Latest Updates
-
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ!
ಗುರುದೆಸೆ ಈ 5 ರಾಶಿಗಳಲ್ಲಿ ಬಲವಾಗಿರುವುದರಿಂದ ಯಶಸ್ಸು, ಧನ ಪ್ರಾಪ್ತಿ
ಗುರು ಅದೃಷ್ಟದ ಗ್ರಹವಾಗಿದೆ, ಗುರು ನಮ್ಮ ರಾಶಿಯಲ್ಲಿ ಅದೃಷ್ಟದ ಸ್ಥಾನದಲ್ಲಿದ್ದರೆ ಗುರು ದೆಸೆಯಿಂದ ಎಲ್ಲವೂ ಒಳ್ಳೆಯದಾಗಲಿದೆ. ಗುರು ಮಾರ್ಷ್ 29ಕ್ಕೆ ರಾಶಿ ಬದಲಾವಣೆ ಮಾಡಲಿದೆ. ಗುರು ರಾಶಿ ಬದಲಾವಣೆ ಮಾಡಿದರೆ ಒಂದು ವರ್ಷದರೆಗೆ ಅದೇ ರಾಶಿಯಲ್ಲಿ ಇರಲಿದೆ. ಏಪ್ರಿಲ್ 10ಕ್ಕೆ ನಕ್ಷತ್ರ ಬದಲಾವಣೆ ಕೂಡ ಬರಲಿದೆ. ಗುರು ಮೃಗಶಿರ ನಕ್ಷತ್ರಕ್ಕೆ ಸಂಚರಿಸಲಿದೆ. ಗುರುವಿನ ಈ ಸಂಚಾರ ಕೆಲ ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಆ ರಾಶಿಗಳೆಂದರೆ:

ಮೇಷ ರಾಶಿ
ಮೇಷ ರಾಶಿಯವರಿಗೆ ಈ ಸಂಚಾರ ತುಂಬಾನೇ ಅನುಕೂಲಕರವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಹೂಡಿಕೆ ದೃಷ್ಟಿಯಿಂದ ನಿಮಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಆರ್ಥಿಕ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹಣದ ಉಳಿತಾಯ ಸಾಧ್ಯವಾಗಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುತ್ತೀರಿ, ಕುಟುಂಬ ಜೀವನ ತುಂಬಾನೇ ಚೆನ್ನಾಗಿರಲಿದೆ. ಇನ್ನು ಮದುವೆ ಸಂಬಂಧ ಹುಡುಕುತ್ತಿದ್ದರೆ ಗುರುಬಲ ಚೆನ್ನಾಗಿರುವುದರಿಂದ ಮದುವೆಯ ಯೋಗ ಕೂಡಿ ಬರಲಿದೆ.
ಹಣಕ್ಕೆ ಸಂಬಂಧಿಸಿದಂತೆ ನಿಮಗೆ ತುಂಬಾ ಚೆನ್ನಾಗಿರಲಿದೆ. ಕೆಲಸ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ, ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ನೀವು ಬಯಸಿದ ಕೆಲಸ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಬಡ್ತಿಯ ನಿರೀಕ್ಷೆಯಲ್ಲಿ ಇರುವವರಿಗೆ ಬಡ್ತಿ ಸಿಗಲಿದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ಸಮಯ ತುಂಬಾನೇ ಚೆನ್ನಾಗಿರಲಿದೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ನೀವು ಒಳ್ಳೆಯ ಲಾಭ ಪಡೆಯಲು ಸಾಧ್ಯವಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಕೆಲಸದ ಹುಡುಕಾಟದಲ್ಲಿದ್ದರೆ ಬಯಸಿದ ಕೆಲಸ ಪಡೆಯುವಲ್ಲಿ ನೀವು ಯಶಸ್ವಿಯಾಗುತ್ತೀರಿ, ದಾಂಪತ್ಯ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಬಹುದು. ಪ್ರೇಮಿಗಳು ಮದುವೆಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ.
ಸಿಂಹ ರಾಶಿ
ಗುರುವಿನ ಸಂಚಾರ ಸಿಂಹ ರಾಶಿಯವವರಿಗೆ ಅನುಕೂಲಕರವಾಗಿರಲಿದೆ, ಸರ್ಕಾರಿ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿರುವವರು ಈ ಅವಧಿಯಲ್ಲಿ ಕೆಲಸವನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ, ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಬಲಗೊಳ್ಳಲಿದೆ. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುವಲ್ಲಿ ನೀವು ಯಶಸ್ವಿಯಾಗುತ್ತೀರಿ.
ಇನ್ನು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೂ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಮನೆ ಖರೀದಿ ಮಾಡಬೇಕು ಅಥವಾ ಆಸ್ತಿ, ಗಾಡಿ ಖರೀದಿ ಮಾಡಬೇಕೆಂದು ಬಯಸುತ್ತಿರುವವರು ಅದಕ್ಕೆ ಸಂಬಂಧಿಸಿದಂತೆ ಪ್ರಯತ್ನ ಮಾಡಿದರೆ ನಿಮ್ಮ ಆಸೆ ಈಡೇರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದಲೂ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಗುರು ನಿಮ್ಮ ರಾಶಿಯಲ್ಲಿ ಬಲವಾದ ಸ್ಥಾನದಲ್ಲಿರುವಾಗ ಸವಾಲುಗಳನ್ನು ಸುಲಭದಲ್ಲಿ ಜಯಿಸಲು ಸಾಧ್ಯವಾಗಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಗುರು ಅನುಕೂಲಕರ ಸ್ಥಾನದಲ್ಲಿರಲಿದೆ. ನಿಮ್ಮ ಕನಸು ನನಸಾಗಲಿದೆ. ಆರ್ಥಿಕ ದೃಷ್ಟಿಯಿಂದ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಹೂಡಿಕೆಯಿಂದ ಲಾಭ ಗಳಿಸಲು ಸಾಧ್ಯವಾಗಲಿದೆ. ಹಣದ ಉಳಿತಾಯ ಮಾಡಲು ಸಾಧ್ಯವಾಗಲಿದೆ. ಗುರು ನಿಮ್ಮ ವೃತ್ತಿ ಜೀವನ ಮಾತ್ರವಲ್ಲ, ವೈಯಕ್ತಿಕ ಜೀವನದ ದೃಷ್ಟಿಯಿಂದಲೂ ಉತ್ತಮವಾಗಿದೆ. ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಸಾಧ್ನೆ ಮಾಡಲು ಸಾಧ್ಯವಾಗುವುದು. ಹೂಡಿಕೆ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಮಕ್ಕಳ ಅಪೇಕ್ಷಿತ ದಂಪತಿಗೆ ಸಂತಾನ ಭಾಗ್ಯವಿದೆ, ಮಕ್ಕಳಿರುವವರು ಮಕ್ಕಳ ಸಾಧನೆ ನೋಡಿ ಹೆಮ್ಮೆ ಪಡುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











