Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya: ಈ ಶುಕ್ರವಾರವು ಯಾರಿಗೆ ಶುಭದಿನ
ವೈದಿಕ ಶಾಸ್ತ್ರದ ಪ್ರಕಾರ ನವೆಂಬರ್ 14 (14 November Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಸಾಮಾನ್ಯ ದಿನವಾಗಿರಲಿದೆ. ನಿಮ್ಮ ಹಲವು ಕೆಲಸಗಳಲ್ಲಿ ಉತ್ತಮ ಶುಭ ನೋಡಬಹುದು. ಆಪ್ತರಿಂದ ನಿಮಗೆ ಹಣಕಾಸಿನ ನೆರವು ಪಡೆಯುವ ಸಂಭವವಿದೆ. ನಿಮ್ಮ ನಿತ್ಯದ ಕಷ್ಟದ ವಿಚಾರವೊಂದರಿಂದ ಮುಕ್ತಿ ಪಡೆಯುತ್ತೀರಿ.
ವೃಷಭ ರಾಶಿ
ವೃಷಭ ರಾಶಿಯ ಜನರಲ್ಲಿ ಇಂದು ಉತ್ತಮ ಫಲಿತಾಂಶ ಪಡೆಯುವ ದಿನ. ಒಂದಿಷ್ಟು ಸವಾಲುಗಳನ್ನು ನೀವು ಎದುರಿಸಿದ್ದರೆ ಅದರಿಂದ ಮುಕ್ತಿ ಪಡೆಯುವ ಸಮಯ. ನಿಮ್ಮ ಮನೆಗಾಗಿ ದೊಡ್ಡ ಖರ್ಚು ಮಾಡಬೇಕಾಗುತ್ತದೆ.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಇಂದು ಪ್ರಯಾಣ ಮಾಡುವ ದಿನ. ಗೃಹಿಣಿಯರಿಗೆ ಇಂದು ದೊಡ್ಡ ಮಟ್ಟದ ಕಷ್ಟಗಳಿವೆ. ಅದ್ರಲ್ಲೂ ನಿಮ್ಮ ಆರೋಗ್ಯದಲ್ಲಿನ ಏರುಪೇರು ಇಡೀ ದಿನದ ಕೆಲಸ ಕಾರ್ಯದ ಮೇಲೆ ಪರಿಣಾಮ ಬೀರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಇಂದು ಸವಾಲುಗಳ ಎದುರಿಸಲಿದ್ದಾರೆ. ನಿಮಗಾಗಿ ಹಣಕಾಸಿನ ತೊಂದರೆಗಳು ಎದುರಾಗುವ ನಿರೀಕ್ಷೆ ಇದೆ. ಪ್ರಯಾಣಗಳಲ್ಲಿ ಶುಭವಾಗುತ್ತದೆ. ದಾಂಪತ್ಯದಲ್ಲಿ ಸುಖವಿದೆ. ಮಕ್ಕಳ ಕುರಿತಾದ ಚಿಂತೆಯೊಂದು ಇಡೀ ದಿನ ಕಾಡಬಹುದು.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ಉತ್ತಮ ದಿನ. ನಿಮ್ಮ ಹಣಕಾಸು ವಿಚಾರದಲ್ಲಿ ಧನಾತ್ಮಕ ಬದಲಾವಣೆಗಳು ಇರಲಿದೆ. ನಿಮ್ಮ ಕೆಲಸಗಳಲ್ಲಿ ನಿಧಾನಗತಿ ಎದುರಿಸಬಹುದು. ಮನೆಯಲ್ಲಿ ಶಾಂತಿ ನೆಲೆಸಲಿದೆ. ಪ್ರೀತಿಯ ವಿಚಾರವಾಗಿ ನಿಮಗೆ ಶುಭವಾಗಲಿದೆ. ಕೆಲಸದ ಒತ್ತಡ ಕಡಿಮೆಯಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರಲ್ಲಿ ಇಂದು ಮಿಶ್ರಫಲದ ದಿನ. ಗೃಹಿಣಿಯರು ಇಂದು ಪ್ರಯಾಣ ಮಾಡುವಿರಿ. ವಿದ್ಯಾರ್ಥಿಗಳಿಗೆ ಇಂದು ಕಷ್ಟದ ದಿನವಾಗುತ್ತದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ ಅಗತ್ಯ. ದೇವಾಲಯ ಭೇಟಿಯ ಸಾಧ್ಯತೆಗಳಿವೆ. ವ್ಯಾಪಾರಿಗಳಿಗೆ ಉತ್ತಮ ದಿನವಲ್ಲ.
