Latest Updates
-
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ!
Dina Bhavishya: ಈ ಶುಕ್ರವಾರ ಯಾರಿಗೆ ಶುಭದಿನ
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 31 (31 October Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಸವಾಲುಗಳಿವೆ. ನಿಮ್ಮ ಹಣಕಾಸು ಸಂಬಂಧವಾಗಿ ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಆಪ್ತರೊಬ್ಬರಿಂದ ನಿಮಗೆ ಬರಬೇಕಿದ್ದ ಹಣ ಮತ್ತೆ ಮುಂಡೂಡಬಹುದು. ಅನೇಕರಿಗೆ ಇಂದು ಪ್ರಯಾಣದಲ್ಲಿ ಸವಾಲುಗಳು ಎದುರಾಗಬಹುದು.
ವೃಷಭ ರಾಶಿ
ವೃಷಭ ರಾಶಿ ಜನರು ಇಂದು ದೊಡ್ಡ ಮಟ್ಟದ ಚರ್ಚೆಗಳಿಂದ, ಗಲಾಟೆಗಳಿಂದ, ಮನಸ್ತಾಪಗಳಿಂದ ದೂರ ಉಳಿಯುವುದು ಉತ್ತಮ. ಗೃಹಿಣಿಯರಿಗೆ ಇಂದು ಸಾಮಾನ್ಯ ದಿನ. ವಾಹನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಅರ್ಧಕ್ಕೆ ಬಿಟ್ಟ ಕೆಲಸಗಳನ್ನು ಪೂರ್ಣ ಮಾಡುವಿರಿ.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಇಂದು ಮಿಶ್ರ ಫಲವಿದೆ. ನಿಮ್ಮ ಅನೇಕ ಕೆಲಸದಲ್ಲಿ ಶುಭವಾಗುವುದು ನೋಡಬಹುದು. ಹಣಕಾಸು ವಿಚಾರವಾಗಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಫಲ ನೀಡಲಿವೆ. ಆಪ್ತರಿಂದ ದೊಡ್ಡ ಸಾಲದ ಮೊತ್ತ ಪಡೆಯಬಹುದು.
ಕರ್ಕ ರಾಶಿ
ಕರ್ಕ ರಾಶಿಯ ಜನರಿಗೆ ಇಂದು ಉತ್ತಮ ದಿನವಾಗಲಿದೆ, ಯಾರಿಂದಾದರು ಹಣಪಡೆಯುವ ನಿಮ್ಮ ಬಯಕೆ ಈಡೇರಲಿದೆ. ಆಪ್ತರಿಗೆ ನಿಮ್ಮಿಂದ ಸಹಾಯವಾಗಲಿದೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ನೀವು ಪ್ರಯಾಣ ಮಾಡುವಿರಿ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ದೊಡ್ಡ ಮಟ್ಟದ ಶ್ರಮದ ದಿನ. ನೀವು ಮನೆಗಾಗಿ ದೊಡ್ಡ ಕೆಲಸ ಮಾಡಬಹುದು. ಬಹುದಿನದಿಂದ ನಿಮ್ಮ ಆಸೆಯಂತೆ ಇಂದು ವಸ್ತುವೊಂದನ್ನು ಖರೀದಿಸಬಹುದು. ಆಪ್ತರಲ್ಲಿ ನಿಮ್ಮ ಸಂಬಂಧ ಗಟ್ಟಿಯಾಗಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ನವ ವುವಾಹಿತರಿಗೆ ಉತ್ತಮ ದಿನ. ನಿಮ್ಮ ಹಣಕಾಸಿನ ವಿಚಾರದಲ್ಲಿ ಫಲಪ್ರದ ದಿನ. ವಾಹನ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ. ರಾತ್ರಿ ಪ್ರಯಾಣಗಳ ತಪ್ಪಿಸುವುದು ಉತ್ತಮ. ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಲಿದೆ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಉತ್ತಮ ದಿನ. ಯಾರಿಂದಾದರು ಹಣ ಪಡೆದಿದ್ದರೆ ಮರಳಿ ನೀಡುವುದು ಉತ್ತಮ. ಆರ್ಥಿಕ ಸವಾಲುಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುತ್ತೀರಿ. ದೂರ ಪ್ರಯಾಣಗಳು ನೀವು ಅಂದುಕೊಂಡ ರೀತಿಯಲ್ಲಿ ಫಲಿತಾಂಶ ನೀಡದೆ ಇರಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಜನರಿಗೆ ಇಂದು ಸಾಮಾನ್ಯ ದಿನವಾಗಲಿದೆ. ನಿಮ್ಮ ಕೆಲಸಗಳು ಯಥಾಸ್ಥಿತಿ ಯಲ್ಲಿ ನಡೆಯಲಿವೆ. ಸಂಬಂಧಿಕರ ಭೇಟಿಯ ಸಂಭವವಿದೆ. ಗೃಹಿಣಿಯರು ಈ ದಿನ ಖರ್ಚು ಮಾಡಬಹುದು.
