Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಅಕ್ಟೋಬರ್ 9ರಿಂದ ಗುರುವಿನ ವಕ್ರೀಯ ಚಲನೆ: ಆದರೆ ಈ ರಾಶಿಯವರಿಗೆ ಸಂಪತ್ತಿಗೆ ಕೊರತೆ ಇರಲ್ಲ
ದೇವ ಗುರು ಮೇ 1ಕ್ಕೆ ಮಿಥುನ ರಾಶಿಗ ಸಂಚರಿಸಿದೆ, ಇದೀಗ ಅಕ್ಟೋಬರ್ 9ರಿಂದ ಹಿಮ್ಮಖ ಚಲನೆ ಮಾಡಲಿದೆ, ಹೊಸ ವರ್ಷ ಫೆಬ್ರವರಿ 4ರವರೆಗೆ ಹಿಮ್ಮುಖ ಚಲನೆ ಮಾಡಲಿದೆ. ಗುರು ದೀರ್ಘ ಅವಧಿ ಹಿಮ್ಮುಖ ಚಲನೆ ಮಾಡಲಿದೆ. ಈ ಅವಧಿ ಈ ರಾಶಿಯವರ ಮೇಲೆ ಗುರು ಕೃಪೆ ಹೆಚ್ಚಿರಲಿದೆ. ಈ 5 ರಾಶಿಯವರು ಆರ್ಥಿಕವಾಗಿ ಬೆಳವಣಿಗೆ ಕಾಣುತ್ತೀರಿ:

ಮೇಷ ರಾಶಿ
ಗುರು ಮೂರನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ.ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಬದಲಾವಣೆ ಕಂಡು ಬರುವುದು. ನೀವು ಬಯಸಿದ ವರ್ಗಾಣೆ ಸಿಗಬಹುದು, ಈ ಅವಧಿಯಲ್ಲಿ ಬೇರೆ ಕಡೆ ಕೆಲಸಕ್ಕೆ ಪ್ರಯತ್ನಿಸಿದರೆ ಕೆಲಸ ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭ ದೊರೆಯಲಿದೆ. ಗುರುವಿನ ಹಿಮ್ಮುಖ ಚಲನೆ ನಿಮಗೆ ಆರ್ಥಿಕವಾಗಿ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಹಣವನ್ನು ಉಳಿತಾಯ ಮಾಡಲು ಕೂಡ ಸಾಧ್ಯವಾಗುವುದು. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಕಾಣಬಹುದು. ಇನ್ನು ಗುರು ಸಂಚಾರ ನಿಮ್ಮ ಕುಟುಂಬ ಮೇಲೆ ಕೂಡ ಉತ್ತ ಪ್ರಯೋಜನ ಬೀರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಗುರುವು ಮಿಥುನ ರಾಶಿಯಲ್ಲಿ ಲಗ್ನ ಮನೆಯಲ್ಲಿಯೇ ಹಿಮ್ಮುಖ ಚಲನೆ ಮಾಡುತ್ತಿದೆ. ಈ ಹಿಮ್ಮುಖ ಚಲನೆ ನಿಮಗೆ ಅನುಕೂಲಕರವಾಗಿದೆ. ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ , ಹಣವನ್ನು ಉಳಿಸಲು ಸಾಧ್ಯವಾಗುವುದು. ಸಂಬಂಧದ ಬಗ್ಗೆ ಹೇಳುವುದಾದರೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಆದರೆ ಈ ಬಗ್ಗೆ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು. ಉಳಿದಂತೆ ಈ ಅವಧಿ ಅನುಕೂಲಕರವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಗುರುವು 11ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುತ್ತಿದ್ದು ಈ ಸಂಚಾರ ಅನುಕೂಲಕರವಾಗಿದೆ. ಈ ಅವಧಿ ವೃತ್ತಿ ಬದುಕಿನ ದೃಷ್ಟಿಯಿಂದ ಅನುಕೂಲಕರವಾಗಿದೆ. ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ. ವೃತ್ತಿ ಬದುಕಿನಲ್ಲಿ ನೀವು ಉತ್ತಮ ಪ್ರಗತಿ ಕಾಣುತ್ತೀರಿ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಸಿಗಲಿದೆ, ಈ ಅವಧಿಯಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.ಈ ಸಮಯದಲ್ಲಿ ನಿಮ್ಮ ಕುಟುಂಬ ಜೀವನ ಮತ್ತು ವೈವಾಹಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ ಗುರುವು 9ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುತ್ತದೆ. ಈ ಅವಧಿ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ. ಆಸ್ತಿ ಖರೀದಿಸಲು ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ವೃತ್ತಿ ಬದುಕು ಚೆನ್ನಾಗಿರಲಿದೆ. ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆದರೆ ಮನೆಯ ಸದಸ್ಯರ ಆರೋಗ್ಯ ಸಮಸ್ಯೆಯಿಂದಾಗಿ ಹಣ ಖರ್ಚಗಬಹುದು.
ಮಕರ ರಾಶಿ
ಮಕರ ರಾಶಿಯವರಲ್ಲಿ 6ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುತ್ತಿದೆ. ಗುರುವಿನ ಹಿಮ್ಮುಖ ಚಲನೆ ಸಮಯದಲ್ಲಿ ನೀವು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಆಸ್ತಿ ವ್ಯವಹಾರ ಮಾಡುವುದಾದರೆ ನೀವು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಆರೋಗ್ಯ ಸಮಸ್ಯೆಗೆ ಖರ್ಚು ಹೆಚ್ಚಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
