Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya: ಬುಧವಾರದಂದು ಯಾರಿಗಿದೆ ಶುಭಫಲ!
ವೈದಿಕ ಶಾಸ್ತ್ರದ ಪ್ರಕಾರ ನವೆಂಬರ್ 05 (05 November Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಉತ್ತಮ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಇದ್ದಂತಹ ಅಡೆತಡೆ ನಿವಾರಣೆಯಾಗಲಿದೆ, ಸರಿಯಾದ ಸಮಯಕ್ಕೆ ನಿಮಗೆ ಹಣದ ಅವಶ್ಯಕತೆ ಈಡೇರಲಿದೆ. ದೇವಾಲಯ ಭೇಟಿಯ ಸಾಧ್ಯತೆ ಇದೆ. ಸಮಾಜಮುಖಿ ಕಾರ್ಯದಲ್ಲಿ ನೀವಿಂದು ಭಾಗಿಯಾಗುತ್ತೀರಿ.
ವೃಷಭ ರಾಶಿ
ವೃಷಭ ರಾಶಿ ಜನರಿಗೆ ಇಂದು ಉತ್ತಮ ದಿನ. ನಿಮ್ಮ ಹಲವು ಕೆಲಸಗಳು ನೀವು ಅಂದುಕೊಂಡಂತೆ ನಡೆಯಲಿದೆ. ಆರ್ಥಿಕವಾಗಿ ಒತ್ತಡವಿದ್ದರೂ ನೀವು ಬಗೆಹರಿಸಿಕೊಳ್ಳುವ ದಾರಿ ಕಂಡುಕೊಳ್ಳುವಿರಿ. ಆರೋಗ್ಯ ಸುಧಾರಣೆ ಇದೆ.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಇಂದು ಸವಾಲಿನಿಂದ ತುಂಬಿದ ದಿನ. ನಿಮ್ಮ ವ್ಯಾಪಾರ, ವ್ಯವಹಾರಗಳು ನೀವು ಅಂದುಕೊಂಡ ರೀತಿಯಲ್ಲಿ ನಡೆಯುವುದಿಲ್ಲ. ಆಪ್ತರೊಬ್ಬರಿಂದ ಬರಬೇಕಿದ್ದ ಹಣ ನಿಮ್ಮ ಕೈಸೇರದೆ ಇರಬಹುದು. ನಿಮ್ಮ ಉದ್ಯೋಗ ಬದಲಿಸುವ ಪ್ರಯತ್ನದಲ್ಲಿ ಇಂದು ಧನಾತ್ಮಕ ವಿಚಾರ ಬರಲಿದೆ.
ಕರ್ಕ ರಾಶಿ
ಕರ್ಕ ರಾಶಿಯ ಜನರಿಗೆ ಇಂದು ಉತ್ತಮ ಫಲಿತಾಂಶ ದಿನ. ನಿಮ್ಮ ಬಹುದಿನದ ಶ್ರಮವೊಂದು ಇಂದು ಫಲಿತಾಂಶ ತರಲಿದೆ. ಅನೇಕರಲ್ಲಿ ಸಂಬಂಧಗಳು ಅಥವಾ ಸ್ನೇಹಗಳಲ್ಲಿ ಮನಸ್ತಾಪ ಮೂಡಬಹುದು. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ಇರಲಿದೆ.
ಸಿಂಹ ರಾಶಿ
ಸಿಂಹ ರಾಶಿ ಜನರಿಗೆ ಸಾಮಾನ್ಯ ದಿನವಾಗಿರಲಿದೆ. ನಿಮ್ಮ ಆರೋಗ್ಯದಲ್ಲಿ ಸಣ್ಣ ಪುಟ್ಟ ಏರಿಳಿತ ನೋಡಬಹುದು. ಬಹುದಿನದ ಒತ್ತಡವೊಂದಕ್ಕೆ ತಾತ್ಕಾಲಿಕ ಬಿಡುಗಡೆ ನೀಡಬಹುದು. ಪ್ರಯಾಣ ಮಾಡಬೇಕಾಗಬಹುದು. ದಿನದ ಅಂತ್ಯದಲ್ಲಿ ಖರ್ಚುಗಳಿವೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ಓಡಾಟದಲ್ಲಿ ಕಳೆಯುವಿರಿ. ಕೆಲವೊಮ್ಮೆ ನಿಮ್ಮದಲ್ಲದ ಕೆಲಸಗಳಿಗೂ ಕೂಡ ನೀವು ಪ್ರಯಾಣ ಮಾಡಬೇಕಾಗಿ ಬರಬಹುದು. ಪ್ರಯಾಣಗಳು ನೀವು ಬಯಸಿದಂತಹ ಫಲಿತಾಂಶ ನೀಡದೆ ಇರಬಹುದು. ಮನೆಯಿಂದ ಹೊರಗೆ ಹೆಚ್ಚಿನ ಸಮಯ ಕಳೆಯಬಹುದು.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಇಂದು ಸವಾಲುಗಳಿಂದ ತುಂಬಿದ ದಿನ. ನಿಮ್ಮ ಹಲವು ಕೆಲಸಗಳಲ್ಲಿ, ವ್ಯವಹಾರ ಒಪ್ಪಂದಗಳಲ್ಲಿ ಇಂದು ಒತ್ತಡಗಳು ಎದುರಾಗಲಿದೆ. ಅಪರಿಚಿತರೊಂದಿಗೆ ಯಾವುದೇ ಹೊಸ ವ್ಯವಹಾರಕ್ಕೆ ಮುಂದಾಗಬೇಡಿ. ಖರ್ಚುಗಳನ್ನು ಕಡಿಮೆ ಮಾಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಗೃಹಿಣಿಯರಿಗೆ ಇಂದು ಸಮಸ್ಯೆಗಳಿಂದ ತುಂಬಿದ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಅಡ್ಡಿಗಳಿವೆ. ಹಣಕಾಸು ವಿಚಾರವಾಗಿ ಯಾರೊಂದಿಗಾದರು ಮನಸ್ತಾಪಗಳು ಮೂಡಬಹುದು. ಪ್ರೇಮಿಗಳಿಗೆ ಇಂದು ಶುಭದಿನ.
ಧನು ರಾಶಿ
ಧನು ರಾಶಿಯ ಜನರಲ್ಲಿ ಸಾಮಾನ್ಯ ದಿನ ನೀಡಬಹುದು. ನವವಿವಾಹಿತರಲ್ಲಿ ಖರ್ಚು ಹೆಚ್ಚಾಗಬಹುದು. ಉದ್ಯೋಗದ ಸ್ಥಳದಲ್ಲಿನ ಒತ್ತಡದಿಂದ ನೀವಿಂದು ತೊಂದರೆಗಳಿಗೆ ಸಿಲುಕಬಹುದು. ಆಸ್ತಿ ಅಥವಾ ವಸ್ತು ಖರೀದಿ ವಿಚಾರದಲ್ಲಿ ಎಚ್ಚರಿಕೆಯಿಂದ ಇರುವುದು ಉತ್ತಮ.
ಮಕರ ರಾಶಿ
ಮಕರ ರಾಶಿಯ ಜನರಿಗೆ ಇಂದು ಮಿಶ್ರಫಲವಿದೆ. ವಿವಾಹಿತರಲ್ಲಿ ಸಂಬಂಧಗಳಲ್ಲಿ ಮನಸ್ತಾಪ ಮೂಡಬಹುದು, ಆರೋಗ್ಯದಲ್ಲಿ ಏರುಪೇರು ನಿಮ್ಮ ದೈನಂದಿನ ಕೆಲಸಗಳಲ್ಲಿ ಅಡ್ಡಿ ತರಬಹುದು. ವಾಹನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಅನುಕೂಲಕರ ದಿನವಾಗಲಿದೆ. ನಿಮ್ಮ ಹಣಕಾಸು ಸಮಸ್ಯೆಯೊಂದಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ ಹಾಗೂ ಉಳಿತಾಯದಲ್ಲಿ ಏರಿಕೆ ನೋಡಬಹುದು, ವ್ಯಾಪಾರಿಗಳಿಗೆ ಆದಾಯದಷ್ಟೇ ಖರ್ಚು ಕೂಡ ಇರಲಿದೆ.
ಮೀನ ರಾಶಿ
ಮೀನ ರಾಶಿಯ ಜನರಿಗೆ ಇಂದು ಉತ್ತಮ ದಿನ. ಗೃಹಿಣಿಯರ ಸಂಪತ್ತು ವೃದ್ಧಿಯಾಗಬಹುದು. ಆರ್ಥಿಕ ಯೋಜನೆಗಳು ಕೈ ಹಿಡಿಯಲಿವೆ. ದಾಂಪತ್ಯ ವಿವಾರವಾಗಿ ನಿಮಗೆ ಉತ್ತಮ ದಿನವಾಗಲಿದೆ. ತಂದೆ ತಾಯಿಯ ಆರೋಗ್ಯದಲ್ಲಿ ಏರುಪೇರು ಸಂಭವಿಸಬಹುದು.



Click it and Unblock the Notifications