Latest Updates
-
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್!
ವೃಷಭ ರಾಶಿಗೆ ಗುರು ಸಂಚಾರ: ಗುರು ಕೃಪೆಯಿಂದ ಈ ರಾಶಿಯವರ ಆದಾಯ ಹೆಚ್ಚಾಗಲಿದೆ
ದೇವ ಗುರುವು ಒಂದು ವರ್ಷ ಒಂದು ತಿಂಗಳ ಬಳಿಕ ತನ್ನ ರಾಶಿ ಬದಲಾವಣೆ ಮಾಡಲಿದೆ. ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹವು ಅದರದ್ದೇ ಆದ ರೀತಿಯಲ್ಲಿ ಪ್ರಭಾವ ಬೀರುವುದು ಎಂದು ಹೇಳಲಾಗುವುದು. ಇಷ್ಟು ದಿನ ಗುರುವು ಮೇಷ ರಾಶಿಯಲ್ಲಿತ್ತು, ಇನ್ನು ಮೇ.1ರಿಂದ ವೃಷಭ ರಾಶಿಯಲ್ಲಿ ಇರಲಿದೆ. ಗುರುವು ವೃಷಭ ರಾಶಿಗೆ ಸಂಚರಿಸಿದಾಗ ಅದರ ಪ್ರಭಾವ 12 ರಾಶಿಗಳ ಮೇಲೆ ಇರಲಿದೆ. ಕೆಲವು ರಾಶಿಯವರಿಗೆ ಅದೃಷ್ಟದ ಸಮಯವಾಗಲಿದೆ.
ಗುರು ನಮ್ಮ ರಾಶಿಯಲ್ಲಿ ಬಲವಾಗಿದ್ದರೆ ನಮ್ಮ ಆರ್ಥಿಕ ಸ್ಥಿತಿಯಲ್ಲಿ ತುಂಬಾನೇ ಒಳ್ಳೆಯ ಬೆಳವಣಿಗೆಯನ್ನು ಕಾಣುತ್ತೇವೆ, ಗುರುವಿನ ಕೃಪೆಯಿಂದ ಮುಟ್ಟಿದ್ದೆಲ್ಲಾ ಚಿನ್ನ ಎಂಬಂತೆ ನಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಗುರುವು ವೃಷಭ ರಾಶಿಗೆ ಸಂಚರಿಸಿದಾಗ ದೇವ ಗುರುವಿನ ಕೃಪೆಯಿಂದ ಈ ಮೂರು ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ.

ಮೇಷ ರಾಶಿ
ಗುರುವು ಸುಮಾರು 13 ತಿಂಗಳ ಕಾಲ ಮೇಷ ರಾಶಿಯಲ್ಲಿರಲಿದೆ, ಅದಾದ ಬಳಿಕ ಮೇಷ ರಾಶಿಯನ್ನು ಬಿಟ್ಟು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಹೀಗಾಗಿ ಗುರು ನಿಮ್ಮ ಎರಡನೇ ಮನೆಯಲ್ಲಿ ಇರಲಿದೆ. ಗುರುವಿನ ಈ ಸ್ಥಾನ ಮೇಷ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಅಪೂರ್ಣವಾಗಿರುವ ಕೆಲಸಗಳು ಪೂರ್ಣವಾಗಲಿದೆ. ಈ ಅವಧಿಯಲ್ಲಿ ಬಾಕಿಯಿರುವ ಕೆಲಸಗಳು ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಸಂಪತ್ತು ಹೆಚ್ಚಾಗುವ ಲಕ್ಷಣಗಳಿವೆ. ಈ ಅವಧಿಯಲ್ಲಿ ನೀವು ಉತ್ತಮ ಅವಕಾಶಗಳನ್ನು ಪಡೆಯುವಿರಿ, ಈ ಅವಧಿಯಲ್ಲಿ ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರುವುದರಿಂದ ಆಸ್ತಿ ಖರೀದಿ, ಮನೆ ಕಟ್ಟುವುದು ಈ ಬಗೆಯ ಆಸೆ ಈಡೇರುವುದು. ಆದ್ದರಿಂದ ಈ ಅವಧಿ ಮೇಷ ರಾಶಿಯವರಿಗೆ ತುಂಬಾ ಒಳ್ಳೆಯದು.
ವೃಷಭ ರಾಶಿ
ದೇವ ಗುರು ನಿಮ್ಮ ರಾಶಿಗೆ ಸಂಚರಿಸಲಿದೆ, ಗುರು ನಿಮ್ಮದೇ ರಾಶಿಯಲ್ಲಿರುವ ಈ ಅವಧಿ ನಿಮಗೆ ತುಂಬಾನೇ ಪ್ರಯೋಜನಕಾರಿ, ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವಿರಿ, ಇನ್ನು ಕೆಲಸ ಬದಲಾವಣೆ ಮಾಡಲು ಬಯಸುತ್ತಿದ್ದರೆ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ. ಈ ಸಮಯದಲ್ಲಿ ಹಣಕಾಸಿನ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರು ವ್ಯಾಪಾರ ವೃದ್ಧಿಯಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ವಿವಾಹ ಪ್ರಾಯದವರಿಗೆ ಉತ್ತಮ ಸಂಬಂಧ ಬರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ .
ಕರ್ಕ ರಾಶಿ
ಮೇ 01 ರಂದು, ಗುರುವು ವೃಷಭ ರಾಶಿಗೆ ಸಂಚರಿಸಿದಾಗ ಕರ್ಕ ರಾಶಿಯ ಹನ್ನೊಂದನೇ ಮನೆಯಲ್ಲಿ ಇರಲಿದೆ. ಗುರು ವೃಷಭ ರಾಶಿಯಲ್ಲಿರುವ ಅವಧಿಯಲ್ಲಿ ನೀವು ವಿಶೇಷ ಪ್ರಯೋಜನ ಪಡೆಯುತ್ತೀರಿ. ನೀವು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ, ನಿಮ್ಮ ಗೌರವ ಹೆಚ್ಚಾಗುತ್ತದೆ. ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯುವಿರಿ. ಉದ್ಯೋಗಿಗಳು ಬಡ್ತಿ ಪಡೆಯುವಿರಿ, ವ್ಯಾಪಾರಿಗಳು ಮತ್ತಷ್ಟು ಲಾಭ ಗಳಿಸಲು ಸಾಧ್ಯವಾಗುವುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರಲಿದೆ. ಆದಾಯದಲ್ಲಿ ಉತ್ತಮ ಏರಿಕೆ ಕಂಡುಬರುವುದರಿಂದ ಮನೆಯ ಸೌಕರ್ಯ ಹೆಚ್ಚಾಗುವುದು. ನೀವು ಕುಟುಂಬ ಸದಸ್ಯರಿಂದ ಉತ್ತಮ ಬೆಂಬಲವನ್ನು ಪಡೆಯುತ್ತೀರಿ.
ಗುರುಬ್ರಹ್ಮಾ ಗುರುವಿಷ್ಣು ಗುರುದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಂ ಬ್ರಹ್ಮ ತಸ್ಮೈ ಶ್ರೀಗುರುವೇ ನಮಃ.
ಗುರು ಶಾಂತಿ ಮಂತ್ರ
ಓಂ ದೇವಾನಾಂ ಚ ಋಷಿಣಾಂ ಚ ಗುರುಂ ಕಾಂಚನ ಸನ್ನಿಭಂ, ಬುದ್ಧಿ ಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications