Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಆಗಸ್ಟ್ 9ರಿಂದ ಗುರುವಿನ ವಕ್ರೀಯ ಚಲನೆ: ಆದರೂ ಈ 3 ರಾಶಿಗಳಿಗೆ ಅದೃಷ್ಟಕ್ಕೆ ಯಾವುದೇ ಕೊರತೆಯಿಲ್ಲ
ಗುರು ಈ ಮೇ 1ಕ್ಕೆ ವೃಷಭ ರಾಶಿಗೆ ಸಂಚರಿಸಿದೆ. ಗುರು ವರ್ಷಕ್ಕೆ ಒಂದು ಬಾರಿಯಷ್ಟೇ ರಾಶಿ ಬದಲಾವಣೆ ಮಾಡುವುದು. ಈ ಮೇ 1ಕ್ಕೆ ವೃಷಭ ರಾಶಿಗೆ ಸಂಚರಿಸಿದ ಗುರು, ಮೇ 14, 2025ಕ್ಕೆ ಮಿಥುನ ರಾಶಿಗೆ ಸಂಚರಿಸುವುದು, ಆದರೆ ಈ ಆಗಸ್ಟ್ 9ಕ್ಕೆ ಗುರು ವೃಷಭ ರಾಶಿಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ.
ಯಾವುದೇ ಗ್ರಹದ ಹಿಮ್ಮಖ ಚಲನೆಯನ್ನು ಒಳ್ಳೆಯದು ಎಂದು ಪರಿಗಣಿಸುವುದಿಲ್ಲ, ಆದರೆ ಈ ಹಿಮ್ಮುಖ ಚಲನೆ ಒಳ್ಳೆಯ ಪ್ರಭಾವ ಬೀರಲಿದೆ. ಗುರು ಹಿಮ್ಮುಖ ಚಲನೆಯಲ್ಲಿರುವಾಗಲೂ ಈ ರಾಶಿಯವರಿಗೆ ಅದೃಷ್ಟಕ್ಕೆ ಯಾವುದೇ ತೊಂದರೆಯಿಲ್ಲ.

ಮಿಥುನ ರಾಶಿ
ಗುರುವು ಹಿಮ್ಮುಖ ಚಲನೆಯಲ್ಲಿರುವ ಈ ಅವಧಿ ಮಿಥುನ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಆದ್ದರಿಂದ ಅಪೂರ್ಣವಾಗಿದ್ದ ಕೆಲಸವೂ ಪೂರ್ಣಗೊಳ್ಳಲಿದೆ, ಈ ಅವಧಿಯಲ್ಲಿ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳಿಗೂ ಈ ಸಮಯ ಅನುಕೂಲಕರವಾಗಿದೆ. ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಈ ಸಮಯದಲ್ಲಿ ಗುರು ಬಲ ಇರುವುದರಿಂದ ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ 7ನೇ ಮನೆಯಲ್ಲಿ ಗುರು ಹಿಮ್ಮುಖ ಚಲನೆ ಮಾಡುತ್ತದೆ. ಈ ಅವಧಿಯಲ್ಲಿ ಪ್ರಮುಖ ಅಡೆತಡೆಗಳು ದೂರಾಗಲಿದೆ. ಉದ್ಯೋಗಿಗಳಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ನೀವು ಯಶಸ್ಸು ಗಳಿಸಲುಸಾಧ್ಯವಾಗುವುದು. ಇನ್ನು ಕಾನೂನು ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದರೆ ಈ ಅವಧಿಯಲ್ಲಿ ನೀವು ಅದರಿಂದ ಹೊರಬರಲು ಸಾಧ್ಯವಾಗುವುದು.
ವೃತ್ತಿ ಬದುಕಿನಲ್ಲಿ ಬೆಳವಣಿಗೆಯನ್ನು ಕಾಣುತ್ತೀರಿ, ಕೆಲಸದಲ್ಲಿ ಅಡೆತಡೆ ದೂರಾಗಲಿದೆ, ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ಅವಧಿ ಪ್ರಯೊಜನಕಾರಿಯಾಗಿದೆ, ಕೆಲಸದ ನಿಮಿತ್ತ ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೂ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ, ವೈವಾಹಿಕ
ಬಾಂಧವ್ಯ ಉತ್ತಮವಾಗಿರಲಿದೆ. ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ 8ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುತ್ತಿದೆ. ಈ ಅವಧಿಯಲ್ಲಿ ನೀವು ಬಯಸಿದ ಫಲಿತಾಂಶ ಸಿಗಲಿದೆ, ವ್ಯಾಪಾರಿಗಳಿಗೂ ಈ ಅವದಿ ಲಾಭದಾಯಕವಾಗಿದೆ, ಈ ಸಮಯದಲ್ಲಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು, ಸಾಲ ಮಾಡಿದ್ದರೆ ಸಾಲ ತೀರಿಸಲು ಈ ಸಮಯ ತುಂಬಾನೇ ಅನುಕೂಲಕರ.
ಇನ್ನು ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಉದ್ಯಮಿಗಳಿಗೂ ಈ ಸಮಯ ತುಂಬಾನೇ ಅನುಕೂಲಕರ, ಕುಟುಂಬದಲ್ಲಿ ನೆಮ್ಮದಿ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications