Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜನವರಿ 12 ದಿನ ಭವಿಷ್ಯ: ಯಾವ ರಾಶಿಯವರಿಗೆ ಈ ದಿನ ಶುಭ ನೋಡಿ!
ಜ್ಯೋತಿಷ್ಯ ಪ್ರಕಾರ ಈ ದಿನದ ಭವಿಷ್ಯ ನೋಡೋಣ:
ಮೇಷ ರಾಶಿ
ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಹಲವು ಬಾರಿ ಆಲೋಚಿಸಿ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿದೆ. ಉದ್ಯೋಗಿಗಳಿಗೆ ಈ ಸಮಯವು ಬಹಳ ಮುಖ್ಯವಾಗಿದೆ. ಆರೋಗ್ಯ ಕೂಡ ಸುಧಾರಿಸಲಿದೆ. ಆಪ್ತರ ಭೇಟಿಯಾಗುವ ಸಾಧ್ಯತೆ ಇದೆ.

ವೃಷಭ ರಾಶಿ
ಮನೆಯ ವಾತಾವರಣದಲ್ಲಿ ನಿಮ್ಮ ಪರವಾದ ಒಲವು ಇರಲಿದೆ. ನಿಮ್ಮ ಕೆಲಸದಲ್ಲಿ ಪ್ರಗತಿ ಇರಲಿದೆ. ದೂರ ಪ್ರಯಾಣಕ್ಕೆ ನೀವು ಸಿದ್ದರಾಬೇಕಾಗಬಹುದು. ಸ್ನೇಹಿತರ ಬಳಗದಲ್ಲಿ ಸಂತಸ ಇರಲಿದೆ. ದಿನದ ಅಂತ್ಯದಲ್ಲಿ ನೀವು ಅನಾರೋಗ್ಯಕ್ಕೆ ತುತ್ತಾಗಬಹುದು.
ಮಿಥುನ ರಾಶಿ
ಇಂದು ನಿಮಗೆ ಸಂತಸದ ಸುದ್ದಿ ಕಾದಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನೋಡಬಹುದು. ಹಿಂದೆ ತೆಗೆದುಕೊಂಡ ಯಾವುದೇ ಪ್ರಮುಖ ನಿರ್ಧಾರದ ಸರಿಯಾದ ಫಲಿತಾಂಶ ಪಡೆಯುತ್ತೀರಿ. ಕೆಲಸದ ವಿಷಯದಲ್ಲಿ ನೋಡುವುದಾದರೆ ಈ ದಿನ ಒತ್ತಡದಿಂದ ಕೂಡಿರಲಿದೆ.
ಕರ್ಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನ ಲಾಭವಿದೆ, ಹೂಡಿಕೆಯ ಕಾರಣಕ್ಕೆ ಖರ್ಚು ಕೂಡ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಅನಗತ್ಯ ವಿಚಾರಗಳಲ್ಲಿ ನಿಮ್ಮ ಪಾಲುದಾರಿಕೆಯಿಂದ ಸಮಸ್ಯೆ ಉಂಟಾಗಬಹುದು. ಹೀಗಾಗಿ ನಿಮ್ಮದಲ್ಲದ ವಿಚಾರಕ್ಕೆ ನೀವು ತಲೆಕೆಡಿಸಿಕೊಳ್ಳಬೇಡಿ.
ಸಿಂಹ ರಾಶಿ
ಭವಿಷ್ಯದ ದೃಷ್ಟಿಯಿಂದ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು. ಆಪ್ತರ ಭೇಟಿಯಾಗುವ ನಿರೀಕ್ಷೆ ಇದೆ. ಸಂಬಂಧಗಳಲ್ಲಿ ವೃದ್ಧಿಯಾಗಲಿದೆ. ಈ ದಿನ ಪ್ರೀತಿ ಪಾತ್ರರ ಜೊತೆ ಸಂತೋಷದಿಂದ ಕಳೆಯಬಹುದು. ಬಹಳ ಕಾಲದಿಂದ ಅಂದುಕೊಂಡಿದ್ದ ಕೆಲವು ಕೆಲಸಗಳನ್ನು ನೀವು ಮತ್ತೆ ಮಾಡಲು ಮುಂದಾಗಬಹುದು. ನಿಮ್ಮ ನಿರ್ಧಾರಗಳು ಫಲ ನೀಡಲಿದೆ.
ಕನ್ಯಾ ರಾಶಿ
ಮಕ್ಕಳಿಗೆ ಸಂಬಂಧಿಸಿದ ಯಾವುದೇ ಪ್ರಮುಖ ಚಿಂತೆ ದೂರಾಗಲಿದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಹೊಸ ವ್ಯಾಪಾರಿಗಳಿಗೆ ಆರಂಭಿಕವಾಗಿ ನಷ್ಟ ಸಂಭವಿಸಬಹುದು. ದಿನದ ಅಂತ್ಯವು ನಿಮಗೆ ಒತ್ತಡ ತರಬಹುದು.
ತುಲಾ ರಾಶಿ
ಕುಟುಂಬಸ್ಥರೊಂದಿಗೆ ನೀವು ಹೊರಗೆ ಹೋಗಬಹುದು. ದಾಂಪತ್ಯದಲ್ಲಿ ಸಾಮರಸ್ಯ ಇರಲಿದೆ. ಹಿಂದೊಮ್ಮೆ ಮಾಡಿದ್ದ ತಪ್ಪು ಮತ್ತೆ ಮರುಕಳಿಸಿ ಸಮಸ್ಯೆಯಾಗಿ ಕಾಡಬಹುದು. ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳಬೇಡಿ. ತಾಳ್ಮೆಯಿಂದ ಇರುವುದು ಬಹಳ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವುದರಿಂದ ನಿರಾಳರಾಗುತ್ತೀರಿ. ವೈವಾಹಿಕ ಜೀವನದಲ್ಲಿ ಕಲಹ ಉಂಟಾಗುವುದು. ವಾಹನ ಸವಾರರು ಎಚ್ಚರಿಕೆಯಿಂದ ಇರಿ. ಹಳೆಯ ವಿಚಾರಕ್ಕೆ ಮನೆಯಲ್ಲಿ ಕಲಹ ಉಂಟಾಗಬಹುದು.
ಧನು ರಾಶಿ
ಈ ದಿನ ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಿದೆ. ಅವಿವಾಹಿತರಿಗೆ ಒಳ್ಳೆಯ ಸುದ್ದಿ ಕೇಳಬಹುದು. ವೈಯಕ್ತಿಕ ಅಥವಾ ವೃತ್ತಿಪರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣುತ್ತೀರಿ. ನಿಮ್ಮ ಉದ್ಯೋಗ ಬದಲಿಸುವ ಕಡೆಗೆ ನೀವಿಂದು ಆಲೋಚಿಸಬಹುದು.
ಮಕರ ರಾಶಿ
ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಬಹಳ ಬುದ್ಧಿವಂತಿಕೆಯಿಂದ ವರ್ತಿಸಿ. ಆಸ್ತಿಗೆ ಸಂಬಂಧಿಸಿದ ಯಾವುದೇ ಪ್ರಯೋಜನವನ್ನು ನೀವು ಪಡೆಯಬಹುದು. ಹಣಕಾಸಿಗೆ ಸಂಬಂಧಿಸಿದ್ದಂತೆ ಎಚ್ಚರಿಕೆಯಿಂದ ವ್ಯವಹಾರ, ಖರ್ಚುಗಳ ಮಾಡಿ.
ಕುಂಭ ರಾಶಿ
ಈ ದಿನ ಹಣದ ವಿಚಾರದಲ್ಲಿ ಆತುರ ಬೇಡ. ಹಳೆಯ ಸ್ನೇಹಿತರನ್ನು ಭೇಟಿಯಾಗಬಹುದು. ನಿಮ್ಮ ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು. ನಿಮಗೆ ಹತ್ತಿರವಾದವರಿಂದ ನೋವುಂಟಾಗುವ ಸಾಧ್ಯತೆ. ಮನೆಯ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗುವ ಸಂಭವವಿದೆ.
ಮೀನ ರಾಶಿ
ಇಂದು ನೀವು ನಿಮ್ಮ ಮನೆಯವರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಹಣಕಾಸಿನ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಹೊಸ ವಸ್ತುವೊಂದು ನಿಮ್ಮ ಮನೆ ಸೇರಬಹುದು. ವಿದ್ಯಾರ್ಥಿಗಳಿಗೆ ಶುಭ ಶುದ್ದಿ ಕಾದಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











