Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ!
ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳು ತಮ್ಮ ರಾಶಿಗಳನ್ನು ನಿಯಮಿತವಾಗಿ ಬದಲಾಯಿಸುತ್ತವೆ ಮತ್ತು ಈ ಸಮಯದಲ್ಲಿ ಇತರೆ ಗ್ರಹಗಳೊಂದಿಗೆ ಸಂಯೋಗವಾಗುವುದು ನೋಡಬಹುದು. ಇತರ ಗ್ರಹಗಳೊಂದಿಗೆ ಸಂಯೋಗ ಹೊಂದುವುದು ಹೊಸ ಯೋಗಗಳ ಸೃಷ್ಟಿಗೆ ಕಾರಣವಾಗಲಿದೆ. ಗುರು ಮತ್ತು ಚಂದ್ರ ಒಂದು ನಿರ್ದಿಷ್ಟ ರಾಶಿಯಲ್ಲಿ ಸಂಯೋಗವಾದಾಗ ಗಜಕೇಸರಿ ರಾಜಯೋಗ ರೂಪುಗೊಳ್ಳುತ್ತದೆ.
ಜ್ಯೋತಿಷ್ಯದಲ್ಲಿ ಗಜಕೇಸರಿ ರಾಜಯೋಗವನ್ನು ಬಹಳ ಶುಭ ಮತ್ತು ಫಲಪ್ರದ ರಾಜಯೋಗವೆಂದು ಪರಿಗಣಿಸಲಾಗುತ್ತದೆ. ಈ ಯೋಗದ ಪ್ರಭಾವವು ಸಂಪತ್ತು, ಗೌರವ, ಸ್ಥಾನಮಾನ, ಪ್ರತಿಷ್ಠೆ ಮತ್ತು ಪ್ರತಿಯೊಂದು ಪ್ರಯತ್ನದಲ್ಲೂ ಯಶಸ್ಸನ್ನು ತರುತ್ತದೆ. ಮಾರ್ಚ್ 26 ರಂದು ಗುರು ಮತ್ತು ಚಂದ್ರನ ಸಂಯೋಗವಾಗುವುದು ಈ ಯೋಗಕ್ಕೆ ಕಾರಣವಾಗುತ್ತಿದೆ.

ಗುರು ಪ್ರಸ್ತುತ ಮಿಥನ ರಾಶಿಯಲ್ಲಿದ್ದು, ಮಾರ್ಚ್ 26ರಂದು ಚಂದ್ರ ಕೂಡ ಈ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಮಿಥುನ ರಾಶಿಯಲ್ಲಿ ಗಜಕೇಸರಿ ಯೋಗಕ್ಕೆ ಕಾರಣವಾಗಲಿದೆ. ಈ ಅಪರೂಪದ ಯೋಗವು ಹಲವರಿಗೆ ಶುಭ ತರಲಿದೆ. ಎಲ್ಲಾ ಕಡೆಗಳಿಂದಲೂ ಈ ಸಂಯೋಗ ಶುಭದಾಯಕವಾಗುವುದು ನೋಡಬಹುದು. ಹಾಗಾದ್ರೆ ಈ ಗಜಕೇಸರಿ ಯೋಗದಿಂದ ಯಾರಿಗೆಲ್ಲಾ ಅನುಕೂಲಕರ ಎಂಬುದನ್ನು ತಿಳಿದುಕೊಳ್ಳೋಣ.
ಮಿಥುನ ರಾಶಿ
ಮಾರ್ಚ್ 26 ರಂದು ರೂಪುಗೊಳ್ಳುವ ಗಜಕೇಸರಿ ಯೋಗವು ಮಿಥುನ ರಾಶಿಯವರಿಗೆ ಬಹಳ ಶುಭ ಮತ್ತು ಫಲಪ್ರದವಾಗಿರುತ್ತದೆ. ಈ ಯೋಗದ ರಚನೆಯು ನಿಮ್ಮ ವೃತ್ತಿ, ವ್ಯವಹಾರ ಮತ್ತು ಆರ್ಥಿಕ ವಿಷಯಗಳಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಮಿಥುನ ರಾಶಿಯ ಲಗ್ನ ಮನೆಯಲ್ಲಿ ಈ ಯೋಗ ರೂಪುಗೊಳ್ಳಲಿದ್ದು, ಇದರಿಂದ ನಿಮ್ಮ ವೈಯಕ್ತಿಕ ಲಾಭಗಳು ಹೆಚ್ಚಾಗುವುದು ನೋಡಬಹುದು. ನಿಮ್ಮ ಸಂಪತ್ತು ಹೆಚ್ಚಾಗುವುದು ಹಾಗೆ ಆದಾಯ ಗಳಿಕೆಯ ಹೊಸ ಮೂಲವನ್ನು ನೀವು ಯಶಸ್ವಿಯಾಗಿ ಪಡೆಯುತ್ತೀರಿ. ಹೊಸ ಕೆಲಸದ ಜವಾಬ್ದಾರಿಗಳ ಕಾರಣದಿಂದಾಗಿ ನಿಮ್ಮಲ್ಲಿ ಸಂತಸವಿದೆ. ಹೊಸ ಉದ್ಯೋಗ ಹುಡುಕುವ ನಿಮಗೆ ಉತ್ತಮ ಅವಕಾಶ ಪಡೆಯಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಗಜಕೇಸರಿ ರಾಜಯೋಗವು ತುಂಬಾ ಶುಭವಾಗುತ್ತಿದೆ. ಈ ಯೋಗವು ನಿಮ್ಮ ರಾಶಿಯ ಹನ್ನೊಂದನೇ ಮನೆಯಲ್ಲಿ ರಚನೆಯಾಗುತ್ತಿದೆ. ಇದು ನಿಮ್ಮ ಬಹು ಸಮಯದ ಆಸೆಗಳನ್ನು ಈಡೇರಿಸಿಕೊಳ್ಳಲು ಶುಭ ಸಮಯ ಆಗಿರಲಿದೆ. ಎಲ್ಲಾದರು ಸಿಲುಕಿರುವ ನಿಮ್ಮ ಹಣ ಕೈ ಸೇರಲಿದೆ. ಹಾಗೆ ದೇವಾಲಯ ಭೇಟಿಯ ಸಾಧ್ಯತೆ ಇದೆ. ಶುಭ ಕಾರ್ಯ ಸಂಬಂಧತ ಪ್ರಯಾಣಗಳು ಹೆಚ್ಚಾಲಿದೆ. ನಿಮ್ಮ ಸಾಲದ ಪ್ರಮಾಣ ಇಳಿಕೆಯಾಗುವುದು ನೋಡಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ. ಹಠಾತ್ ಆರ್ಥಿಕ ಲಾಭದ ಅವಕಾಶಗಳು ಹೆಚ್ಚಾಗುತ್ತವೆ. ನಿರುದ್ಯೋಗಿಗಳಿಗೆ ಈ ಸಮಯದಲ್ಲಿ ಉತ್ತಮ ಅವಕಾಶಗಳು ಸಿಗಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಗಜಕೇಸರಿ ರಾಜಯೋಗವು ಅನುಕೂಲಕರ ದಿನಗಳ ತರಲಿದೆ. ನಿಮ್ಮ 10ನೇ ಮನೆಯಲ್ಲಿ ಈ ಯೋಗ ರೂಪುಗೊಳ್ಳುವುದು ವೃತ್ತಿ ಹಾಗೂ ವ್ಯವಹಾರದಲ್ಲಿ ಲಾಭ ತರಲಿದೆ. ನಿಮ್ಮ ವ್ಯಾಪಾರ ಸಂಬಂಧಿತ ಸಂಕಷ್ಟಗಳು ದೂರಾಗಲಿದೆ. ದೀರ್ಘಕಾಲದಿಂದ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಬಹುದು. ನಿಮ್ಮ ಕುಟುಂಬ ಮತ್ತು ಸಮಾಜದಲ್ಲಿ ನೀವು ಸ್ಥಾನಮಾನ ಮತ್ತು ಪ್ರತಿಷ್ಠೆಯನ್ನು ಪಡೆಯುತ್ತೀರಿ. ವಾಹನ ಖರೀದಿಯ ಆಲೋಚನೆಯಲ್ಲಿದ್ದ ಮಂದಿಗೆ ಈ ಸಮಯದಲ್ಲಿ ಹಣ ಒಗ್ಗೂಡಲಿದೆ. ಮನೆ ನಿರ್ಮಾಣ ಸಂಬಂಧಿತ ಅಡ್ಡಿಗಳು ನಿವಾರಣೆಯಾಗುವ ಸಮಯವಿದು. ದಾಂಪತ್ಯದಲ್ಲಿ ಸಂತಸ ನೋಡುವಿರಿ.
(ಹಕ್ಕುತ್ಯಾಗ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ಅದು ವಿಶ್ವಾಸಾರ್ಹವಾಗಿರುತ್ತದೆ ಎಂದು ಖಾತರಿಪಡಿಸುವುದಿಲ್ಲ. ಕನ್ನಡ ಬೋಲ್ಡ್ ಸ್ಕೈ ಈ ಲೇಖನಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೃಢೀಕರಿಸಿಲ್ಲ. ಮತ್ತು ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ)



Click it and Unblock the Notifications