ಧನು ರಾಶಿ
ಧನು ರಾಶಿಯ ಜನರಿಗೆ ಇಂದು ಸವಾಲುಗಳಿಂದ ತುಂಬಿದ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಅಡ್ಡಿಗಳ ನೋಡುವಿರಿ. ಹಣಕಾಸಿನ ವಿಚಾರದಲ್ಲಿ ನಿಮ್ಮ ನಿರ್ಧಾರವು ದೊಡ್ಡ ಸವಾಲುಗಳ ತರಬಹುದು. ಕುಟುಂಬಕ್ಕಾಗಿ ನೀವು ಒಪ್ಪಂದಗಳಲ್ಲಿ ಭಾಗಿಯಾಗಬಹುದು. ಅನಗತ್ಯ ಖರ್ಚುಗಳ ಕುರಿತು ಗಮನವಿಡಿ.
ಮಕರ ರಾಶಿ
ಮಕರ ರಾಶಿಯ ಜನರಲ್ಲಿ ಇಂದು ಉತ್ತಮ ದಿನ. ನಿಮ್ಮ ಬಹುದಿನದ ಆಸೆಯೊಂದು ಈಡೇರಲಿದೆ. ಆಧ್ಯಾತ್ಮಿಕವಾಗಿ ನೀವುಂದು ಬಲವಾಗುತ್ತೀರಿ. ಪಂಚೇಂದ್ರಿಯ ಸಂಬಂಧಿ ಸಮಸ್ಯೆ ಎದುರಿಸಬಹುದು. ಬಹಳ ದಿನದಿಂದ ಅನುಭವಿಸಿದ್ದ ನೋವು ನಿವಾರಣೆಯಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯ ಜನರಲ್ಲಿ ಅನುಕೂಲಕರ ದಿನ. ಗೃಹಿಣಿಯರಿಗೆ ಈ ದಿನ ಸವಾಲುಗಳಿವೆ, ನಿಮ್ಮ ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ. ಪ್ರಯಾಣಗಳ ಮಾಡುವಿರಿ. ಆಪ್ತರೊಬ್ಬರು ನಿಮ್ಮ ಕೆಲಸದಲ್ಲಿ ಸಹಾಯ ಮಾಡಲಿದ್ದಾರೆ. ದಾಂಪತ್ಯ ವಿಚಾರದಲ್ಲಿ ಸಣ್ಣ ಮುನಿಸು ಇರಬಹುದು.
ಮೀನ ರಾಶಿ
ಮೀನ ರಾಶಿ ಜನರಿಗೆ ಇಂದು ಪ್ರಯಾಣದಲ್ಲಿ ತೊಡಗುವ ದಿನ. ಹಾಗೆ ದಿನದ ಅಂತ್ಯದಲ್ಲಿ ಖರ್ಚು ಹೆಚ್ಚಾಗಲಿದೆ. ಗೃಹಿಣಿಯರ ಆರೋಗ್ಯದಲ್ಲಿ ಏರುಪೇರು ಸಂಭವಿಸಬಹುದು. ಖರ್ಚುಗಳ ಕಡೆಗೆ ಗಮನವಿಡಿ.



Click it and Unblock the Notifications