Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಫೆಬ್ರವರಿ 12ರ ರಾಶಿಫಲ: ಈ ದಿನ ಯಾವ ರಾಶಿಗೆ ಶುಭ, ಯಾರು ಜಾಗ್ರತೆವಹಿಸಬೇಕು?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 12ರ ಭವಿಷ್ಯ....
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯದ ಜಾಗದಲ್ಲಿ ನೀವು ಹೆಚ್ಚು ಕೋಪಗೊಳ್ಳಬೇಡಿ, ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ, ಆರ್ಥಿಕಾಗಿ ಉತ್ತಮವಾಗಿದೆ. ಇನ್ನು ಧಾರ್ಮಿಕ ಕಾರಣದಿಂದ ನಿವು ಕುಟುಂಬದ ಜೊತೆಗೆ ಸಮಯ ಕಳೆಯಲು ಸಾಧ್ಯವಾಗುವುದು.

ವೃಷಭ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ. ಆದರೆ ಕೆಲಸದ ಜಾಗದಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ, ಈ ದಿನ ಮಕ್ಕಳ ಭವಿಷ್ಯದ ಬಗ್ಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ಉತ್ತಮವಾಗಿರಲಿದೆ, ಅವರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು.
ಕರ್ಕ ರಾಶಿ
ಈ ದಿನ ಆತುರದಿಂದ ಯಾವುದೇ ನಿರ್ಧಾರಕ್ಕೆ ಬರಬೇಡಿ, ಇನ್ನು ಆರೋಗ್ಯದಲ್ಲಿ ಏರಳಿತವಿರಬಹುದು, ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಇನ್ನು ಈ ದಿನ ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸುವುದು ಒಳ್ಳೆಯದು.
ಸಿಂಹ ರಾಶಿ
ಈ ದಿನ ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಈ ದಿನ ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ,ವಿದ್ಯರ್ಥಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಮಿಶ್ರಫಲ, ಕೆಲಸದ ಜಾಗದಲ್ಲಿ ನಿಮಗೆ ವಹಿಸಿರುವ ಕೆಲಸ ಕಾರ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿರಲಿದೆ.
ತುಲಾ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ, ಕೆಲಸದಲ್ಲಿನ ಪ್ರಮುಖ ಸಮಸ್ಯೆ ಬಗೆಹರಿಯಲಿದೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಈ ದಿನ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ, ಈ ದಿನ ಮನೆಯ ಸೌಕರ್ಯ ಹೆಚ್ಚಿಸುವ ವಸ್ತುಗಳನ್ನು ಖರೀದಿಸುವುದರಿಂದ ಹಣದ ಖರ್ಚು ಕೂಡ ಇರಲಿದೆ. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಕೂಡ ಕಾಡಲಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳ ಆದಾಯ ಹೆಚ್ಚಾಗಲಿದೆ, ಆದರೆ ಖರ್ಚು ಕೂಡ ಬರಬಹುದು, ಇದರ ಬಗ್ಗೆ ಜಾಗ್ರತೆವಹಿಸಿ, ಶಾಪಿಂಗ್ ಅಂತ ಹೋದಾಗ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಶುಭವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ವಾಹನ ಖರೀದಿಸಲು ಉತ್ತಮವಾಗಿರಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ, ಹಣದ ದೃಷ್ಟಿಯಿಂದ ಉತ್ತಮವಾಗಿದೆ, ನೀವು ಸಾಲ ಮಾಡಿದ್ದರೆ ಅದನ್ನು ಮರಳಿಸಲು ಸಾಧ್ಯವಾಗಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
