Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
2025ರ ಮಿಥುನ ರಾಶಿಯ ರಾಶಿಫಲ: ಹೊಸ ವರ್ಷ ವೃತ್ತಿ, ಆರ್ಥಿಕ ಜೀವನ ಹೀಗೆ ಎಲ್ಲಾ ರೀತಿಯಲ್ಲೂ ಹೇಗಿರಲಿದೆ?
2025ರ ವರ್ಷ ಭವಿಷ್ಯ ಪ್ರಕಾರ ಮಿಥುನ ರಾಶಿಯವರ ರಾಶಿಫಲ ನೀಡಲಾಗಿದೆ. ಇದರ ಪ್ರಕಾರ ಹೊಸ ವರ್ಷ ಉದ್ಯೋಗ, ಹಣಕಾಸು, ಕುಟುಂಬ ಜೀವನ, ಆರೋಗ್ಯ ಇವೆಲ್ಲಾ ಹೇಗಿರಲಿದೆ ಎಂದು ನೋಡೋಣ:
ವೃತ್ತಿ ಜೀವನ
ಮಿಥುನ ರಾಶಿಯವರ ವರ್ಷ ರಾಶಿಫಲ ನೋಡುವುದಾದರೆ ವೃತ್ತಿ ಬದುಕಿನಲ್ಲಿ ಮಿಶ್ರಫಲಿತಾಂಶ.ಮೇ ತಿಂಗಳವರೆಗೆ ದೊಡ್ಡ ತೊಂದರೆಗಳಿರಲ್ಲ, ಗುರುವಿನ ಫಲ ನಿಮಗೆ ಚೆನ್ನಾಗಿರಲಿದೆ. ಅದಾದ ಬಳಿಕ ಕೆಲ ಸವಾಲುಗಳು ಎದುರಾಗಬಹುದು. ಇರುವ ಕೆಲಸದಲ್ಲಿ ಅತೃಪ್ತಿ ಉಂಟಾಗಬಹುದು, ನೀವು ಕೆಲಸದ ಬದಲಾವಣೆಯ ಬಗ್ಗೆ ಕೂಡ ಆಲೋಚಿಸಬಹುದು. ಕೆಲಸದ ಬದಲಾವಣೆಗೆ ಈ ವರ್ಷ ನಿಮಗೆ ಅನುಕೂಲಕರವಾಗಿದೆ. ನೀವು ನಿಮ್ಮ ಕೌಶಲ್ಯ ಅಭಿವೃದ್ಧಿ ಪಡಿಸುವುದರ ಬಗ್ಗೆ ಗಮನಹರಿಸಬೇಕು. ನಿಮ್ಮ ಬುದ್ಧಿವಂತಿಕೆಯಿಂದ ಮತ್ತಷ್ಟು ಅಭಿವೃದ್ಧಿ ಪಡಿಸಿ. ಕೋರ್ಸ್ ಮುಗಿದು ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿರಲಿದೆ.

ವ್ಯಾಪಾರಿಗಳಿಗೆ ಈ ವರ್ಷ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತಾರೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಉತ್ತಮ ಫಲಿತಾಂಶ ಪಡೆಯಲಿದೆ. ಮಾರ್ಚ್ ನಂತರ ಸ್ವಲ್ಪ ಸವಾಲಿನಿಂದ ಕೂಡಿರಲಿದೆ. ನಿಮ್ಮ ಕೆಲಸವು ಸ್ವಲ್ಪ ವಿಳಂಬವಾದರೂ ಉತ್ತಮ ಫಲಿತಾಂಶ ಪಡೆಯಲಿದೆ. ವ್ಯಾಪಾರಿಗಳಿಗೆ ಈ ಅವಧಿ ಸರಾಸರಿಯಾಗಿರಲಿದೆ.
ಆರ್ಥಿಕ ಜೀವನ
ಆರ್ಥಿಕವಾಗಿ ನೀವು 2025ರಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು, ಹೆಚ್ಚು ಹಣ ಖರ್ಚು ಮಾಡಲು ಹೋಗಬೇಡಿ, ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಹೋಗಬೇಡಿ. ಮಧ್ಯ ವರ್ಷದವರೆಗೆ ನೀವು ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಮಧ್ಯ ವರ್ಷದವರೆಗೆ ಹಣವನ್ನು ನೋಡಿಕೊಂಡು ಹೂಡಿಕೆ ಮಾಡಬೇಕು, ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಯತ್ನಿಸಬೇಕು.ನೀವು ಬಜೆಟ್ ಪ್ರಕಾರ ಖರ್ಚು ಮಾಡಬೇಕು. ಉಳಿತಾಯದ ಕಡೆಗೆ ಗಮನಹರಿಸಬೇಕು.
ಪ್ರೀತಿ, ಕುಟುಂಬ ಜೀವನ
ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿರಲಿದೆ , ಪ್ರೇಮಿಗಳು ಮದುವೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾದರೆ ಈ ವರ್ಷ ನಿಮಗೆ ಅನುಕೂಲಕರವಾಗಿರಲಿದೆ. ಗುರು ಬಲ ಚೆನ್ನಾಗಿದೆ, ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವನ್ನೂ ಸರಿಪಡಿಸಲು ಪ್ರಯತ್ನಿಸಬೇಕು. ಸಂಬಂಧವನ್ನು ಕಾಪಾಡಿಕೊಳ್ಳಲು ಪ್ರಯತ್ನ ಹಾಕಿ ಸಂಬಂಧ ಉತ್ತಮವಾಗಿರಲಿದೆ.
ಕುಟುಂಬದ ಕಡೆಗೆ ಗಮನಹರಿಸಬೇಕು, ಕುಟುಂಬದ ಜವಾಬ್ದಾರಿಗಳನ್ನು ಚೆನ್ನಾಗಿ ನಿಭಾಯಿಸಿಕೊಂಡು ಹೋಗಲು ಪ್ರಯತ್ನಿಸಬೇಕು. ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದ ಬೆಂಬಲ ಸಿಗಲಿದೆ, ಮನೆಯವರ ಮನಸ್ಸು ನೋಯಿಸದಂತೆ ವರ್ತಿಸಲು ಪ್ರಯತ್ನಿಸಿ.
ಗಾಡಿ ಯೋಗ
ಹೊಸ ವರ್ಷದ ಗಾಡಿ ಖರೀದಿ ಮಾಡುವ ಆಲೋಚನೆಯಲ್ಲಿದ್ದರೆ ಪ್ರಾರಂಭದಲ್ಲಿಯೇ ಖರೀದಿಸುವುದು ಸೂಕ್ತ, ಹಳೆಯ ವಾಹದನ ಬದಲಿಗೆ ಹೊಸ ಗಾಡಿ ಖರೀದಿ ಒಳ್ಳೆಯದು. ಆಸ್ತಿ ಅಅಥವಾ ಫ್ಲ್ಯಾಟ್ ಸರಿಯಾದ ದಾಖಲೆ ಇಲ್ಲದಿದ್ದರೆ ಖರೀದಿಸಲೇಬೇಡಿ.
ಆರೋಗ್ಯ
ಆರೋಗ್ಯದ ಕಡೆಗೆ ಗಮನಹರಿಸಿ. ಏನಾದರೂ ಆರೋಗ್ಯ ಸಮಸ್ಯೆ ಬಂದರೆ ನಿಯಮಿತ ಔಷಧಿ ತೆಗೆದುಕೊಳ್ಳಬೇಕು,ಆರೋಗ್ಯಕ್ಕಾಗಿ ಆರೋಗ್ಯಕರ ಜೀವನಶೈಲಿ ಕಡೆಗೆ ಗಮನಹರಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications