Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ (ಫೆಬ್ರವರಿ3-9) ಏಳು ದಿನಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ಕೆಲಸ ಕಾರ್ಯಗಳಲ್ಲಿ ಕೆಲ ಸವಾಲುಗಳು ಇರಬಹುದು, ವೃತ್ತಿಸಂಬಂಧಿತ ಪ್ರಯಾಣ ಅನುಕೂಲಕರವಾಗಿರಲಿದೆ, ಕೋಪ ಮತ್ತು ಮಾನಸಿಕ ಒತ್ತಡ ನಿಯಂತ್ರಣದಲ್ಲಿಡುವುದು ಒಳ್ಳೆಯದು.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ವಾರ ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ದೊರೆಯಲಿದೆ, ನಿಮ್ಮ ಕೌಶಲ್ಯಕ್ಕೆ ಉತ್ತಮ ಮನ್ನಣೆ ದೊರೆಯಲಿದೆ. ಹೂಡಿಕೆಗೆ ಈ ಅವಧಿ ಉತ್ತಮವಾಗಿದೆ, ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ, ಈ ವಾರ ಆತ್ಮವಿಶ್ವಾಸ ಚೆನ್ನಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ವಾರ ನಿಮಗೆ ಮಿಶ್ರಫಲ, ವೃತ್ತಿ ಬದುಕಿನಲ್ಲಿ ಹೊಸ ಸವಾಲುಗಳು ಬರಬಹುದು, ನೀವು ಪ್ರತಿಕೂಲ ಸಂದರ್ಭವನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಸಂಗಾತಿಯೊಂದಿಗೆ ನಿಯತ್ತಿನಿಂದ ಇರಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಈ ವಾರ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷ, ಸಾಮರಸ್ಯ ಇರಲಿದೆ. ನಿಮ್ಮ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಈ ವಾರ ಹಣದ ತೊಂದರೆಯಿಲ್ಲ, ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ, ವ್ಯಾಪಾರಸ್ಥರು ಸ್ಪರ್ಧೆಯನ್ನು ಎದುರಿಸಬಹುದು. ಕುಟುಂಬ ಬದುಕು ಹಾಗೂ ವೃತ್ತಿ ಬದುಕಿನ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಿ. ನಿಮ್ಮ ಮಾತು ಹಾಗೂ ವರ್ತನೆಯ ಕಡೆಗೆ ಗಮನಹರಿಸಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಹಣದ ಹಾಗೂ ವೃತ್ತಿ ಸಂಬಂಧಿತ ಸಮಸ್ಯೆ ಕಾಡಬಹುದು, ಹೊಸ ಅವಕಾಶಕ್ಕೆ ತಾಳ್ಮೆಯಿಂದ ಕಾಯಿರಿ. ಸಂಗಾತಿಯ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು. ಕೆಲವೊಂದು ಅನಿರೀಕ್ಷಿತ ಸವಾಲುಗಳು ಬರಬಹುದು, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಅನಗ್ಯತ ವಿಷಯಗಳ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ವೃತ್ತಿ ಜೀವನದಲ್ಲಿ ಕೆಲ ಬದಲಾವಣೆ ಮಾಡಲು ಈ ಅವಧಿ ಅನುಕೂಲಕರವಾಗಿದೆ. ನೀವು ಕೆಲಸದ ಬದಲಾವಣೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೂ ಈ ಅವಧಿ ಅನುಕೂಲಕರವಾಗಿದೆ. ಯಾವುದೇ ನಿರ್ಧಾರವನ್ನು ಗೊಂದಲದಿಂದ ತೆಗೆದುಕೊಳ್ಳಬೇಡಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಈ ವಾರ ನಿಮಗೆ ಅನುಕೂಲಕರವಾಗಿದೆ, ವೃತ್ತಿ ಬದುಕು, ಕುಟುಂಬ ಬದುಕು ಎರಡೂ ಚೆನ್ನಾಗಿರಲಿದೆ,ಕೆಲಸದ ಜಾಗದಲ್ಲಿ ಕೆಲ ಧನಾತ್ಮಕ ಬದಲಾವಣೆ ಕಾಣಬಹುದು, ಅನಗ್ಯತ ವಿಷಯಗಳ ಚಿಂತೆ ಮಾಡಬೇಡಿ, ಹೊಸ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ಪ್ರಯತ್ನಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
