಹಕಾರ ಪಡೆಯಲಿದ್ದೀರಿ.
ವೃಷಭ ರಾಶಿ
ವೃಷಭ ರಾಶಿಯ ಜನರಿಗೆ ಇಂದು ಮಿಶ್ರಫಲದ ದಿನ. ನೀವು ಮಾಡಬೇಕಿದ್ದ ಕೆಲಸವನ್ನು ಮುಂದೂಡಬಹುದು. ಯಾರಿಂದಾದರು ಹಣ ಪಡೆಯುವ ನಿಮ್ಮ ಬಯಕೆಯು ಫಲ ನೀಡಬಹುದು. ಬಂಧುಗಳು ಭೇಟಿಯಾಗಬಹುದು. ಸ್ನೇಹ ಸಂಬಂಧ ಗಟ್ಟಿಯಾಗುತ್ತದೆ.

ಮಿಥುನ ರಾಶಿ
ನಿಮಗಿಂದು ಪ್ರಯಾಣಗಳಿಂದ ತುಂಬಿದ ದಿನ. ದಿನದ ಅಂತ್ಯದಲ್ಲಿ ಖರ್ಚು ಹೆಚ್ಚಾಗಬಹುದು. ಪ್ರಯಾಣಗಳ ಮಾಡುವಾಗ ಎಚ್ಚರಿಕೆಯಿಂದ ಇರುವುದು ಉತ್ತಮ. ವಾಹನ ಖರ್ಚು ಇರಲಿದೆ. ಮನೆಗಾಗಿ ನೀವು ಖರೀದಿಸುವ ವಸ್ತುವಿನಿಂದ ಅತೃಪ್ತಿ ಇರಲಿದೆ.
ಕರ್ಕ ರಾಶಿ
ಕರ್ಕ ರಾಶಿಯ ಜನರಲ್ಲಿ ಇಂದು ಹಲವು ರೀತಿಯ ಸಮಸ್ಯೆಗಳ ನೋಡಬಹುದು. ನಿಮ್ಮ ದೂರ ಪ್ರಯಾಣಗಳು ಗೊಂದಲದಿಂದ ಕೂಡಬಹುದು. ಅಂದುಕೊಂಡ ಕೆಲಸ ಆಗದೆ ಇರಬಹುದು. ಆರೋಗ್ಯದಲ್ಲಿ ಸಣ್ಣ ಪುಟ್ಟ ಏರಿಳಿತ ನೋಡಬಹುದು. ಆರ್ಥಿಕ ಸ್ಥಿತಿಯಲ್ಲಿ ಅಡ್ಡಿಗಳು ಎದುರಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ಉತ್ತಮ ದಿನ. ಹಣಕಾಸಿನ ಪರಿಸ್ಥಿತಿ ಸುಧಾರಿಸುವ ದಿನ. ಯಾರಿಂದಾದರು ಹಣ ಪಡೆದಿದ್ದರೆ ಮರಳಿ ನೀಡಬೇಕಾಗುತ್ತದೆ. ಪ್ರೀತಿ ಪಾತ್ರರಿಂದ ನಿಮಗೆ ಉತ್ತಮ ಸುದ್ದಿ ಬರಲಿದೆ. ಅನೇಕರಲ್ಲಿ ಪ್ರವಾಸದ ಸಾಧ್ಯತೆ ಇದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರು ಇಂದು ಪ್ರಯಾಣ ಮಾಡಬಹುದು. ನಿಮ್ಮ ಹಲವು ಕೆಲಸಗಳು ಹಣಕಾಸಿನ ಮೇಲೆ ನಿಂತಿದೆ. ಆಸ್ಪತ್ರೆ ಸಂಬಂಧಿತ ವಿಚಾರವಾಗಿ ನೀವು ತೊಡಗಬಹುದು. ವಾಹನ ವಿಚಾರದಲ್ಲಿ ಎಚ್ಚರಿಕೆ ಇಡಿ. ತಾಳ್ಮೆಯಿಂದ ವರ್ತಿಸುವುದು ಒಳಿತು ತರಲಿದೆ. ಮಕ್ಕಳ ಅಥವಾ ದಾಂಪತ್ಯ ವಿಚಾರದಲ್ಲಿ ತರಾತುರಿಯಲ್ಲಿ ಯಾವ ನಿರ್ಧಾರ ಅಥವಾ ಮಾತುಗಳ ಆಡಬೇಡಿ.