ತುಲಾ ರಾಶಿ
ತುಲಾ ರಾಶಿಯಲ್ಲಿ ಜನಿಸಿದ ಮಂದಿಗೆ ಇಂದು ಒತ್ತಡದ ದಿನ. ಕೆಲಸ, ಮನೆ, ಸಂಬಂಧದ ವಿಚಾರದಲ್ಲಿ ಒತ್ತಡಗಳು ಎದುರಾಗಬಹುದು. ನಿಮ್ಮ ಮನೆಯಲ್ಲಿರುವ ವಸ್ತುವೊಂದು ಹಾನಿಗೊಳಗಾಗಬಹುದು. ವಾಹನ ಸಂಬಂಧಿತ ವಿಚಾರವಾಗಿ ನಿಮ್ಮಲ್ಲಿ ದೃಢ ನಿರ್ಧಾರ ಇರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಜನರಲ್ಲಿ ಇಂದು ಅನುಕೂಲಕರ ದಿನವಾಗುತ್ತದೆ. ನಿಮ್ಮಿಂದ ಆಪ್ತರೊಬ್ಬರಿಗೆ ಸಹಾಯ ಸಿಗಲಿದೆ. ನಿಮ್ಮ ಕನಸೊಂದನ್ನು ನನಸು ಮಾಡಿಕೊಳ್ಳಲು ಕಷ್ಟಪಡಬೇಕಾಗುತ್ತದೆ. ಶ್ರಮ ಪಟ್ಟಿದ್ದಕ್ಕೆ ಪ್ರತಿಫಲ ಅನುಭವಿಸಬಹುದು.
ಧನು ರಾಶಿ
ಧನು ರಾಶಿಯವರು ಇಂದು ಅನುಕೂಲಕರ ದಿನವನ್ನು ನೋಡಬಹುದು. ದಾಂಪತ್ಯ ವಿಚಾರದಲ್ಲಿ ಇಷ್ಟು ದಿನದಿಂದ ಇದ್ದ ಮನಸ್ತಾಪ ನಿವಾರಣೆಯಾಗಲಿದೆ. ಹಣಕಾಸು ವಿಚಾರದಲ್ಲಿ ನಿಮಗೆ ಶುಭವಾಗಲಿದೆ. ಪ್ರೀತಿ ಪಾತ್ರರ ಜೊತೆ ಸಮಯ ಕಳೆಯುವಿರಿ.
ಮಕರ ರಾಶಿ
ಮಕರ ರಾಶಿಯ ಜನರಿಗೆ ಇಂದು ಉತ್ತಮ ದಿನ. ನಿಮ್ಮ ಹಲವು ಕಷ್ಟಗಳನ್ನು ನಿವಾರಿಸಿಕೊಳ್ಳಲು ಹೊಸ ಮಾರ್ಗವೊಂದು ಸಿಗಲಿದೆ. ಗೃಹಿಣಿಯರು ಹಣಕಾಸು ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು. ದೂರ ಪ್ರಯಾಣ ಸಂಬಂಧ ತಯಾರಿ ಮಾಡಿಕೊಳ್ಳಬಹುದು.
ಕುಂಭ ರಾಶಿ
ಕುಂಭ ರಾಶಿ ಜನರಿಗೆ ಇಂದು ಮಿಶ್ರಫಲದ ದಿನ. ನಿಮ್ಮ ಅನಾರೋಗ್ಯ ಸಮಸ್ಯೆಯೊಂದು ಸುಧಾರಣೆಯಾಗಲಿದೆ. ಬಹು ಸಮಯದಿಂದ ನಿಮ್ಮ ಆರ್ಥಿಕ ಸಮಸ್ಯೆಗೆ ಕಾರಣವಾಗಿದ್ದ ವಿಚಾರವೊಂದರಿಂದ ಮುಕ್ತರಾಗುತ್ತೀರಿ. ವ್ಯವಹಾರಗಳು ನಿಧಾನವಾದರು ನೆಮ್ಮದಿ ಇರಲಿದೆ.
ಮೀನ ರಾಶಿ
ಮೀನ ರಾಶಿ ಜನರಿಗೆ ಇಂದು ಪ್ರಯಾಣಗಳಲ್ಲಿ ಭಾಗಿಯಾಗುವ ಸಮಯ. ನಿಮ್ಮ ಹಲವು ಕೆಲಸದ ಕಾರಣಕ್ಕೆ ದೂರ ಪ್ರಯಾಣ ಮಾಡಬಹುದು. ಯಾರಿಂದಾದರು ಹಣ ಪಡೆದಿದ್ದರೆ ಮರಳಿ ನೀಡುವುದು ಉತ್ತಮ.



Click it and Unblock the Notifications




