Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಜನವರಿ 13, ದಿನ ಭವಿಷ್ಯ: ದ್ವಾದಶ ರಾಶಿಗಳಲ್ಲಿ ಯಾರಿಗೆ ಶುಭ, ಯಾರು ಜಾಗ್ರತೆವಹಿಸಬೇಕು
ಶುಭೋದಯ... ಸೋಮವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ಮಿಶ್ರಫಲ, ನೀವು ಮಾತಿನ ಕಡೆಗೆ ಗಮನಹರಿಸಿ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿಯೊಂದಿಗಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ಬಜೆಟ್ ಕಡೆ ಗಮನಹರಿಸಬೇಕು, ಅಗ್ಯತ ಮೀರಿ ಖರ್ಚು ಮಾಡಲು ಹೋಗಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ಶುಭ ದಿನ, ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿದೆ,ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸದ ಜಾಗದಲ್ಲಿ ಒಳರಾಜಕೀಯದ ಕಡೆ ಗಮನಹರಿಸಿ, ಸಂಗಾತಿಯ ಜೊತೆಗೆ ಅನಗ್ಯತ ಭಿನ್ನಾಭಿಪ್ರಾಯ ಬೇಡ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಸ್ಥರು ಈ ದಿನ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು, ಉದ್ಯೋಗಿಗಳಿಗೆ ಈ ದಿನ ತುಂಬಾನೇ ಅನುಕೂಲಕರವಾಗಿದೆ, ಇನ್ನು ಕುಟುಂಬದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಮೂರನೇಯ ವ್ಯಕ್ತಿ ಅಭಿಪ್ರಾಯ ಹೇಳಲು ಬಿಡಬೇಡಿ ಅಥವಾ ಅವರ ಅಭಿಪ್ರಾಯ ತೆಗೆದುಕೊಳ್ಳಬೇಡಿ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಶುಭವಾಗಿದೆ, ಈ ದಿನ ನಿಮ್ ಆತ್ಮವಿಶ್ವಾಸ ಚೆನ್ನಾಗಿರಲಿದೆ, ಅನಗ್ಯತ ವಿಚಾರಗಳ ಬಗ್ಗೆ ಚಿಂತಿಸಿ ಮನಸ್ಸು ಹಾಳು ಮಾಡಿಕೊಳ್ಳಬೇಡಿ, ಈ ದಿನ ಮಕ್ಕಳ ಭವಿಷ್ಯದ ಕುರಿತ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು.
ಸಿಂಹ ರಾಶಿ
ಈ ದಿನ ಏರಳಿತದಿಂದ ಕೂಡಿರಲಿದೆ, ಈ ದಿನ ಅನಗ್ಯತ ಖರ್ಚುಗಳು ಬರಬಹುದು, ಆದರೆ ನೀವು ಮನೆ ಖರೀದಿ, ಗಾಡಿ ಖರೀದಿ ಈ ಬಗ್ಗೆ ಚಿಂತೆ ಮಾಡಿದ್ದರೆ ಅದಕ್ಕೆ ಈ ಅವಧಿ ಅನುಕೂಲಕರವಾಗಿದೆ. ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡೊ.
ಕನ್ಯಾ ರಾಶಿ
ಈ ದಿನ ಆದಾಯದ ದೃಷ್ಟಿಯಿಂದ ಉತ್ತಮವಾಗಿದೆ, ಈ ದಿನ ಹಣದ ವಿಷಯದಲ್ಲಿ ಜಾಗ್ರತವಹಿಸಿ, ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ, ಕುಟುಂಬ ಸದಸ್ಯರ ಜೊತೆಗಿನ ಬಾಂಧವ್ಯದಲ್ಲಿ ಸಾಮರಸ್ಯ ಇರಲಿದೆ.
ತುಲಾ ರಾಶಿ
ವ್ಯಾಪಾರಸ್ಥರಿಗೆ ಈ ದಿನ ತುಂಬಾ ಮುಖ್ಯವಾಗಿದೆ, ಈ ದಿನ ನಿಮಗೆ ಉತ್ತಮ ಲಾಭ ಸಿಗಲಿದೆ. ಅಪರಿಚಿತ ವ್ಯಕ್ತಿಯನ್ನು ನಂಬಬೇಡಿ, ಇನ್ನು ಆಸ್ತಿ ಸಂಬಂಧಿತ ವ್ಯವಹಾರ ಮಾಡುವವರು ಜಾಗ್ರತೆವಹಿಸಬೇಕು.
ವೃಶ್ಚಿಕ ರಾಶಿ
ಈ ದಿನ ನೀವು ನಿಮ್ಮ ಕೆಲಸ ಕಾರ್ಯ ಪೂರ್ಣಗೊಳಿಸಲು ಹೆಚ್ಚು ಶ್ರಮ ಹಾಕಬೇಕು, ಈ ದಿನ ಖರ್ಚು ವೆಚ್ಚಗಳನ್ನು ನಿಯಂತ್ರಿಸಿ. ಅನಗ್ಯತ ಚಿಂತೆ ಮಾಡಬೇಡಿ, ಸಂಬಂಧದ ಬಗ್ಗೆ ಹೇಳುವುದಾದರೆ ಚಿಕ್ಕ ವಿಷಯವನ್ನು ದೊಡ್ಡದು ಮಾಡಲು ಹೋಗಬೇಡಿ.
ಧನು ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ. ಈ ದಿನ ನೀವು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು, ಈ ದಿನ ಯಾರಿಗೂ ಏನೂ ಭರವಸೆ ನೀಡಲು ಹೋಗಬೇಡಿ, ನಿಮ್ಮ ಪ್ರಮುಖ ಸಮಸ್ಯೆ ಪರಿಹಾರ ಸಿಗಲಿದೆ.
ಮಕರ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ, ನೀವು ಅನ್ಗಯತ ವಿಷಯಷಗಳ ಕಡೆ ಗಮನಹರಿಸದೆ ನಿಮ್ಮ ಕೆಲಸದತ್ತ ಗಮನಹರಿಸಿ, ಆಸ್ತಿ ಸಂಬಂಧಿಸಿದ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ, ಈ ದಿನ ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿಯೂ ಈ ದಿನ ನಿಮಗೆ ಉತ್ತಮವಾಗಿದೆ, ಬರಬೇಕಾಗಿರುವ ಹಣ ಕೈಸೇರಲಿದೆ. ಇನ್ನು ಬೇರೆ ಕಡೆ ಉದ್ಯೋಗಕ್ಕೆ ಪ್ರಯತ್ನ ಮಾಡಿದ್ದರೆ ಅದಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿ ಪಡೆಯಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಹಣಕಾಸು ಉತ್ತಮವಾಗಿರಲಿದೆ, ಮನೆಯ ಸದಸ್ಯರ ಜೊತೆ ಕೆಲ ಭಿನ್ನಾಭಿಪ್ರಾಯವಿರಬಹುದು, ನೀವು ಕೋಪದಿಂದ ವರ್ತಿಸಬೇಡಿ ಎಂದು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