ತುಲಾ ರಾಶಿ
ತುಲಾ ರಾಶಿ ಮಂದಿಗೆ ಇಂದು ಸವಾಲುಗಳಿಂದ ತುಂಬಿದ ದಿನ. ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಬಿಕ್ಕಟ್ಟು ತರಬಹುದು. ನೀವು ಸಾಲ ಮಾಡಬೇಕಾದ ಪರಿಸ್ಥಿತಿಗೆ ಎದುರಾಗಬಹುದು. ತಂದೆ ತಾಯಿಯ ಆರೋಗ್ಯದ ಕಡೆ ಗಮನವಿಡಿ. ಯಾರಿಂದಾದರು ಹಣ ಪಡೆಯುವ ನಿಮ್ಮ ಬಯಕೆ ಈಡೇರಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಜನರಿಗೆ ಇಂದು ಸಾಮಾನ್ಯ ದಿನವಾಗಿರಲಿದೆ. ಯಾರಿಗಾದರು ಹಣ ನೀಡಬೇಕಾದ ಒತ್ತಡದಲ್ಲಿ ಇರುವಿರಿ. ದಿನದ ಅಂತ್ಯದಲ್ಲಿ ದೊಡ್ಡ ಖರ್ಚು ಇರಬಹುದು. ಪ್ರಯಾಣ ಮಾಡಬೇಕಾಗುತ್ತದೆ. ದಾಂಪತ್ಯ ವಿಚಾರದಲ್ಲಿ ಬೇಡದಿರುವ ವಿಚಾರದಲ್ಲಿ ಕಲಹ ಬರಬಹುದು.
ಧನು ರಾಶಿ
ಧನು ರಾಶಿ ಜನರಲ್ಲಿ ಇಂದು ಉತ್ತಮ ದಿನ. ನಿಮ್ಮ ಹಲವು ಕನಸನ್ನು ಈಡೇರಿಸಿಕೊಳ್ಳಲು ಅವಕಾಶಗಳಿವೆ. ಕೆಲಸ ಸಂಬಂಧವಾಗಿ ಪ್ರಯಾಣ ಮಾಡಬಹುದು, ಶುಭ ಕಾರ್ಯ ಸಂಬಂಧ ತಯಾರಿಯಲ್ಲಿ ತೊಡಗಬಹುದು. ಈ ದಿನ ನಿಮಗೆ ಶ್ರಮದಾಯಕವಾಗಬಹುದು.
ಮಕರ ರಾಶಿ
ಮಕರ ರಾಶಿ ಜನರಿಗೆ ಇಂದು ಆರಾಮದಾಯಕ ದಿನ ಎನ್ನಬಹುದು. ದಿನವು ನಿಮಗೆ ವಿಶ್ರಾಂತಿ ಪಡೆಯಲು ಮೀಸಲಿಡಬಹುದು. ಹಲವರು ಇಂದು ಕುಟುಂಬದೊಂದಿಗೆ ಸಮಯ ಕಳೆಯುತ್ತೀರಿ. ಗೃಹಿಣಿಯರು ಇಂದು ಸಣ್ಣ ಪುಟ್ಟ ಸಮಸ್ಯೆಗಳ ಎದುರಿಸಬಹುದು.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಸಾಮಾನ್ಯ ದಿನ. ನೀವು ಅಂದುಕೊಂಡ ಕೆಲಸ ಆಗಲಿದೆ. ಹಣಕಾಸು ವಿಚಾರದಲ್ಲಿ ಒತ್ತಡ ನಿವಾರಣೆಯಾಗಲಿದೆ. ಪ್ರಯಾಣ ಮಾಡಬೇಕಾಗಿ ಬರಬಹುದು. ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳ ಮುಗಿಸುವಿರಿ.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಇಂದು ಉತ್ತಮ ಫಲಿತಾಂಶ ಬರುವ ದಿನ. ದೈನಂದಿನ ಕೆಲಸಗಳಲ್ಲಿ ಶುಭವಿದೆ. ಗೃಹಿಣಿಯರು ಪ್ರಯಾಣ ಮಾಡಬಹುದು. ವ್ಯಾಪಾರಿಗಳಿಗೆ ಉತ್ತಮ ಲಾಭದ ದಿನ. ಮಕ್ಕಳ ವಿಚಾರವಗಿ ನಿಮ್ಮಲ್ಲಿದ್ದ ಚಿಂತೆಯೊಂದು ದೂರಾಗಲಿದೆ.



Click it and Unblock the Notifications










