Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗುರು ಸಂಚಾರ 2024: ಈ 7 ರಾಶಿಗಳಿಗೆ 12 ತಿಂಗಳು ಗುರು ಅದೃಷ್ಟದ ಸ್ಥಾನದಲ್ಲಿದೆ
ಗುರು 12 ತಿಂಗಳಿಗೊಮ್ಮೆ ರಾಶಿ ಬದಲಾವಣೆ ಮಾಡುತ್ತದೆ. ಈ ಮೇ 1ಕ್ಕೆ ಗುರು ವೃಷಭ ರಾಶಿಗೆ ಸಂಚರಿಸಲಿದೆ, ಈ ಸಂಚಾರ ಈ ರಾಶಿಗಳಿಗೆ ಅದೃಷ್ಟಕರವಾಗಿದೆ ನೋಡಿ:
ಮೇಷ ರಾಶಿ
ಗುರು ಸಂಚಾರ ನಿಮಗೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಸಾಲ ತೀರಿಸಲು ಸಾದ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಇನ್ನು ಅವಾಹಿತರು ಮದುವೆಗಾಗಿ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ವಿವಾಹ ಯೋಗ ಕೂಡಿ ಬರಲಿದೆ. ಗುರು ಹಿಮ್ಮುಖ ಸ್ಥಿತಿಯಲ್ಲಿದ್ದಾಗ ಸ್ವಲ್ಪ ತೊಂದರೆಯಾಗುವುದು, ಆದರೆ ನಂತರ ಎಲ್ಲವೂ ಸರಿಯಾಗಲಿದೆ.

ಮಿಥುನ ರಾಶಿ
ಈ ವರ್ಷ ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಲಿದೆ. ಮನೆಯ ಅಗ್ಯತಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಉದ್ಯೋಗದಲ್ಲಿ ಇರುವಂಥ ಸವಾಲುಗಳು ದೂರಾಗಿ ನಿಮಗೆ ಉತ್ತಮ ಅವಕಾಶಗಳು ಸಿಗಲಿದೆ. ಆರ್ಥಿಕ ಜೀವನ ಚೆನ್ನಾಗಿರಲಿದೆ. ಇನ್ನು ವಿದೇಶಕ್ಕೆ ಹೋಗಲು ಬಯಸುತ್ತಿದ್ದರೆ ಈ ಗುರು ಸಂಚಾರದ ಬಳಿಕ ಉತ್ತಮ ಅವಕಾಶ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಗುರು ಹಿಮ್ಮುಖ ಚಲನೆಯಲ್ಲಿ ಇರುವಾಗ ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಗುರು ಸಂಚಾರ ಕರ್ಕ ರಾಶಿಯವರಿಗೆ ಅನುಕೂಲಕರವಾಗಿದೆ. ಉದ್ಯೋಗಿಗಳ ಸಂಬಳ ಹೆಚ್ಚಾಗಲಿದೆ. ವ್ಯಾಪಾರಿಗಳ ವ್ಯವಹಾರದಲ್ಲಿ ಬೆಳವಣಿಗೆ ಕಂಡು ಬರಲಿದೆ. ನೀವು ವ್ಯಾಪಾರವನ್ನು ವಿಸ್ತರಿಸಬಹುದು. ಈ ಗುರು ಸಂಚಾರ ಪ್ರೇಮಿಗಳಿಗೆ ಅನುಕೂಲಕರವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮಿಬ್ಬರ ನಡುವೆ ಬಾಂಧವ್ಯ ಗಟ್ಟಿಯಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ಗುರು ಸಂಕ್ರಮಣದಿಂದಾಗಿ ಸಿಂಹ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ. ಗುರು ವೃಷಭ ರಾಶಿಗೆ ಸಂಚರಿಸಿದಾಗ ಕೆಲಸದಲ್ಲಿ ಕೆಲ ಬದಲಾವಣೆಯಾಗಲಿದೆ. ಇನ್ನು ನೀವು ಬೇರೆ ಕಡೆಗೆ ಕೆಲಸಕ್ಕೆ ಶ್ರಮಿಸುತ್ತಿದ್ದರೆ ಈ ಸಮಯ ತುಂಬಾ ಒಳ್ಳೆಯದಿದೆ. ನಿಮ್ಮ ಪ್ರಯತ್ನಕ್ಕೆ ಒಳ್ಳೆಯ ಫಲ ಸಿಗಲಿದೆ. ಇನ್ನು ಪಿತ್ರಾರ್ಜಿತ ಆಸ್ತಿಯಿಂದ ಲಾಭ ಗಳಿಸುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಕುಟುಂಬ ಜೀವನ ಸುಖಮಯವಾಗಿರಲಿದೆ.
ವೃಶ್ಚಿಕ ರಾಶಿ
ಈ ಗುರು ಸಂಚಾರ ನಿಮಗೆ ಅದ್ಭುತವಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಉದ್ಯೋಗದಲ್ಲಿ, ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ, ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರಲ್ಲಿ ಹೊಂದಾಣಿಕೆ ಇರಲಿದೆ. ಇನ್ನು ಆರ್ಥಿಕವಾಗಿ ಉತ್ತಮವಾಗಿರುವುದರಿಂದ ನೀವು ತುಂಬಾ ಸಮಯದಿಂದ ಬಯಸಿದ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುವುದು. ಅವಾಹಿತರಿಗೆ ಗುರುಬಲ ಕೂಡಿ ಬರಲಿದೆ.
ಮಕರ ರಾಶಿ
ಗುರು ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಗುರು ಪಂಚಮ ಸ್ಥಾನದಲ್ಲಿ ಇದ್ದಾಗ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತೀರಿ. ಈ ಸಂಚಾರ ಕುಟುಂಬ ಜೀವನಕ್ಕೆ ಅನುಕೂಲಕರವಾಗಿದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಇನ್ನು ವಿದೇಶಕ್ಕೆ ಓದಲು ಅಥವಾ ಓದಲು ಹೋಗಬಯಸುವವರ ಆಸೆ ಈಡೇರಲಿದೆ. ನೀವು ಹೊಸ ಕೆಲಸಕ್ಕೆ ಪ್ರಯತ್ನ ಮಾಡಿದರೆ ಅದರಲ್ಲಿ ಯಶಸ್ಸು ಪಡೆಯುತ್ತೀರಿ. ಆರ್ಥಿಕ ಜೀವನ ಕೂಡ ತುಂಬಾ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ಮನೆಯ ಸೌಕರ್ಯ ಹೆಚ್ಚಾಗುವುದು. ಆಸ್ತಿ ವ್ಯವಹಾರ ಲಾಭ ತರಲಿದೆ. ಇನ್ನು ಪೂರ್ವಜರ ಆಸ್ತಿ ಇದ್ದರೆ ಅದರಿಂದ ಉತ್ತಮ ಲಾಭ ಪಡೆಯುತ್ತೀರಿ. ವೈದಿಕ ಶಾಸ್ತ್ರದಲ್ಲಿ ನಾಲ್ಕನೇ ಮನೆಯನ್ನು ಮನೆ, ವಾಹನ, ತಾಯಿ, ಆಸ್ತಿ ಸಂತೋಷದ ಮನೆಯೆಂದು ಪರಿಗಣಿಸಲಾಗಿದೆ. ಹಾಗಾಗಿ ಈ ಅವಧಿಯಲ್ಲಿ ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications