Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ಆಗಸ್ಟ್ 13 ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 13)ಭವಿಷ್ಯ ನೋಡೋಣ:
ಮೇಷ ರಾಶಿ
ಕೆಲಸದಲ್ಲಿ ಬ್ಯುಸಿ ಇರುವುದರಿಂದ ವೈಯಕ್ತಿಕ ಜವಾಬ್ದಾರಿಗಳ ಮೇಲೆ ಸರಿಯಾಗಿ ಗಮನಹರಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಕೆಲವೊಂದು ವಿಚಾರಗಳನ್ನು ಕುಟುಂಬದ ಜೊತೆಗೆ ಹಂಚಿಕೊಳ್ಳಬೇಕೆಂದು ಇದ್ದರೆ ಮುಕ್ತವಾಗಿ ಹಂಚಿಕೊಳ್ಳಿ, ಆರೋಗ್ಯದ ಕಡೆಗೆ ಗಮನಹರಿಸಬೇಕು.

ವೃಷಭ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ, ವೃತ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯಲಿವೆ. ವ್ಯಾಪಾರಿಗಳು ಹಣದ ವಿಚಾರದಲ್ಲಿ ಜಾಗ್ರತೆವಹಿಸಿ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿದ್ದರೆ ನಿಮ್ಮ ಆಹಾರ ಪದ್ಧತಿಯ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಮಿಥುನ ರಾಶಿ
ಯಾವುದೇ ಆಸ್ತಿ ಸಂಬಂಧಿತ ವಿವಾದವನ್ನು ಕೋರ್ಟ್‌ನ ವಿರುದ್ಧ ಪರಿಹರಿಸಿ. ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಇತ್ಯಾದಿಗಳನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಲ್ಲ, ಉತ್ತಮ ಆರೋಗ್ಯಕ್ಕಾಗಿ, ಅನಗತ್ಯ ಚಿಂತೆಗಳಿಂದ ದೂರವಿರಿ.
ಕರ್ಕ ರಾಶಿ
ಈ ದಿನ ಶುಭವಾಗಿದೆ. ಧನಾತ್ಮಕವಾಗಿರಿ ಮತ್ತು ಕಷ್ಟಪಟ್ಟು ಕೆಲಸ ಮಾಡಿ,ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ಧನ ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಆದರೆ ಯೋಚಿಸದೆ ಸಂಗಾತಿಗೆ ಯಾವುದೇ ಭರವಸೆ ನೀಡಬೇಡಿ, ಇಲ್ಲದಿದ್ದರೆ ನಿಮ್ಮ ಸಂಬಂಧವು ಹದಗೆಡಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಸಿಂಹ ರಾಶಿ
ಬೇಡದ ವಿಷಯಗಳನ್ನು ನೆನಪಿಸಿಕೊಂಡು ಕೂರಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಜಾಗರೂಕರಾಗಿರಬೇಕು. ಹಣಕಾಸಿನ ವಹಿವಾಟು ಮಾಡುವಾಗ ಆತುರಪಡಬೇಡಿ. ಕುಟುಂಬದವರ ಮನಸ್ಸು ನೋಯಿಸಬೇಡಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ. ಖಾಲಿ ಹೊಟ್ಟೆಯಲ್ಲಿ ಹೆಚ್ಚು ಚಹಾ ಮತ್ತು ಕಾಫಿ ಸೇವಿಸುವುದನ್ನು ತಪ್ಪಿಸಿ.
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ಕೆಲವು ಏರಿಳಿತಗಳಿರಬಹುದು. ಬಾಕಿ ಹಣ ಸಿಗದೇ ಇರುವುದರಿಂದ ಆತಂಕ ಹೆಚ್ಚಾಗಬಹುದು. ತರಾತುರಿಯಲ್ಲಿ ಯಾವುದೇ ಹೆಜ್ಜೆ ಇಡಬೇಡಿ ಇಲ್ಲದಿದ್ದರೆ ನಷ್ಟ
ಅನುಭವಿಸಬೇಕು, ಈ ದಿನ ಸಾಲ ನೀಡಬೇಡಿ.ನಿಮ್ಮ ಸಂಗಾತಿಯ ಕಡೆ ಹೆಚ್ಚಿನ ಗಮನಹರಿಸಬೇಕು, ಅಧಿಕ ಬಿಪಿ ಸಮಸ್ಯೆ ಇದ್ದರೆ ಎಚ್ಚರದಿಂದಿರಿ.
ತುಲಾ ರಾಶಿ
ಕಳಪೆ ಆರೋಗ್ಯವು ಕೆಲಸದ ಮೇಲೆ ಕೂಡ ಪ್ರಭಾವ ಬೀರಬಹುದು. ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ ಇಲ್ಲದಿದ್ದರೆ ಕಳ್ಳತನ ಅಥವಾ ಕಳೆದುಹೋಗುವ ಸಾಧ್ಯತೆ ಇದೆ, ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಬೇಕು, ಆರ್ಥಿಕ ನಷ್ಟದ ಸೂಚನೆಗಳಿವೆ. ಹಣದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಿ. ಕೆಲಸದ ಜೊತೆಗೆ ಕುಟುಂಬಕ್ಕಾಗಿಯೂ ಸಮಯ ಮೀಸಲಿಡಿ.ಯಾವುದೇ ಕಷ್ಟಕರವಾದ ಕೆಲಸವನ್ನು ಉನ್ನತ ಅಧಿಕಾರಿಗಳ ಸಹಾಯದಿಂದ ಸಮಯಕ್ಕೆ ಪೂರ್ಣಗೊಳಿಸಲಾಗುವುದು. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯೂ ಉತ್ತಮವಾಗಿರುತ್ತದೆ. ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮ್ಮ ಆಪ್ತರ ವರ್ತನ ಮನಸ್ಸಿಗೆ ನೋವುಂಟು ಮಾಡಬಹುದು, ಆದರೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ. ಹೂಡಿಕೆ ಇತ್ಯಾದಿಗಳನ್ನು ಮಾಡಲು ಸಮಯ ಸರಿಯಲ್ಲ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಗೆಳೆಯ/ಗೆಳತಿಯ ಜೊತೆಗಿನ ಸಂಬಂಧ ಗಾಢವಾಗುತ್ತದೆ.
ಇಂದು ಆರೋಗ್ಯದ ದೃಷ್ಟಿಯಿಂದ ಉತ್ತಮ ದಿನವಾಗಿರುತ್ತದೆ.
ಮಕರ ರಾಶಿ
ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತೆ ನಿಮ್ಮ ಚಿಂತೆಗಳು ದೂರವಾಗುತ್ತವೆ. ಯಾವುದೇ ಹೊಸ ಒಪ್ಪಂದವನ್ನು ಅಂತಿಮಗೊಳಿಸುವ ಮೊದಲು ಉದ್ಯಮಿಗಳು ಸರಿಯಾದ ಮಾಹಿತಿ ಸಂಗ್ರಹಿಸಲು ಸಲಹೆ ನೀಡಲಾಗುವುದು. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಕುಂಭ ರಾಶಿ
ದಿನವು ತುಂಬಾ ಧನಾತ್ಮಕವಾಗಿರುತ್ತದೆ. ವ್ಯಾಪಾರಿಗಳೇ...ತಪ್ಪು ಮಾಹಿತಿ ನೀಡಿ ನಿಮ್ಮನ್ನು ದಾರಿತಪ್ಪಿಸಲು ಪ್ರಯತ್ನಿಸಬಹುದು. ಅಂತಹವರ ಬಗ್ಗೆ ಜಾಗರೂಕರಾಗಿರಿ.
ಕೆಲವು ದಿನಗಳಿಂದ ಮನೆಯಲ್ಲಿ ವಾತಾವರಣವು ಉತ್ತಮವಾಗಿಲ್ಲದಿದ್ದರೆ, ಇಂದು ದೊಡ್ಡ ಸುಧಾರಣೆಯನ್ನು ಕಾಣಬಹುದು. ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ನಿಮ್ಮ ದೈನಂದಿನ ದಿನಚರಿಯನ್ನು ಬದಲಾಯಿಸಬೇಕಾಗುತ್ತದೆ.
ಮೀನ ರಾಶಿ
ಈ ದಿನ ಶುಭವಾಗಿದೆ, ನಿಮ್ಮ ಯಾವುದೇ ಆಸೆಗಳು ಈಡೇರಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮಗೆ ದೊಡ್ಡ ಪ್ರಗತಿ ಇರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಕುಟುಂಬದ ಕಿರಿಯ ಸದಸ್ಯರೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಅಗತ್ಯಕ್ಕಿಂತ ಹೆಚ್ಚು ಕಟ್ಟುನಿಟ್ಟಾಗಿ ವರ್ತಿಸಬೇಡಿ. ಆರೋಗ್ಯವು ಉತ್ತಮವಾಗಿರುತ್ತದೆ .
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











