Latest Updates
-
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ?
ಫೆಬ್ರವರಿ 18ರ ರಾಶಫಲ ಪ್ರಕಾರ ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಫೆಬ್ರವರಿ 18ರ ರಾಶಿಫಲ ನೋಡೋಣ:
ಮೇಷ ರಾಶಿ
ನೀವು ಈ ದಿನ ಯಾರಾದರೂ ಸಲಹೆ ನೀಡಿದರೆ ಮುಕ್ತವಾಗಿ ಸ್ವೀಕರಿಸಿ, ಕೆಲಸದ ದೃಷ್ಟಿಯಿಂದಲೂ ಉತ್ತಮವಾಗಿದೆ.ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ, ನಿಮ್ಮ ಗುರಿಯತ್ತ ಗಮನಹರಿಸಿದರೆ ಒಳ್ಳೆಯದು.
ವೃಷಭ ರಾಶಿ
ಈ ದಿನ ನಿಮಗೆ ಸಂತೋಷದಿಂದ ಕೂಡಿರಲಿದೆ, ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡುವುದು ಒಳ್ಳೆಯದು, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.

ಮಿಥುನ ರಾಶಿ
ಈ ದಿನ ನೀವಾಡುವ ಮಾತಿನ ಕಡೆಗೆ ಗಮನಹರಿಸಬೇಕು, ನಿಮ್ಮ ಮಾತಿನಿಂದ ಪ್ರಮುಖ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಆರ್ಥಿಕವಾಗಿ ಕೂಡ ಈ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು. ಸಂದರ್ಭಕ್ಕೆ ತಕ್ಕಂತೆ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿದೆ, ಅತಿ ಹೆಚ್ಚು ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ, ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ಪ್ರಮುಖ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿದೆ, ಎಲ್ಲಾ ಕೆಲಸ ಜೊತೆಗೆ ಮಾಡಲು ಹೋಗಬೇಡಿ, ಸವಾಲುಗಳು ಬರಬಹುದು, ಆದರೆ ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸರಿಯಾಗಿ ಆಲೋಚನೆ ಮಾಡಿ ತೆಗೆದುಕೊಳ್ಳಿ, ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿ, ಆರ್ಥಿಕವಾಗಿ ಹೇಳುವುದಾದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ತುಲಾ ರಾಶಿ
ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ ಎಂದು ಸಲಹೆ ನೀಡಲಾಗುವುದು, ಸಂಬಂಧದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ದಿನ ನಿಮಗೆ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಕುಟುಂಬದ ಜೊತೆಗೆ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗುವುದು, ನಿಮ್ಮ ಕೆಲಸ ಕಾರ್ಯಗಳು ಆಲೋಚನೆಯಂತೆ ಪೂರ್ಣಗೊಳ್ಳಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಮಾಧುರ್ಯದಿಂದ ಕೂಡಿರಲಿದೆ.
ಧನು ರಾಶಿ
ಈ ದಿನ ಖುಷಿ ಖುಷಿ ಇರುತ್ತೀರಿ, ನಿಮ್ಮ ದಾರಿಯಲ್ಲಿದ್ದ ಅಡೆತಡೆಗಳು ದೂರಾಗಲಿದೆ, ಇದರಿಂದ ಖುಷಿಯಾಗಿರುತ್ತೀರಿ, ಸಂಬಂಧದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ, ಆರ್ಥಿಕ ಬದುಕು ಚೆನ್ನಾಗಿರಲಿದೆ.
ಮಕರ ರಾಶಿ
ನೀವು ಕಲ್ಪನೆಗಿಂತ ವಾಸ್ತವದ ಕಡೆಗೆ ಗಮನಹರಿಸುವುದು ಒಳ್ಳೆಯದು. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ಉ ಬಗೆಹರಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಕೂಡ ನೀವು ಜಾಗ್ರತೆವಹಿಸಬೇಕು.
ಕುಂಭ ರಾಶಿ
ನಿಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬೇಡಿ, ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ದೊರೆಯಲಿದೆ, ನಿಮ್ಮ ಹಾಗೂ ಕುಟುಂಬದ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಚೆನ್ನಾಗಿರಲಿದೆ.
ಮೀನ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಯಾವುದೇ ನಿರ್ಧಾರವಾದರೂ ಧೈರ್ಯದಿಂದ ತೆಗೆದುಕೊಳ್ಳಿ. ಕುಟುಂಬ ಜೀವನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
